ಗೋಕಾಕ ಮೇ 12 : ಗೋಕಾಕ ಶೈಕ್ಷಣಿಕ ವಲಯದಲ್ಲಿ ಬಳಕೆಗೆ ಯೋಗ್ಯವಲ್ಲದ ಶಾಲಾ ಕೊಠಡಿಗಳನ್ನು ಗುರುತಿಸಿ ಅವುಗಳನ್ನು ದುರುಸ್ಥಿ ಮಾಡಿ, ಪ್ರಾಥಮಿಕ ತರಗತಿಗಳಲ್ಲಿಯೂ ಸಹ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರದಂದು ನಗರದಲ್ಲಿ ಪ್ರತಿಭಟನೆ ನಡೆಸಿ ದೈಹಿಕ ಶಿಕ್ಷಣ ಪರಿವೀಕ್ಷಕ ಎಲ್.ಕೆ ತೋರನಗಟ್ಟಿ ಅವರಿಗೆ ಮನವಿ ಅರ್ಪಿಸಿದರು. ಇದೇ ತಿಂಗಳು 15 ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ ನಡೆಯಲಿದ್ದು, ಸರಕಾರ ಪ್ರಸ್ತುತ ಶೈಕ್ಷಣಿಕ ವರ್ಷದ …
Read More »ರಾಜಋಷಿ ಮಹರ್ಷಿ ಭಗೀರಥ ಅವರ ಪ್ರಯತ್ನ, ಛಲ ಯುವ ಜನತೆಗೆ ಸ್ಪೂರ್ತಿ: ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ರಾಜಋಷಿ ಮಹರ್ಷಿ ಭಗೀರಥ ಜಯಂತಿ ಆಚರಿಸಿದರು. ಈ ವೇಳೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮಾತನಾಡಿ ಶ್ರೀ ರಾಜಋಷಿ ಮಹರ್ಷಿ ಭಗೀರಥ ಅವರು ತನ್ನ ಪೂರ್ವಜರಿಗೆ ಮೋಕ್ಷ ನೀಡುವ ಉದ್ದೇಶದಿಂದ, ಗಂಗೆಯನ್ನು ಭೂಮಿಗೆ ತರಲು ತಪಸ್ಸು ಕೈಗೊಂಡರು. ತಮ್ಮ ಸತತ ಪ್ರಯತ್ನ, ತಪಸ್ಸು ಹಾಗೂ ಛಲದಿಂದ ಗಂಗೆಯನ್ನು ಭೂಮಿಗೆ ತಂದರು. ಅಂತಹ ರಾಜಋಷಿ …
Read More »ಬೇಡಿಕೆ ಈಡೇರಿಸಿದ ಶಾಸಕ ಸತೀಶ್ ಜಾರಕಿಹೊಳಿಯವರಿಗೆ ಸನ್ಮಾನ
ಯಮಕನಮರಡಿ: ಬಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಸ್ತೆ ಸಂಪರ್ಕ ಕಲ್ಪಿಸಿದ್ದಕ್ಕಾಗಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬಂದಿ, ಬಸಾಪುರ ಗ್ರಾಮಸ್ಥರು ಸತ್ಕರಿಸಿದರು. ಯಮಕನಮರಡಿ ಮತಕ್ಷೇತ್ರದ ಬಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಸ್ತೆ ಸಂಪರ್ಕ ಕಲ್ಪಿಸುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಕುರಿತು ಬಸಾಪುರ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮನವಿ …
Read More »ಸನ್ಮಾನದ ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಬೆಳಗಾವಿ, ಮೇ 2(ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವಿವಿಧ ಸಂದರ್ಭಗಳಲ್ಲಿ ತಮಗೆ ಸನ್ಮಾನದ ರೂಪದಲ್ಲಿ ಬಂದಿದ್ದ ನೂರಾರು ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡುವುದರ ಜತೆಗೆ ಆಶ್ರಮದ ಹಿರಿಯ ಜೀವಗಳ ಜತೆಗೆ ಊಟ ಮಾಡಿ ಕೆಲಹೊತ್ತು ಸಂಭ್ರಮದಿಂದ ಕಳೆದರು. ನಗರದ ಬಮನವಾಡಿಯಲ್ಲಿ ಸಮಾಜ ಸೇವಕ ಹಾಗೂ ಮಾಜಿ ಮಹಾಪೌರ ವಿಜಯ್ ಮೋರೆ ಅವರು ನಡೆಸುತ್ತಿರುವ ಶಾಂತಾಯಿ ವೃದ್ಧಾಶ್ರಕ್ಕೆ ಸೋಮವಾರ (ಮೇ 2) ಭೇಟಿ ನೀಡಿದ ಜಿಲ್ಲಾಧಿಕಾರಿಗಳು ನೂರಾರು ಶಾಲುಗಳನ್ನು ಆಶ್ರಮದ ನಿವಾಸಿಗಳಿಗೆ …
Read More »ವಿಶ್ವ ಗುರು ಜಗಜ್ಯೋತಿ ಬಸವೇಶ್ವರ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಯುವ ನಾಯಕರು ಭಾಗಿ!
ಗೋಕಾಕ: 12ನೇ ಶತಮಾನದ ವಿಷಮ ಪರಿಸ್ಥಿತಿಯಲ್ಲಿ ಜಾತ್ಯಾತೀತ ಸಮಾಜ ನಿರ್ಮಾಣ, ಮಹಿಳೆಯರಿಗೆ ಸಮಾನತೆ ನೀಡಿ ಸಾಮಾಜಿಕ ಬದಲಾವಣೆ ತರಲು ಶ್ರಮಿಸಿದ ವ್ಯಕ್ತಿ ಬಸವಣ್ಣನವರು. ಪ್ರಸ್ತುತ ಸಮಾಜದಲ್ಲಿ ಬಸವಣ್ಣನವರ ಚಿಂತನೆ, ಆಚಾರ-ವಿಚಾರಗಳು, ತತ್ತ್ವಾದರ್ಶಗಳ ಪಾಲನೆ ಆಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲೂಕಿನ ರಡೇರಟ್ಟಿ ಗ್ರಾಮದಲ್ಲಿ ವಿಶ್ವ ಗುರು ಜಗಜ್ಯೋತಿ ಬಸವೇಶ್ವರ ಪ್ರತಿಮೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಸುಂದರ …
Read More »ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ವತಿಯಿಂದ ಅಪ್ಪು ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಹಾಗೂ ಪುಷ್ಪಾರ್ಚನೆ!
ಗೋಕಾಕ : ಮೊನ್ನೆಯ ದಿನ ತಿರುಪತಿ ತಿಮ್ಮಪ್ಪನ ದೇವಸ್ಥಾನದ ಹತ್ತಿರ ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಿವಿ ರಾಘವೇಂದ್ರ ಅವರು ಹೋದಾಗ ಅಲ್ಲಿ ಅಲ್ಲಿಯ ಕೆಲ ಭದ್ರತಾ ಸಿಬ್ಬಂದಿಗಳು ಡಾಕ್ಟರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ವಾಹನದ ಮೇಲೆ ಇರುವ ಸ್ಪೀಕರನ್ನು ತೆಗೆದುಹಾಕಿದರೆ ಮಾತ್ರ ನಿಮ್ಮ ವಾಹನವನ್ನು ಮೇಲೆ ಹೋಗಲು ಬಿಡುತ್ತೇವೆ ಇಲ್ಲವಾದರೆ ಬಿಡುವುದಿಲ್ಲ ಎಂದು ಹಾಗೂ ಕನ್ನಡ ಶಲ್ಯ ಡೆಪಾಸಿಟ್ ಮಾಡಿದರೆ ಮಾತ್ರ ವಾಹನ ಬಿಡುತ್ತೇವೆ ಎಂದು ಪವರ್ …
Read More »ಎಲ್ಲರೂ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಿ : ಪಿಎಸ್ಐ ಕೆ ವಾಲಿಕಾರ
ಶಿವ-ಬಸವ ಜಯಂತಿ ಹಾಗೂ ರಮಜಾನ ಹಬ್ಬದ ಶಾಂತಿ ಪಾಲನಾ ಸಭೆ. ಗೋಕಾಕ : ಗೋಕಾಕ ನಗರ ಪೊಲೀಸ ಠಾಣೆಯಲ್ಲಿ ಶಿವ-ಬಸವ ಜಯಂತಿ ಹಾಗೂ ರಮಜಾನ ಹಬ್ಬದ ನಿಮಿತ್ಯ ಪೂರ್ವಭಾವಿ ಸಭೆಯನ್ನು ಪಿಎಸ್ಐ ಕೆ ವಾಲಿಕಾರ ಅವರು ನಡೆಸಿದರು. ಶಿವ-ಬಸವ ಜಯಂತಿ ಹಾಗೂ ರಮಜಾನ ಹಬ್ಬಗಳ ಆಚರಣೆ ವೇಳೆಯಲ್ಲಿ ಸಮಾಜದಲ್ಲಿ ಶಾಂತಿ ಕಾಪಾಡುವ ಜವಾಬ್ದಾರಿ ನಾಗರಿಕರ ಮೇಲಿದೆ, ಎಲ್ಲರೂ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಿ ಎಂದು ಪಿಎಸ್ಐ ಕೆ ವಾಲಿಕಾರ ಅವರು ಹೇಳಿದರು. …
Read More »ಗೋಕಾಕದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಯೋಜನೆಯನ್ನು ಶಾಸಕ ರಮೇಶ ಜಾರಕಿಹೊಳಿ ಹೊಂದಿದ್ದಾರೆ : ವಿಪ ಸದಸ್ಯ ಲಖನ್ ಜಾರಕಿಹೊಳಿ
ಗೋಕಾಕ : ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರ ಉತ್ತಮ ಕಾರ್ಯಮಾಡುತ್ತಿದ್ದು, ಆಯುಷ್ಯಮಾನ ಇಲಾಖೆಯಲ್ಲಿ ಗೋಕಾಕ ಸರಕಾರಿ ಆಸ್ಪತ್ರೆ ರಾಜ್ಯಕ್ಕೆ 2 ನೇ ಸ್ಥಾನ ಪಡೆದಿದೆ. ಸರಕಾರಿ ಆಸ್ಪತ್ರೆ ಉತ್ತಮವಾಗಿ ಕಾರ್ಯನಿರ್ವಹಿಸಲು ಶಾಸಕ ರಮೇಶ ಜಾರಕಿಹೊಳಿ ಅವರು ಮುತುವರ್ಜಿ ವಹಿಸಿ ಕಾರ್ಯ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು . ಶುಕ್ರವಾರದಂದು ನಗರದ ಸರಕಾರಿ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ …
Read More »ಉಚಿತ ಆರೋಗ್ಯ ಮೇಳ” ಕಾರ್ಯಕ್ರಮಕ್ಕೆ ಜಾರಕಿಹೊಳಿ, ಕಡಾಡಿ ಚಾಲನೆ!
ಗೋಕಾಕ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳವನ್ನು ವಿಧಾನ ಪರಿಷತ್ತ ಸದಸ್ಯರಾದ ಲಖನ್ ಜಾರಕಿಹೊಳಿ ಹಾಗೂ ರಾಜ್ಯ ಸಭಾ ಸದಸ್ಯರಾದ ಈರಣ್ಣಾ ಕಡಾಡಿ ಅವರು ಚಾಲನೆ ನೀಡಿದರು. ದೇಶ ಹಾಗೂ ಸಮಾಜ ಸುಭದ್ರವಾಗಿರಲು ಆರೋಗ್ಯ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ ಸಮಾಜದ ಕಟ್ಟ ಕಡೆ ಮನುಷ್ಯನಿಗೂ ಸುಲಭವಾಗಿ ಆರೋಗ್ಯ ಸೇವೆ ನೀಡಲು ಮುಂದೆ ಬಂದಿದೆ. ಆಯುಷ್ಮಾನ ಭಾರತ ಸೇರಿದಂತೆ ಅನೇಕ ಕಾರ್ಯಕ್ರಮದ ಮೂಲಕ ಜನರಿಗೆ …
Read More »ಬಿಲ್ ಮಂಜೂರಿಗಾಗಿ ಗುತ್ತಿಗೆದಾರನಿಂದ ಲಂಚ ಪಡೆದ ಎಇ!
ಕಲಬುರಗಿ: ಅಧಿಕಾರಿಯೊಬ್ಬರು ರಾಜಾರೋಷವಾಗಿ ಲಂಚ ಪಡೆಯುತ್ತಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗಗೊಂಡಿದೆ. ಗುತ್ತಿಗೆದಾರನಿಂದ ಪಿಡಬ್ಲ್ಯೂಡಿ ಎಇ ಲಂಚ ಪಡೆಯುತ್ತಿರುವ ದೃಶ್ಯ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಅಧಿಕಾರಿ ಲಂಚ ಪಡೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಚಿಂಚೋಳಿ ತಾಲೂಕಿನ ಪೋತಂಗಲ ಗ್ರಾಮದಲ್ಲಿ ನಡೆದ ಒಂದು ಕೋಟಿ ರೂ ವೆಚ್ಚದ ರಸ್ತೆ ಕಾಮಗಾರಿಗೆ ಲಂಚ ನೀಡುವಂತೆ ಅಧಿಕಾರಿ ಬೇಡಿಕೆ ಇಟ್ಟಿದ್ದರಂತೆ. ಅದರಂತೆ, ಇಂದು ಬೈಕ್ ಮೇಲೆ ಕಲಬುರಗಿ …
Read More »