ಬೆಂಗಳೂರು: ಸಾರಿಗೆ ನೌಕರರನ್ನು ಸಧ್ಯಕ್ಕೆ ಸರ್ಕಾರಿ ನೌಕರರನ್ನಾಗಿ ಮಾಡುವುದು ಸಾಧ್ಯವಿಲ್ಲ. ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಮನವೊಲಿಕೆ ಮೂಲಕ ಕೆಲಸಕ್ಕೆ ತರಲು ಯತ್ನಿಸುತ್ತೇವೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಸವದಿ, ನಮ್ಮ ಹಣಕಾಸಿನ ಇತಿಮಿತಿಯೊಳಗೆ ಬೇಡಿಕೆ ಈಡೇರಿಸುವ ಯತ್ನ ಮಾಡುತ್ತೇವೆ. ಆದರೆ ಸಾರಿಗೆ ನೌಕರರ ಈ ಮುಷ್ಕರದ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ. ಕೆಲವೆಡೆ ಬಸ್ …
Read More »ಪಕ್ಷ ಸಂಘಟನೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯ: ಸತೀಶ್ ಜಾರಕಿಹೊಳಿ
ಶಿರಸಿ: ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ. ಇದರಲ್ಲಿ ಅತ್ಯಂತ ಮುಖ್ಯವಾದ ಪಾತ್ರ ಕಾರ್ಯಕರ್ತರದ್ದಾಗಿರುತ್ತದೆ. ವಿಧಾನಸಭೆ, ಲೋಕಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಯಾವ ಚುನಾವಣೆಯೇ ಆಗಿರಲಿ ನಾವೆಲ್ಲ ಒಗ್ಗೂಡಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತೋಟಗಾರರ ಕಲ್ಯಾಣಮಂಟಪದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ …
Read More »ಬಿಜೆಪಿಯ ಪವರ್ ಸೆಂಟರ್(ಶಕ್ತಿ ಕೆಂದ್ರ) ಎಂದೇ ಗುರುತಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಧಿಡೀರ್ ಭೇಟಿ !…
ಬೆಂಗಳೂರು: -ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದೋ ಅಥವಾ ನಾಳೆಯೋ ಎಂಬ ತೂಗುಯ್ಯಾಲೆಯಲ್ಲಿರುವಾಗಲೇ ಬಿಜೆಪಿಯ ಪವರ್ ಸೆಂಟರ್ ಎಂದೇ ಗುರುತಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಧಿಡೀರ್ ಭೇಟಿ ನೀಡಿರುವುದು ಭಾರೀ ಕುತೂಹಲಕ್ಕೆ ಎಡೆ ಮಾಡಿದೆ. ವರಿಷ್ಠರ ಬುಲಾವ್ ಮೇರೆಗೆ ಸಚಿವ ರಮೇಶ್ ಜಾರಕಿಹೊಳಿ ಇಂದು ದೆಹಲಿಗೆ ತೆರಳಿದ್ದು, ಈಗ ಬಿಜೆಪಿಯಲ್ಲಿ ನಡೆಯುತ್ತಿರುವ ವದಂತಿಗಳಿಗೆ ರೆಕ್ಕೆಪುಕ್ಕ ಬಂದಂತಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಜಾರಕಿಹೊಳಿ ದೆಹಲಿಗೆ …
Read More »ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅ.8ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ …
Read More »ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲ
ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಶೇ 7.5 ಮೀಸಲಾತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸಿ ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ ಪ್ರೀಡಂ ಪಾರ್ಕ ನಲ್ಲಿ ಕಳೆದ ಎರಡು ದಿನಗಳಿಂದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಅವರು …
Read More »ರಾಜ್ಯೋತ್ಸವ ಪ್ರಶಸ್ತಿ ; ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ನೀಡಿದ ಇಂಜಿನಿಯರ್ಸ್.*
ಕರ್ನಾಟಕ ರಾಜ್ಯದ ಪ್ರಖ್ಯಾತ ಮುಖ್ಯ ಅಭಿಯಂತರರಾದ (ನಿವೃತ್ತ) *ಕ್ಯಾಪ್ಟನ್ ರಾಜಾರಾವ್* ಅವರಿಗೆ ಈ ಬಾರಿಯ ಪ್ರತಿಷ್ಠಿತ *ರಾಜ್ಯೋತ್ಸವ* ಪ್ರಶಸ್ತಿಯನ್ನು ನೀಡುವಂತೆ ಜಲಸಂಪನ್ಮೂಲ ಇಂಜಿನಿಯರ್ ಗಳ ಸಂಘ, ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರಿಗೆ ಮನವಿ ಮಾಡಿದೆ. ವಿಧಾನಸೌಧದಲ್ಲಿಂದು ಸಚಿವರನ್ನು ಭೇಟಿ ಮಾಡಿದ ಅಭಿಯಂತರರು, ಈ ಬಾರಿ *ರಾಜ್ಯೋತ್ಸವ ಪ್ರಶಸ್ತಿಗೆ ತಾಂತ್ರಿಕ ಕ್ಷೇತ್ರ* ವನ್ನೂ ಪರಿಗಣಿಸುವಂತೆ ಒತ್ತಾಯಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅಭಿಯಂತರರು ಸದಾ ಶ್ರಮಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ. 6 …
Read More »ಖ್ಯಾತ ಸಂಗೀತ ನಿರ್ದೇಶಕ ಶ್ರೀ ರಾಜನ್ ಅವರು ನಿಧನ:ಸಚಿವ ರಮೇಶ್ ಜಾರಕಿಹೊಳಿ ಸಂತಾಪ.
ಕನ್ನಡ ಚಲನಚಿತ್ರ ರಂಗದ ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ *ಶ್ರೀ ರಾಜನ್* ಅವರು ನಿಧನರಾದ ಸುದ್ದಿ ನನ್ನ ಮನಸ್ಸಿಗೆ ತೀವ್ರ ನೋವನ್ನು ಉಂಟುಮಾಡಿದೆ. ಅನೇಕ ಜನಪ್ರಿಯ ಕನ್ನಡ ಚಲನಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದಾಗಿ ಕನ್ನಡ ಚಲನಚಿತ್ರರಂಗವು ಅನಾಥವಾಗಿದೆ. ತಮ್ಮ ಸಹೋದರರಾಗಿದ್ದ ಮತ್ತೊಬ್ಬ ಪ್ರಖ್ಯಾತ ಸಂಗೀತ ನಿರ್ದೇಶಕ ಶ್ರೀ ನಾಗೇಂದ್ರ ಅವರೊಂದಿಗೆ *’ರಾಜನ್-ನಾಗೇಂದ್ರ’* ಹೆಸರಿನಲ್ಲಿ ಜಂಟಿಯಾಗಿ ನೂರಾರು ಕನ್ನಡ ಚಲನಚಿತ್ರಗಳಿಗೆ ಈ ಜೋಡಿ ಸಂಗೀತ ನಿರ್ದೇಶನ ಮಾಡಿದ್ದರು. ಕನ್ನಡ ಚಲನಚಿತ್ರ ರಸಿಕರು …
Read More »ಮಕ್ಕಳ-ಶಿಕ್ಷಕರ ಆರೋಗ್ಯಕ್ಕಿಂತ ಇನ್ನಾವ ಕಾರ್ಯಕ್ರಮವೂ ಮುಖ್ಯವಲ್ಲ : ಸುರೇಶ್ ಕುಮಾರ್
ಬೆಂಗಳೂರು: ಕೋವಿಡ್ ಕಾಲದಲ್ಲಿ ಅನುಷ್ಠಾನಕ್ಕೆ ಬಂದ ವಿದ್ಯಾಗಮ ಯೋಜನೆಯ ಕಾರಣದಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆಯಲ್ಲಿ ವಿದ್ಯಾಗಮ ಕಾರ್ಯಕ್ರಮ ನಿಲ್ಲಿಸಲು ಆಗ್ರಹಗಳು ಕೇಳಿ ಬರುತ್ತಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. https://m.facebook.com/story.php?story_fbid=3912186332142016&id=100000520624203 ವಿಶೇಷವಾಗಿ ಸಾಮಾಜಿಕ, ಆರ್ಥಿಕವಾಗಿ ದುರ್ಬಲರಾದ ಮಕ್ಕಳ ಶೈಕ್ಷಣಿಕ ಅಗತ್ಯತೆಗಳನ್ನು ಪೂರೈಸುತ್ತಿರುವ ವಿದ್ಯಾಗಮ ಕಾರ್ಯಕ್ರಮವನ್ನು ನಿಲ್ಲಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಇಂದು ಬಹುಪಾಲು ನಮ್ಮ ಸರ್ಕಾರಿ ಶಾಲೆಗಳಿಗೆ …
Read More »ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ:* *ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ
ಬೆಂಗಳೂರು, ಅಕ್ಟೋಬರ್ ೧೦-೨೦೨೦: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ಮತ್ತು ನ್ಯಾಯಬದ್ಧ ವಾದವನ್ನು ಮಂಡಿಸಲಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭರವಸೆ ನೀಡಿದ್ದಾರೆ. …
Read More »ಸಚಿವ ರಮೇಶ ಜಾರಕಿಹೊಳಿ ಅವರ “ಮಹಾ” ಭೇಟಿ ||ಕುತೂಹಲಕಾರಿ ಬೆಳವಣಿಗೆಯತ್ತ ಮಹಾರಾಷ್ಟ್ರ ರಾಜಕೀಯ.
ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಾ ? ಎಂಬ ಕುತೂಹಲ ಕೆರಳಿಸಿದೆ. ಕಳೆದ ತಿಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ, ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …
Read More »