ಯಮಕನಮರಡಿ: ಜಿಲ್ಲಾ ಪಂಚಾಯತ ಹಾಗೂ ಹುಕ್ಕೇರಿ ತೋಟಗಾರಿಕಾ ಇಲಾಖೆಯಿಂದ ಎನ್ಎಂಎಚ್ ಯೋಜನೆಯಡಿ ಯಮಕನಮರಡಿ ಹೊರವಲಯದ ಹಿಡಕಲ್ ಡ್ಯಾಂ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಂಚಾರಿ ಹಣ್ಣಿನ ಮಾರುಕಟ್ಟೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೊದಲಿನಿಂದಲೂ ಇಲ್ಲಿ ವ್ಯಾಪಾರಿಗಳು ರಸ್ತೆ ಬದಿಯಲ್ಲಿಯೇ ಕುಳಿತು ವ್ಯಾಪಾರ ಮಾಡುತ್ತಿದ್ದರು. ಹೀಗಾಗಿ, ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಂಚಾರಿ ಮಾರುಕಟ್ಟೆಯನ್ನು ನಿರ್ಮಿಸಿಕೊಡಲಾಗಿದೆ” …
Read More »ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ ನಿರ್ಮಿಸಲಾಗಿದೆ …
Read More »ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಬರುವ ಸೆಪ್ಟೆಂಬರ್ ತಿಂಗಳೊಳಗೆ ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ಜಮೀನುಗಳಿಗೆ ಕಲ್ಮಡ್ಡಿ ಏತ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ತಳಕಟ್ನಾಳ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಜಾಕವೆಲ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರ ಬಹುದಿನಗಳ ಕನಸು ಇನ್ನು ಮೂರು ತಿಂಗಳೊಳಗೆ ನನಸಾಗಲಿದೆ ಎಂದು ಅವರು ಹೇಳಿದರು. ಸಣ್ಣ ನೀರಾವರಿ ಇಲಾಖೆಯಿಂದ ಕಲ್ಮಡ್ಡಿ …
Read More »ಕೋವಿಡ್ ನಿರ್ವಹಣೆಗಾಗಿ ಶಾಸಕರ ನಿಧಿ ಸಂಪೂರ್ಣ ವ್ಯಯಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ಧಾರ
ಗೋಕಾಕದಲ್ಲಿಂದು ಜರುಗಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರ ಸೇವೆ ಗುಣಗಾನ ಮಾಡಿ ಹೃದಯಸ್ಪರ್ಶಿಯಾಗಿ ಅಭಿನಂದಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೋವಿಡ್-೧೯ ಎರಡನೇ ಅಲೆ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಕಾರ್ಯ ಪ್ರಶಂಸನೀಯ. ಇಡೀ ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿಗಳು ಮತ್ತು ಕೊರೋನಾ ವಾರಿರ‍್ಸ್ಗಳಿಗೆ ಕೋಟಿ ನಮನಗಳನ್ನು ಸಲ್ಲಿಸುತ್ತೇನೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ …
Read More »ಉದ್ಯೋಗ ಸೃಷ್ಟಿ ಮಾಡುವುದೇ ಮುಂದಿನ ಸರ್ಕಾರದ ಎದುರಿರುವ ದೊಡ್ಡ ಸವಾಲು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: “ಪ್ರಸ್ತುತ ಕೇಂದ್ರ ಸರ್ಕಾರದ ನಿರ್ಲಕ್ಷದಿಂದ ಈಗಾಗಲೇ ದೇಶಾದ್ಯಂತ 10 ಕೋಟಿ ಉದ್ಯೋಗವನ್ನು ನಾವು ಕಳೆದುಕೊಂಡಿದ್ದೇವೆ. ಅದನ್ನು ಮರಳಿ ಸೃಷ್ಟಿ ಮಾಡುವುದೇ ದೊಡ್ಡ ಸಾಹಸ. ಮೊದಲು ಇದ್ದಿದ್ದನ್ನೆ ಪುನರ್ ಸೃಷ್ಟಿಸುವುದೇ ಮುಂದಿನ ಸರ್ಕಾರಕ್ಕೆ ದೊಡ್ಡ ಸವಾಲಾಗಲಿದೆ” ಎಂದು ನಿರುದ್ಯೋಗದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರದವರು 8 ಸಾವಿರ ಕೋಟಿ ಖರ್ಚು ಮಾಡಿ ಪಾರ್ಲಿಮೆಂಟ್ …
Read More »ತಾ. ಪಂ ಪ್ರಗತಿ ಪರಿಶೀಲನಾ ಸಭೆ; ಬಾಕಿ ಉಳಿದ ಕಾಮಗಾರಿಯನ್ನು ಚುರುಕುಗೊಳಿಸಿ: ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ” ಕ್ಷೇತ್ರದಲ್ಲಿ ಬಾಕಿ ಉಳಿದ ಕಾಮಗಾರಿಯನ್ನು ಚುರುಕುಗೊಳಿಸಿ, ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಿ” ಎಂದು ಅಧಿಕಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ಸೂಚನೆ ನೀಡಿದರು. ಇಲ್ಲಿನ ತಾ.ಪಂ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ, 14 ಗ್ರಾ.ಪಂ ವ್ಯಾಪ್ತಿಯ ನರೇಗಾ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಫಲಾನುಭವಿಗಳಿಗೆ ಅನುಕೂಲವಾಗುವ ಸರ್ಕಾರ ಯೋಜನೆಗಳು ಶೀಘ್ರವೇ ಅನುಮತಿ ನೀಡಿ, ಕ್ಷೇತ್ರದಲ್ಲಿ ಬಾಕಿ ಉಳಿದ 23 ಕೋಟಿ …
Read More »ಮಾಡಿರುವ ಸಾಧನೆ ಮಾತನಾಡ್ಬೇಕು, ಮಾತನಾಡುವದೇ ಸಾಧನೆಯಾಗಬಾರದು : ರಾಹುಲ್ ಜಾರಕಿಹೊಳಿ
ಹುಕ್ಕೇರಿ : ‘ ಮಾಡಿರುವ ಸಾಧನೆ ಮಾತನಾಡಬೇಕೇ ಹೊರತು ಮಾತನಾಡುವುದೇ ಸಾಧನೆಯಾಗಬಾರದು ಎಂಬ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿಯವರು ನಡೆದು ಬಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿಯೇ ನಾವು ಸಹ ನಡೆಯೋಣ’ ಎಂದು ಯುವ ಕಾಂಗ್ರೆಸ್ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಗುಟಗುದ್ದಿ ಗ್ರಾಮದಲ್ಲಿ ನೂತನವಾಗಿ ಸಂಘಟನೆಗೊಂಡ ರಾಹುಲ್ ಜಾರಕಿಹೊಳಿ ಅಭಿಮಾನಿಗಳ ಸಂಘವನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು , ಕಳೆದ 20 ವರ್ಷಗಳಿಂದ ಸತೀಶ್ ಜಾರಕಿಹೊಳಿ ಸಮಾಜ ಸೇವೆಗಳನ್ನು ಮಾಡುತ್ತಾ ಬಂದಿದ್ದಾರೆ. …
Read More »ರಮೇಶ್ ಜಾರಕಿಹೊಳಿ ದಿಢೀರ ದೆಹಲಿಯತ್ತ!
ದೆಹಲಿ : ರಮೇಶ್ ಜಾರಕಿಹೊಳಿ ಇದೀಗ ದಿನಕ್ಕೊಂದು ಟ್ವಿಸ್ಟ್ ನೀಡುತ್ತಿದ್ದಾರೆ. ತಡರಾತ್ರಿಯೇ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ್ದ ರಮೇಶ್ ಇದೀಗ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ವಿವಿಧ ಮಠಾಧೀಶರು ಹಾಗೂ ದೇವೇಂದ್ರ ಫಡ್ನವಿಸ್ರಂತಹ ಹಿರಿಯ ನಾಯಕರನ್ನ ಭೇಟಿ ಮಾಡಿದ್ದ ರಮೇಶ್ ಜಾರಕಿಹೊಳಿ ಇಂದು ಸಿಎಂ ಯಡಿಯೂರಪ್ಪರನ್ನ ಭೇಟಿಯಾಗೋದಾಗಿ ಹೇಳಿದ್ದರು. ಇದಕ್ಕಾಗಿ 2 ದಿನಗಳ ಬೆಂಗಳೂರು ಪ್ರವಾಸವನ್ನೂ ಕೈಗೊಂಡಿದ್ದರು. ಆದರೆ ಇದೀಗ ನೇರವಾಗಿ ಏರ್ ಪೋರ್ಟ್ಗೆ ತೆರಳಿದ ರಮೇಶ್ ಜಾರಕಿಹೊಳಿ ಅಲ್ಲಿಂದ …
Read More »*ಒಂದು ಕೋಟಿ ರೂ. ಸೋಲಾರ ಬೀದಿ ದೀಪ ಕಾಮಗಾರಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ*
ಗೋಕಾಕ: ನಗರದ ಮಾರ್ಕಂಡೇಯ ನದಿ ಸೇತುವೆಯಿಂದ ಗೋಕಾಕ ಫಾಲ್ಸ್ ಮಾರ್ಗವಾಗಿ ಮೇಲ್ಮಟ್ಟಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಸೋಲಾರ್ ಬೀದಿ ದೀಪ ಅಳವಡಿಕೆ ಕಾಮಗಾರಿಗೆ ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರು ಗುದ್ದಲಿ ಪೂಜೆ ಸಲ್ಲಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ನಗರ ಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ …
Read More »ಮರಳಿ ಪಡೆದುಕೊಂಡ ಅತಿಕ್ರಮಣ ಮಾಡಿದ್ದ ಸ್ಮಶಾನ ಭೂಮಿ.
ಗೋಕಾಕ: ಒಗ್ಗಟ್ಟಿನಿಂದ ಅಸಾದ್ಯವಾದ ಕೆಲಸವನ್ನ ಸಾದ್ಯಮಾಡುಬಹುದು ಅನ್ನುವುದಕ್ಕೆ ಈ ಘಟನೆಯೆ ಸಾಕ್ಷಿ, ಸುಮಾರು ಐವತ್ತು ವರ್ಷಗಳಿಂದ ಗೋಕಾಕ ತಾಲೂಕಿನ ಕೊಣ್ಣೂರಿನ ಪರಿಶಿಷ್ಟ ಮತ್ತು ಹಿಂದೂಳಿದ ಸಮಾಜದವರ ಸ್ಮಶಾನ ಭೂಮಿ ಹತ್ತಿರದಲ್ಲಿರುವ ರೈತರಿಂದ ಅತಿಕ್ರಮವಾಗಿದ್ದರಿಂದ ಅಭಿವೃದ್ಧಿಯಿಂದ ಮರಿಚಿಕೆಯಾಗಿತ್ತು. ಆದರೆ ಇವತ್ತು ಮಾಜಿ ಸಚಿವ ರಮೇಶ ಜಾರಕಿಹೋಳಿಯವರು ಅಬಿವೃದ್ದಿಗಾಗಿ ಹೆಚ್ಚಿನ ಕಾಳಜಿ ವಹಿಸುತ್ತಿರುವದರಿಂದ ಅವರು ನೀಡಿದ ಸಲಹೆಯಂತೆ ಪರಿಶಿಷ್ಟ ಜಾತಿಯ ಸಮಾಜದವರೆಲ್ಲರೂ ಒಂದಾಗಿ ಹೋರಾಟ ಮಾಡಿದ್ದರಿಂದ ಅತಿಕ್ರಮವಾದ ಸ್ಮಶಾನ ಭೂಮಿಯು ಮತ್ತೆ ಮರಳಿ …
Read More »