Breaking News

ಜಿಲ್ಲೆ

ಸರ್ಕಾರ-ಬೆಳಗಾವಿ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಶೀಘ್ರವೇ ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಸ್ಥಾಪಿಸಿ :ಕರವೇ ಆಗ್ರಹ

ಬೆಳಗಾವಿ : ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಬಗೆ ಹರಿಸಲು ಜಿಲ್ಲಾಧಿಕಾರಿಗಳು ಮದ್ಯಸ್ಥಿಕೆ ವಹಿಸಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಕರವೇ ಜಿಲ್ಲಾದ್ಯಕ್ಷ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕರವೇ ಪದಾಧಿಕಾರಿಗಳು, ಐತಿಹಾಸಿಕ ಬೆಳಗಾವಿ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬ್ರಿಟಿಷರ ವಿರುದ್ಧ ಹೋರಾಡಿ ಬ್ರಿಟಿಷ್ ಅಧಿಕಾರಿಗಳನ್ನೇ ನಡುಗಿಸಿದ ಕ್ರಾಂತಿವೀರ,ಶೂರ,ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಪೀರನವಾಡಿಯ ಮುಖ್ಯ ಸರ್ಕಲ್ ನಲ್ಲಿ ಪ್ರತಿಷ್ಠಾಪನೆ ಮಾಡುವ ಕುರಿತು ರಾಯಣ್ಣನ …

Read More »

ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಕುರಿಗಳ ಮೇಲೆ ಕಾರು ಹಾಯ್ದು ಪರಿಣಾಮ, 40 ಕುರಿಗಳು ಸ್ಥಳದಲ್ಲಿಯೇ ಸಾವು !

ಬೆಳಗಾವಿ : ಕುರಿಗಳ ಮೇಲೆ ಕಾರೊಂದು ಹರಿದ ಪರಿಣಾಮ 38ಕ್ಕೂ ಹೆಚ್ಚಿನ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಉಳಿಗೇರಿ ಗ್ರಾಮದ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಹೊಳಿನಾಗಲಾಪುರ ಗ್ರಾಮದ ಕುರಿಗಾಹಿ ಯಲ್ಲಪ್ಪ ಬಿಜ್ಜನ್ನವರ್ ಎಂಬುವರಿಗೆ ಸೇರಿದ್ದ ಕುರಿಗಳು ಸಾವನ್ನಪ್ಪಿವೆ. ಪ್ರತೀ ವರ್ಷ ಮೇವಿಗಾಗಿ ಕುರಿಗಳೊಂದಿಗೆ ವಲಸೆ ಹೋಗುತ್ತಿದ್ದರು. ಸವದತ್ತಿಯಿಂದ ಚಿಕ್ಕ ಉಳಿಗೇರ ರಸ್ತೆ ಮೂಲಕ‌ ನರಗುಂದ ಕಡೆಗೆ ಹೋಗುವ ಸಂದಭರ್ದಲ್ಲಿ ಚಿಕ್ಕ ಉಳಿಗೇರಿ ಗ್ರಾಮದ ಬಳಿ ಆ. 23ರಂದು ಬೆಳಗಿನ ಜಾವ ಅಪಘಾತ …

Read More »

ಅತಿವೃಷ್ಟಿ: ಜಿಲ್ಲೆಯಲ್ಲಿ 972 ಕೋಟಿ ಹಾನಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ !

ಬೆಳಗಾವಿ : ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ ಸೋಮವಾರ (ಆ.24) ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪ್ರವಾಹ …

Read More »

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ!

ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಹಾಗೂ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೋಟ್ಯಾಂತರ ರೂ.ಗಳ …

Read More »

ಸಿಎಂ ಬರ್ತಾರೆ ಅಂತಾ ದಿಢೀರ್ ಅಂತ ಗ್ರಾಮಕ್ಕೆ ಅಧಿಕಾರಿಗಳ ಎಂಟ್ರಿ : ಆಕ್ರೋಶಗೊಂಡ ನೆರೆ ಸಂತ್ರಸ್ತರು!!

ಅಥಣಿ:   ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ  ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ  ಈವರೆಗೂ ಪ್ರವಾಹ ಪೀಡಿತ ಗ್ರಾಮಗಳತ್ತ ಸುಳಿಯದ ಅಧಿಕಾರಿಗಳು ಇಂದು ದಿಢೀರ್ ಪ್ರತ್ಯಕ್ಷವಾಗಿ ಸಂತ್ರಸ್ತರ ಕುಂದು ಕೊರತೆ ಆಲಿಸುತ್ತಿರುವುದು ಕಂಡು ಬಂದಿದೆ. ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ  ಹಲಗಬಾಳಿ ಗ್ರಾಮಕ್ಕೆ ಚಿಕ್ಕೋಡಿ ಎಸಿ ರವೀಂದ್ರ ಕರಲಿಂಗಣ್ಣವರ,  ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ, ತಾಪಂ ಇಒ ರವಿ ಬಂಗಾರಪ್ಪನವರ ಜೊತೆಯಾಗಿ …

Read More »

ತಮ್ಮ ಜಮೀನಲ್ಲಿ ರೈತ ಬೆಳೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ಶಿವಮೊಗ್ಗ, : ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಸೊರಬ ತಾಲೂಕಿನ ಯಲವಾಳ ಗ್ರಾಮದ ತಮ್ಮ ಜಮೀನಿನಲ್ಲಿ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದರು. ಜಮೀನಿನಲ್ಲಿ ನಿಂತು ಬೆಳೆ ವಿವರ ಸರ್ವೆ ನಂಬರ್ ಸೇರಿದಂತೆ ಜಮೀನಿನಲ್ಲಿನ‌ ತಮ್ಮ ಭಾವಚಿತ್ರವನ್ನು ಆ್ಯಪ್‌ನಲ್ಲಿ ಅಪ್ಲೋಡ್‌ ಮಾಡಿ ನೆರೆದಿದ್ದ ರೈತರಿಗೆ ಮಾದರಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಸಿ.ಪಾಟೀಲ ರೈತನ ಬೆಳೆ ರೈತನ ಹಕ್ಕಾಗಿದೆ. ಇದು ದೇಶದಲ್ಲಿ ಮೊದಲ ಬಾರಿಗೆ ರೈತನೇ ಸ್ವತಃ ತನ್ನ ಹೊಲದ …

Read More »

ಫಿರಣವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಗೆ ಒತ್ತಾಯಿಸಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ಮನವಿ.!

ಗೋಕಾಕ್ :ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಹಾಲುಮತ ಮಹಾಸಭಾ ಸಂಘದ ವತಿಯಿಂದ ಫಿರಣವಾಡಿಯಲ್ಲಿ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆ ಮಾಡಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ರವಿವಾರದಂದು ಸಚಿವರ ಗೃಹಕಚೇರಿಯಲ್ಲಿ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮಾಜಿ ರಾಜಾದ್ಯಕ್ಷರಾದ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಸಂಗೋಳ್ಳಿ ರಾಯಣ್ಣ ಯಾವುದೇ ಜಾತಿಗೆ, ಭಾಷೆಗೆ ಸೀಮಿತವಾದ ವ್ಯಕ್ತಿಯಲ್ಲ, ರಾಯಣ್ಣ ದೇಶದ ಆಸ್ತಿ, ರಾಯಣ್ಣನ …

Read More »

ವೈದ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಪ್ರಕರಣ ; ಜಿ.ಪಂ. ಸಿಇಒ ಪ್ರಶಾಂತ್ ಮಿಶ್ರಾ ವರ್ಗಾವಣೆ: ಜಿಲ್ಲಾಧಿಕಾರಿಗೆ ಹೆಚ್ಚುವರಿ ಹೊಣೆ

ಮೈಸೂರು: ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಜಿಲ್ಲಾ ಪಂಚಾಯತ್‌ ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯಕ್ಕೆ, ಮೈಸೂರು ಜಿಲ್ಲಾಧಿಕಾರಿಯಾದ ಅಭಿರಾಮ್‌ ಜಿ ಶಂಕರ್‌ ಅವರಿಗೆ ಹೆಚ್ಚಿನ ಹೊಣೆಯನ್ನು ನೀಡಲಾಗಿದ್ದು ಜಿಲ್ಲಾ ಪಂಚಾಯತ್‌ ಸಿಇಒ ಆಗಿ ನೇಮಿಸಲಾಗಿದೆ. ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬರುತ್ತದ್ದಂತೆಯೇ, ಪ್ರಶಾಂತ್‌ ಕುಮಾರ್‌ …

Read More »

ಮಂಗಳವಾರ ಬೆಳಗಾವಿಗೆ ಸಿಎಂ ಬಿ ಎಸ್ ಯಡಿಯೂರಪ್ಪ ಆಗಮನ!

ಬೆಂಗಳೂರು : ಭಾರೀ ಮಳೆಯಿಂದಾಗಿ ರಾಜ್ಯದ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಹಾನಿ ಸಂಭವಿಸಿದ್ದು, ಈ ಕುರಿತು ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್‍ಎಎಲ್‍ನಿಂದ ಬೆಳಗಾವಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ …

Read More »

ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಬಿ ಎಲ್ ಸಂತೋಷ್ ಅವರು ಶ್ರೀ ಗೌರಿ ಗಣೇಶ್ ಹಬ್ಬ ಆಚರಣೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆ ಬಿ.ಎಲ್. ಸಂತೋಷ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿಸಿ ಗಣೇಶ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆತ್ಮೀಯರೂ ಆಗಿರುವ ಬಿ.ಎಲ್. ಸಂತೋಷ್ ಅವರನ್ನು ಇಂದು ಮನೆಗೆ ಆಹ್ವಾನಿಸಿ …

Read More »