ಬೆಂಗಳೂರು, ಜು.7- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆ ಆವರಣ ದಲ್ಲಿ ಖಾಸಗಿ ಕಂಪೆನಿಗಳ ಸಿಎಸ್‍ಆರ್ ಅನುದಾನದಡಿ ನೂತನವಾಗಿ ನಿರ್ಮಿಸಿದ್ದ 70 ಹಾಸಿಗೆಗಳ ಸಾಮಥ್ರ್ಯದ ಮೇಕ್‍ಶಿಫ್ಟ್ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್- 19ರ ಮೂರನೆ ಅಲೆ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಈ ಆಸ್ಪತ್ರೆ ನಿರ್ಮಿಸಲಾಗಿದೆ. ದೇಶದ ಆರು ರಾಜ್ಯಗಳಲ್ಲಿ ಇಂತಹ ಮೇಕ್‍ಶಿಫ್ಟ್ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಈ …
Read More »ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸೈಕಲ್ ರ‍್ಯಾಲಿ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಈ ಮೊದಲು ದಿನ ಬಳಕೆ ವಸ್ತುಗಳ ಬೆಲೆ ಹಾಗೂ ಇಂಧನ ಬೆಲೆ ಏರಿಕೆ …
Read More »ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಮಗ್ರ ಅಭಿವೃದ್ಧಿಗಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್.ಡಿ.ಪಿ.ಆರ್. ಇಲಾಖೆಯ 25 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೆಳವಂಕಿ ಗ್ರಾಮ ಪಂಚಾಯತಿ ಸಮಗ್ರ …
Read More »ಗೋಕಾಕದಲ್ಲಿ ಕೋವಿಡ ಲಸಿಕೆ ಕೊರತೆ, ಕಾದು ನೋಡುತ್ತಿರುವ ಜನತೆ!
–C L ಖಡಕಭಾಂವಿ ಗೋಕಾಕ: ತಾಲೂಕಿನಲ್ಲಿ ದಿನೇ ದಿನೇ ಕೊರೊನಾ ಲಸಿಕೆ ಕೊರತೆ ಹೆಚ್ಚಾಗುತ್ತಿದೆ. ಲಸಿಕೆ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಕ್ಸಿನ್ ಕೇಂದ್ರದಲ್ಲಿ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ನಗರ ಹಾಗೂ ಅನೇಕ ಹಳ್ಳಿಗಳಲ್ಲಿ ಜನರು ಲಸಿಕೆಗಾಗಿ ಕಾಯುತ್ತಿದ್ದಾರೆ. ನಿನ್ನೆ ಲಸಿಕೆ ಪಡೆಯಲು ಬಂದಾಗ ನಾಳೆ ಬನ್ನಿ ಎಂದಿದ್ದರು. ಆದರೆ ಇಂದು ಔಟ್ ಆಫ್ ಸ್ಟಾಕ್ ಎಂದು ಹೇಳುತ್ತಿದ್ದಾರೆ.ಈಗ “ನಾವು ಏನು ಮಾಡಬೇಕು, ಇನ್ನೂ ಏವಾಗ …
Read More »ಗೋಕಾಕ ಮತಕ್ಷೇತ್ರದ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ.
ಗೋಕಾಕ: ಮತಕ್ಷೇತ್ರದ ಗ್ರಾಮಗಳಲ್ಲಿ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ …
Read More »ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ.
ಕಲಬುರ್ಗಿ: ಭಾರಿ ಬೆಲೆಬಾಳುವ ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಆಳಂದ ತಾಲ್ಲೂಕಿನ ನಿಂಬರ್ಗಾ ಠಾಣೆ ಪೊಲೀಸರು ಅವರಿಂದ ₹ 3.91 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ ಅವರಿಂದ ₹ 1.27 ಲಕ್ಷ ಮೌಲ್ಯದ ಪ್ಲಾಸ್ಮಾ ಕಟಿಂಗ್ ಮಷಿನ್, ₹ 64 ಸಾವಿರ ಮೌಲ್ಯದ ಗಿಯರ್ ಬಾಕ್ಸ್, 25,984 ಮೌಲ್ಯದ ಎಲ್‌ಇಡಿ ಲೈಟ್ ಫಿಟ್ಟಿಂಗ್ ಮಟೀರಿಯಲ್ಸ್, …
Read More »ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ವಾಕ್ಸಮರ!
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ವಾಕ್ಸಮರ ಮುಂದುವರೆದಿದ್ದು, ನಾನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಕ್ಷಮೆ ಕೇಳುವಂತಹ ಪದ ಬಳಕೆ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೆ.ಆರ್.ಎಸ್. ಡ್ಯಾಂ ನಲ್ಲಿ ಬಿರುಕು ಬಿಟ್ಟಿದೆ ಎಂದು ಹೇಳಿರುವ ಸುಮಲತಾ ಅವರು ಮಾಧ್ಯಮ ಹಾಗೂ ಅಧಿಕಾರಿಗಳ ತಂಡವನ್ನು ಕರೆದುಕೊಂಡು ಕೆ.ಆರ್.ಎಸ್. ಗೆ ಹೋಗಿ ಪರಿಶೀಲನೆ ನಡೆಸಬೇಕು. ಅದನ್ನು ಬಿಟ್ಟು ಅಲ್ಲೆಲ್ಲೋ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು …
Read More »ಲಂಚ ಸ್ವೀಕರಿಸುವಾಗ ಪಂಚಾಯಿತಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ!
ಚಿತ್ರದುರ್ಗ: ಲಂಚ ಸ್ವೀಕರಿಸುವಾಗ ಪಂಚಾಯಿತಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಟಿ. ನುಲೇನೂರು ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್ ಅವರು ಗುರುಶಾಂತಪ್ಪ ಅವರಿಂದ ಎರಡು ಸಾವಿರ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಜಾಬ್ ಕಾರ್ಡ್ ನೀಡಲು ಗುರುಶಾಂತಪ್ಪ ಅವರ ಹಳೆಯ ಬ್ಯಾಲೆನ್ಸ್‌ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಮೊದಲು ಇ-ಸ್ವತ್ತು ಮಾಡಿಸಲು 6 ಸಾವಿರ …
Read More »ಮೂಡಲಗಿಯಲ್ಲಿ ನೂತನ ಕ್ರೀಡಾ ಮಳಿಗೆ ಉದ್ಘಾಟಿಸಿದ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ
ಮೂಡಲಗಿ: ಪಟ್ಟಣದ ಗೋಕಾಕ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ‘ಪುಣ್ಯಕೋಟಿ ಸ್ಪೋರ್ಟ್ಸ್ ಮಳಿಗೆ’ಯನ್ನು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನೂತನ ಕ್ರೀಡಾ ಸಾಮಗ್ರಿಗಳ ಮಳಿಗೆಗೆ ಶುಭ ಹಾರೈಸಿದರು. ಮಳಿಗೆಯಲ್ಲಿನ ಸಾಮಗ್ರಿಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಳಿಗೆಯ ಮಾಲೀಕರಾದ ಚಂದ್ರೇಶ ಶೆಟ್ಟಿ ಹಾಗೂ ಬಸವರಾಜ ಹೊಸಮನಿ ಅವರು ರಾಹುಲ್ ಅವರನ್ನು ಸನ್ಮಾನಿಸಿದರು. ಮಳಿಗೆಯ ಮಾಲೀಕರ ಸ್ನೇಹಿತರು, ಬಂಧುಗಳು ಸೇರಿ ಇನ್ನಿತರರು …
Read More »ಗೋಕಾಕನಲ್ಲಿ ಸೈಕಲ್ ತುಳಿದು ಪ್ರತಿಭಟಿಸಿದ ಕಾಂಗ್ರೆಸ್ ಯುವ ನಾಯಕರಾದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಪಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು. ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ ವೃತ್ತದ …
Read More »