ಗೋಕಾಕ : ಕ್ಷಣ-ಕ್ಷಣಕ್ಕೂ ಕೊರೋನಾ ವೈರಸ್ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಲಿರುವ ಸಾರ್ವಜನಿಕ ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ. ನಾಳೆ ಶನಿವಾರದಂದು ದೇಶದಾದ್ಯಂತ ಗಣೇಶ ಉತ್ಸವ ಜರುಗಲಿದ್ದು, ಕೊರೋನಾ ಮಹಾಮಾರಿಯಿಂದಾಗಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ್ರತಿಯೊಬ್ಬರು ಮಾಸ್ಕ್ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ …
Read More »ಕಂದಾಯ ಸಚಿವರು ಬೆಂಗಳೂರು ಬಿಟ್ಟು ಹೊರಗೆ ಬರಲಿ- ಸತೀಶ್ ಜಾರಕಿಹೊಳಿ
ಬೆಳಗಾವಿ: ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ವಿಫಲವಾಗಿದೆ. ಕಳೆದ ಬಾರಿಯೂ ಪ್ರವಾಹ ಪರಿಹಾರ ಕೊಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಪ್ರವಾಹ ಸೇರಿ ಎಲ್ಲ ವಿಷಯಗಳ ಚರ್ಚೆಗಾಗಿ ಅಧಿವೇಶನ ಕರೆಯುವಂತೆ ಒತ್ತಾಯ ಮಾಡಿದ್ದೇವೆ. ಅಧಿವೇಶದಲ್ಲಿ ಸರ್ಕಾರದ ವೈಫಲ್ಯಗಳ ಬಗ್ಗೆ ಧ್ವನಿ ಎತ್ತುವುದಾಗಿ ಹೇಳಿದರು. ಕಂದಾಯ ಸಚಿವರು ಬೆಂಗಳೂರು ಬಿಡಲಿ! ಕಳೆದ ಬಾರಿ ಭಾರೀ ಪ್ರವಾಹದಿಂದ ಮನೆ ಕಳೆದುಕೊಂಡ …
Read More »ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬಿಎಸ್ ಯಡಿಯೂರಪ್ಪ || ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಾಥ್ ||
ಮಂಡ್ಯ: ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ದಾರೆ. ಸತತ 5 ಬಾರಿ ಸಿಎಂ ಬಿಎಸ್ವೈ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಇದರೊಂದಿಗೆ ಕಾವೇರಿ ನದಿಗೆ ಅತೀ ಹೆಚ್ಚು ಸಲ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಬಳಿಕ ಸಿಎಂ ಬಿಎಸ್ವೈ ಎಚ್.ಡಿ.ಕೋಟೆಯ ಕಬಿನಿ ಜಲಾಶಯಕ್ಕೆ ಭೇಟಿ ನೀಡಿದರು. ಅಲ್ಲಿಯೂ ಸಹ ಕಬಿನಿ …
Read More »ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ವಿರೋಧ ಖಂಡಿಸಿ : ಪ್ರತಿಭಟನೆ
ಗೋಕಾಕ: ಬೆಳಗಾವಿಯ ಪೀರನವಾಡಿ ವೃತ್ತದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ಘಟಪ್ರಭಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಪೀರಣವಾಡಿ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿದ್ದು, ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ವಾತಂತ್ರ್ಯ …
Read More »ರಾಕೇಟ್ ಕಾರ್ಖಾನೆಗೆ ಎಚ್ಚರಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ನದಿಗೆ ಬಿಟ್ಟರೆ ಕಾನೂನು ಕ್ರಮ ಗೋಕಾಕ : ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ …
Read More »KMF ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಸೂಚನೆ ಮೇರೆಗೆ ಕಾಳಜಿ ಕೇಂದ್ರದ ಜನರಿಗೆ ಅವಶ್ಯ ವಸ್ತುಗಳ ವಿತರಣೆ
ಗೋಕಾಕ : ಅರಭಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಮೇರೆಗೆ ಅವರ ಆಪ್ತ ಸಹಾಯಕರು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಮೂಲ ಸೌಕರ್ಯ ಒದಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನದಿ ದಡದ ಗ್ರಾಮಸ್ಥರಿಗೆ ಪ್ರವಾಹದ ಆಂತಕ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಲಹೆ ಮೇರೆಗೆ ಆಪ್ತ ಸಹಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಸೇರಿ ಕಾಳಜಿ ಕೇಂದ್ರದಲ್ಲಿ ಇರುವವ ಜನರಿಗೆ ಮೂಲ ಸೌಕರ್ಯ …
Read More »ಗೋಕಾಕ, ರಾಮದುರ್ಗ, ಸವದತ್ತಿ ಪರಿಹಾರ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ, ಪರಿಶೀಲನೆ
ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. ನೀರು …
Read More »ನದಿ ತೀರದ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಕ್ರಮ : ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಿಡಕಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು, ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಿದ್ದರಿಂದ ನದಿ ತೀರದ ಗ್ರಾಮಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಸಂಜೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ …
Read More »ಎಂ.ಕೆ ಹುಬ್ಬಳ್ಳಿ ಘಟನೆ, ಅಮಾನವೀಯ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತಕ್ಕೆ :ಸಚಿವ ರಮೇಶ್ ಜಾರಕಿಹೊಳಿ ಸೂಚನೆ.
ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಮೃತವ್ಯಕ್ತಿಯೊಬ್ಬರ ಶವವನ್ನು ಸೈಕಲ್ ಮೇಲೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿರುವ ವರದಿಯನ್ನು ಗಮನಿಸಿದ್ದೇನೆ. ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು. ಮೃತರ ಸಂಸ್ಕಾರವನ್ನೂ ಗೌರವಯುತವಾಗಿ ಮಾಡಬೇಕು. ಮಹಾಮಾರಿ ಕೊರೋನಾ ಸೋಂಕಿನಿಂದಾಗಲೀ, ಬೇರೆ ಯಾವುದೇ ರೀತಿಯ ಅನಾರೋಗ್ಯದಿಂದ ಮೃತರಾದ ವ್ಯಕ್ತಿಗಳ ಅಂತ್ಯಕ್ರಿಯೆಗೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು. *ಮಾಧ್ಯಮಗಳ ವರದಿ* ಗಳನ್ನು ಗಮನಿಸಿ *ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ* ಗಳೊಂದಿಗೆ ಮಾತನಾಡಿದ್ದೇನೆ. ಇಂತಹಾ …
Read More »ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ || ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಜಿಲ್ಲಾಡಳಿತಕ್ಕೆ : ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೂಚನೆ.
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.ಇದರಿಂದಾಗಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೇ ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲುತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ …
Read More »