ಮೂಡಲಗಿ : ಶಿಕ್ಷಕರಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ ಸರ್ವತೋಮುಖ ಏಳ್ಗೆಗಾಗಿ ಪ್ರಥಮ ಪ್ರಾಶಸ್ತ್ಯ ನೀಡಲಾಗಿದೆ. …
Read More »ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶಿಕ್ಷಕರ ದಿನಾಚರಣೆ ಆಚರಿಸಿದ ರಾಹುಲ್, ಪ್ರೀಯಾಂಕ ಜಾರಕಿಹೊಳಿ.
ಗೋಕಾಕ : ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಭಾನುವಾರ ಆಚರಿಸಿದರು. ಬಳಿಕ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ ‘ ಶಿಕ್ಷಕ ‘ ಹೆಸರೇ ಸೂಚಿಸುವಂತೆ ಶಿ-ಶಿಸ್ತು, ಕ್ಷ-ಕ್ಷಮೆ, ಕ-ಕರುಣೆ ಅಥವಾ ಶಿಸ್ತುಗಾರನಾಗಿ ವಿದ್ಯಾರ್ಥಿಗಳ ಜ್ನಾನದಾಹಕ್ಕೆ ತಕ್ಕಂತೆ, ಕ್ಷಣ ಕ್ಷಣಕ್ಕು ಉಲ್ಲಾಸ ಬರಿತನಾಗಿ , ಕಠಿಣವಾದದ್ದನ್ನು …
Read More »ಸೂಫಿಗಳು, ಶರಣರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ : ಮುರುಘರಾಜೇಂದ್ರ ಶ್ರೀಗಳು
ಗೋಕಾಕ: ಸೂಫಿಗಳು, ಶರಣರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಶುಕ್ರವಾರದಂದು ಸಾಯಂಕಾಲ ಇಲ್ಲಿನ ವಿವೇಕಾನಂದ ನಗರದ ಮುಸ್ಲಿಂ ಸಮಾಜದ ಯುವಕ ಶಕೀಲ ಧಾರವಾಡಕರ ಅವರ ಮನೆಯಲ್ಲಿ ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ ಶ್ರೀಗಳ ನಡಿಗೆ ಭಕ್ತರ ಮನೆಗಳ ಕಡೆಗೆ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಸೂಫಿ ಸಂತರು ದೇಶಾದ್ಯಂತ ಪ್ರವಾಸ ಮಾಡಿ ಮಾನವ ಧರ್ಮವನ್ನು …
Read More »2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಕಳೆದ ಎರಡು ವರ್ಷಗಳಿಂದ ಕೆಎಂಎಫ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ತೃಪ್ತಿ ತಮಗಿದೆ. ನಂದಿನಿ ಉತ್ಪನ್ನಗಳನ್ನು ದೇಶಾಧ್ಯಂತ ವಿಸ್ತರಿಸಿ ಕೆಎಂಎಫ್ನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸುವ ಇರಾದೆ ಹೊಂದಿರುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ಖಾಸಗಿ ಹೊಟೇಲ್ನಲ್ಲಿ ಕೆಎಂಎಫ್ ಅಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಿಮಿತ್ಯ ಜರುಗಿದ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹಿರಿಯರ ಆಶಯದಂತೆ ಕೆಎಂಎಫ್ನ ಸಮಗ್ರ …
Read More »ಬೆಳಗಾವಿ ಜಿಲ್ಲೆಯ ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಸಂದೇಶ ಕಳುಹಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಎಲ್ಲ ಶಿಕ್ಷಕರು, ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬೆಳಗಾವಿ ಮತ್ತು ಚಿಕ್ಕೋಡಿ ಡಿಡಿಪಿಐ ಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ಜೊತೆಗೆ ಎಲ್ಲರಿಗೂ ವಿಶೇಷ ಸಂದೇಶ ಒಳಗೊಂಡಿರುವ ಶುಭಾಶಯ ಪತ್ರಗಳನ್ನು ವಿತರಿಸಿದ್ದಾರೆ. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸತೀಶ ಅವರು ಎಲ್ಲ ತಾಲೂಕಿನ …
Read More »ಲೋಳಸೂರ ಸೇತುವೆಗೆ ಚಾಲನೆ; ಸಂಚಾರ ಪುನರಾರಂಭ ಶಾಸಕರಾದ ಸತೀಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿಯವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ
ಗೋಕಾಕ: ಕಳೆದ ಎರಡು ತಿಂಗಳ ಹಿಂದೆ ಘಟಪ್ರಭಾ ನದಿ ಪ್ರವಾಹದಿಂದ ಜಲಾವೃತಗೊಂಡು ಸಂಪೂರ್ಣ ಕೊಚ್ಚಿ ಹೋಗಿದ್ದ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆಯ ದುರಸ್ತಿ ಕಾಮಗಾರಿ ಮುಕ್ತಾಯಗೊಂಡಿದ್ದು, ಸೇತುವೆಗೆ ಇಂದು ಚಾಲನೆ ನೀಡಲಾಗಿದೆ. ಇಂದಿನಿಂದ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷರು, ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಸೇತುವೆಯನ್ನು ಇಂದು ಉದ್ಘಾಟಿಸಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ …
Read More »ಉನ್ನತ ಶಿಕ್ಷಣದಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ: ಆರೋಗ್ಯಸ್ವಾಮಿ ಎ.ಕೆ
ಗೋಕಾಕ ಸೆ 4 :ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡಿರುವುದರಿಂದ ಉನ್ನತ ಶಿಕ್ಷಣ ಅಥವಾ ಉದ್ಯೋಗದೊಂದಿಗೆ ತಮ್ಮ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದು ಬಿಸಿಇ ,ಸಿಸಿಎ ಕಾಲೇಜ ಧಾರವಾಡದ ಪ್ರಾಚಾರ್ಯ ಆರೋಗ್ಯಸ್ವಾಮಿ ಎ.ಕೆ ಹೇಳಿದರು. ಶನಿವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಸಭಾಂಗಣದಲ್ಲಿ ನಡೆದ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ ಗೋಕಾಕ ಕೊನೆಯ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುಗೆ ಮತ್ತು ಪಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. …
Read More »ಲೋಳಸೂರ ಸೇತುವೆ ಪರಿಶೀಲಿಸಿದ ಶಾಸಕ ಸತೀಶ ಜಾರಕಿಹೊಳಿ; ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚನೆ
ಗೋಕಾಕ: ಕಳೆದೆರಡು ತಿಂಗಳ ಹಿಂದೆ ಘಟಪ್ರಭಾ ನದಿ ಪ್ರವಾಹದಿಂದ ಜಲಾವೃತಗೊಂಡು ಸಂಪೂರ್ಣ ಕೊಚ್ಚಿ ಹೋಗಿದ್ದ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆಯ ಕಾಮಗಾರಿ ಸದ್ಯ ಮುಕ್ತಾಯಗೊಂಡಿದ್ದು, ಸೇತುವೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಸತೀಶ ಜಾರಕಿಹೊಳಿ ಅವರು ಖುದ್ದಾಗಿ ಸೇತುವೆಯನ್ನು ಪರಿಶೀಲನೆ ಮಾಡಿ, ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾಳೆಯಿಂದ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. …
Read More »ಬೆಳಗಾವಿಯ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ಇಲ್ಲಿನ ಉದ್ಯಮಬಾಗ್ ನಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಭೇಟಿ ನೀಡಿ, ಕಾಲೇಜಿನಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ತರಬೇತಿಯ ಬಗ್ಗೆ ಸತೀಶ ಮಾಹಿತಿ ಪಡೆದರು. ಯಂತ್ರೋಪಕರಣಗಳ ಆಪರೇಟಿಂಗ್ ಕುರಿತು ಸಹ ಪರಿಶೀಲಿಸಿದರು. ಮ್ಯಾನುಪ್ಯಾಕ್ಚರಿಂಗ್ ಟೆಕ್ನಾಲಜಿ, ಕನ್ಸ್ಟ್ರಕ್ಷನ್ ಟೆಕ್ನಾಲಜಿ, ಇಂಡಸ್ಟ್ರಿಯಲ್ ಆಟೊಮೇಶನ್, ಆಟೊಮೇಟಿವ್ ಟೆಕ್ನಾಲಜಿ, ಎನರ್ಜಿ ಮ್ಯಾನೇಜ್ ಮೆಂಟ್, ವೆಲ್ಡಿಂಗ್ ಟೆಕ್ನಾಲಜಿ ಹಾಗೂ ಇನ್ಫಾರ್ಮೇಶನ್ ಟೆಕ್ನಾಲಜಿ ಕುರಿತು ಕಾಲೇಜಿನ …
Read More »ಆರೋಗ್ಯಯುತ ಶರೀರವಿದ್ದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾಧ್ಯ :ಅರಭಾಂವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ
ಮೂಡಲಗಿ: ಆರೋಗ್ಯಯುತ ಶರೀರವಿದ್ದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾದ್ಯವಾಗುವದು. ಜನ ಸಾಮಾನ್ಯರಿಗೆ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಸರಕಾರವು ಆರೋಗ್ಯ ಇಲಾಖೆಗೆ ನೀಡಿರುವ ಸೌಲಭ್ಯಗಳನ್ನು ಉಪಯೋಗ ಪಡೆದುಕೊಳ್ಳ ಬೇಕು ಎಂದು ಅರಭಾಂವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಪಟ್ಟಣದ ಮೇಲ್ದರ್ಜೆಗೆರಿದ ಸಮೂದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಸೊನೋಗ್ರಾಫಿ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದರು. ಅತ್ಯಾಧುನಿಕ ರೋಗ ಪರೀಶೋಧಕ ಯಂತ್ರದಿಂದಾಗಿ ಸ್ತ್ರೀಯರ ಪ್ರಸವ ಪೂರ್ವ ನಂತರದ ದಿನಗಳಲ್ಲಿ …
Read More »