ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಾ ? ಎಂಬ ಕುತೂಹಲ ಕೆರಳಿಸಿದೆ. ಕಳೆದ ತಿಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ, ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …
Read More »ಮಾಜಿ ಸೈನಿಕರಿಂದ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರಿಗೆಮನವಿ
ಹುಕ್ಕೇರಿ: ಮೊದಗಾ ಗ್ರಾಮದ ಯುವಕರಿಗೆ ಸೈನಿಕ ತರಬೇತಿ ನೀಡಲು, ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರಿಯ 20 ಗುಂಟೆ ಜಾಗ ನೀಡಬೇಕೆಂದು ಆಜಿ-ಮಾಜಿ ಸೈನಿಕ ಕಲ್ಯಾಣ ಸಂಘ ಪದಾಧಿಕಾರಿಗಳು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಇಂದು ಮನವಿ ಸಲ್ಲಿಸಿದರು. ಮೊದಗಾ ಗ್ರಾಮದಲ್ಲಿ ಅನೇಕ ನಿವೃತ್ತ ಸೈನಿಕರು ಇದ್ದಾರೆ. 58ಕ್ಕೂ ಹೆಚ್ಚು ಜನರು ದೇಶ ಸೇವೆಗಾಗಿ ಬೇರೆ ಬೇರೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದ ಅನೇಕ ಯುಕವರು ದೇಶ ಸೇವೆ ಮಾಡಲು ಉತ್ಸೂಕರಾಗಿದ್ದಾರೆ. ಆದ ಕಾರಣ …
Read More »ಮೆಳವಂಕಿ ಸೇತುವೆ ಬಳಿ 15 ದಿನದಲ್ಲಿ ಬೈಪಾಸ್ ರಸ್ತೆ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಾರ್ವಜನಿಕರ ರಸ್ತೆ ಸಂಚಾರ ಸುಗಮಕ್ಕಾಗಿ ಕುಸಿದಿರುವ ಮೆಳವಂಕಿ ಸೇತುವೆ ಬಳಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬುಧವಾರದಂದು ಗುದ್ದಲಿ ಪೂಜೆ ನೆರವೇರಿಸಲಾಯಿತು. ಜಿ.ಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಕಳೆದ ಸೋಮವಾರದಂದು ಬೆಳಗಿನ ಜಾವ ಮೆಳವಂಕಿ ಸೇತುವೆ ಕುಸಿದು ಬಿದ್ದಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಗೋಕಾಕದಿಂದ ಕೌಜಲಗಿ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಇದರಿಂದ ತುಂಬ ತೊಂದರೆಯಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »ಕೋವಿಡ್-೧೯ ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ …
Read More »ಲಂಚ ಪಡೆಯುತ್ತಿದ್ದ ವಿಶೇಷ ಭೃಷ್ಟ ಮಹಿಳಾ ತಹಶೀಲ್ದಾರ್ ಎಸಿಬಿ ಬಲೆಗೆ!
ಬೆಂಗಳೂರು,ಅ.6: ಬರೋಬರಿ 5 ಲಕ್ಷ ಲಂಚ ಪಡೆಯುವ ವೇಳೆ ನಗರದ ಮಹಿಳಾ ವಿಶೇಷ ತಹಶೀಲ್ದಾರ್ ಒಬ್ಬರು ಭ್ರಷ್ಟಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೆಜಿ ರಸ್ತೆಯಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೆಡ್ …
Read More »ಊಟ ಮಾಡಿಸಿ ಕೈ ತೊಳೆಯಲು ಹೋದ ಅಮ್ಮ – ಮಹಡಿಯಿಂದ ಬಿದ್ದು ಕಂದಮ್ಮ ಸಾವು
ಮಂಡ್ಯ: ತಾಯಿ ಮಗುವಿಗೆ ಊಟ ಮಾಡಿಸಿ ಕೈ ತೊಳೆಯಲು ಹೋದ ವೇಳೆ ಮೂರು ವರ್ಷದ ಕಂದಮ್ಮ ಮಹಡಿಯ ಮೇಲಿಂದ ಬಿದ್ದು ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿ. ರಾಜಕುಮಾರ್ ಬಡಾವಣೆಯಲ್ಲಿ ಸತೀಶ್ ಅವರದ್ದು ಮಹಡಿಯ ಮನೆಯಾಗಿದೆ. ಎಂದಿನಂತೆ ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ ಊಟ ಮಾಡಿಸಿದ್ದಾರೆ. ನಂತರ …
Read More »ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸಿಎಂ ಭೇಟಿ; ಕುಟುಂಬಕ್ಕೆ ಸಾಂತ್ವನ
ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ …
Read More »ಒತ್ತಡಕ್ಕೆ ಮಣಿಯದೆ ಧೈರ್ಯದಿಂದ ಪಕ್ಷ ಸಂಘಟಿಸಿ:ಗೋಕಾಕ ಕೈ ಕಾರ್ಯಕರ್ತರಿಗೆ ಸತೀಶ ಜಾರಕಿಹೊಳಿ ಕರೆ
ಗೋಕಾಕ: ಯಾವುದೇ ಒತ್ತಡಕ್ಕೆ ಮಣಿಯದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೈರ್ಯದಿಂದ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಗೋಕಾಕ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಸೂಚಿಸಿದರು. ಇಂದು ಗೋಕಾಕ ಕ್ಷೇತ್ರದ ಅಂಕಲಗಿ-ಅಕ್ಕತಂಗೇರಹಾಳ ಮತ್ತು ಖನಗಾಂವ್ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಡೆದ ಉಪಚುನಾವಣೆ ನಂತರ ಕೊರೋನಾ ಹಿನ್ನಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ …
Read More »ಮೆಳವಂಕಿ ಸೇತುವೆ ಕುಸಿತ ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
ಗೋಕಾಕ: ಮೆಳವಂಕಿ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಇಂದು ಬೆಳಗಿನ ಜಾವ ಸೇತುವೆ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿರುವ ಅವರು, ಕೂಡಲೇ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ಹಹಿಸಿ ಬೈಪಾಸ್ ರಸ್ತೆ ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ನಾಳೆಯಿಂದಲೇ ಕೆಲಸ ಆರಂಭಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ …
Read More »ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ
ಗೋಕಾಕ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಗೋಕಾಕ ನಗರದಲ್ಲಿ ಭಾನುವಾರ ರಾತ್ರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ …
Read More »