ಗೋಕಾಕ : ಲೋಕೋಪಯೋಗಿ ಇಲಾಖೆಯಿಂದ ಅತಿವೃಷ್ಟಿಯಿಂದ ಹಾಳಾದ ರಸ್ತೆಯನ್ನು 2.5 ಕೋಟಿ ರೂ ವೆಚ್ಚದ ಕಾಮಗಾರಿಗೆ ಶುಕ್ರವಾರದಂದು ಕಾರ್ಮಿಕ ಧುರೀಣರಾದ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಟಿ ಆರ್ ಕಾಗಲ , ನಗರ ಸಭೆ ಸ್ಥಾಯಿ ಸಮಿತಿ ಚೇರಮನ್ ಕುತಬುದ್ದೀನ ಗೋಕಾಕ, ಮುಖಂಡರಾದ ಭೀಮಗೌಡ ಪೋಲೀಸಗೌಡರ, ಡಾ. ಜಿ.ಆರ್ ಸೂರ್ಯವಂಶಿ, ಅಶೋಕ ಗೋಣಿ ,ಚಿದಾನಂದ ದೇಮಶೆಟ್ಟಿ, ರವಿ ಪತ್ರಾವಳಿ, ಲಕ್ಕಪ್ಪಾ ತಹಶೀಲ್ದಾರ, ಅಬ್ದುಲರಹಮಾನ್ …
Read More »ವಡ್ಡೇರಹಟ್ಟಿ ಗ್ರಾಪಂ.ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ
ಮೂಡಲಗಿ : ತಾಲ್ಲೂಕಿನ ವಡೇರಹಟ್ಟಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಲಕ್ಕವ್ವ ಅಡಿವೇಪ್ಪ ಹಾದಿಮನಿ, ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಸಿದ್ದಪ್ಪ ಹೊಳೆಕರ ಅವಿರೋಧವಾಗಿ ಗುರುವಾರ ಆಯ್ಕೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ ವಡೇರಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ , ಸದಸ್ಯರು ಗೋಕಾಕ್ ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಶಾಸಕರಿಗೆ …
Read More »ಕೆಪಿಸಿಸಿ ಕಾರ್ಯಧ್ಯಕ್ಷರು ಸತೀಶ ಜಾರಕಿಹೊಳಿ ಮಾರ್ಗದರ್ಶನ: ಹತ್ತರಗಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಹತ್ತರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಂಗೀತಾ ಬಳ್ಳಾರಿ ಪಾತ್ರೋಟ ಹಾಗೂ ಉಪಾಧ್ಯಕ್ಷರಾಗಿಅಕ್ಷತಾ ಉಮೇಶ ಭೀಮಗೋಳ ಅವಿರೋಧವಾಗಿ ಆಯ್ಕೆಯಾದರು. ಇದೇ ವೇಳೆ ನೂತನ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಯುವ ಧುರೀಣ ರವಿ ಅಣ್ಣಾ ಜಿಂಡ್ರಾಳಿ, ಮಹಾದೇವ ಪಟೋಳಿ, …
Read More »*ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ – ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ರೈತರ ನಿಯೋಗ*
ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ*, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ ಬೆಳೆವಿಮೆ …
Read More »*ಬೆಳಗಾವಿಯಲ್ಲಿ ಸೈನಿಕ ಶಾಲೆ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ ಒತ್ತಾಯ*
ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ *ಶ್ರೀ ರಾಜನಾಥ ಸಿಂಗ್* ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ *ರಮೇಶ್ ಜಾರಕಿಹೊಳಿ*, ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ …
Read More »*ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿ ಬಜೆಟ್ – ಜನಪರ ಬಜೆಟ್ ಸ್ವಾಗತಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ*
ಕೋವಿಡ್ ನಿಂದಾಗಿ ಉಂಟಾದ ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯಾವುದೇ ತೆರಿಗೆ ವಿಧಿಸದೇ ಉದ್ಯಮ ಸ್ನೇಹಿ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ನೀಡಿದ್ದು ಇದು ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿಯಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಕೇಂದ್ರ ಬಜೆಟ್ ನ್ನು ಸ್ವಾಗತಿಸಿ ಮಾತನಾಡಿದ ಅವರು, ದೇಶಾದ್ಯಂತ 15,000 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. …
Read More »ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತ ಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ರೈತರ ಅಭಿವೃದ್ಧಿ ಅದು ಕೇಂದ್ರದಿಂದ ಮಾತ್ರ ಸಾಧ್ಯವಿದ್ದು, ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ …
Read More »*ಗೋಕಾಕ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆ ಗೋಕಾಕ ಆಯ್ಕೆ*
ಗೋಕಾಕ: ಇಲ್ಲಿನ ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಕುತ್ಬುದ್ಧೀನ್ ಗೋಕಾಕ ಶನಿವಾರ ಆಯ್ಕೆಯಾಗಿದ್ದಾರೆ. ಕುತ್ಬುದ್ಧೀನ್ ಅವರು ಮೂರು ಬಾರಿ ನಗರಸಭೆಗೆ ಆಯ್ಕೆಯಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮುಖಂಡರಾದ ಲಖನ್ ಜಾರಕಿಹೊಳಿ ಹಾಗೂ ಅಂಬಿರಾವ್ ಪಾಟೀಲ ಅವರ ಸೂಚನೆಯ ಮೇರೆಗೆ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷರಾದ ಬಸವರಾಜ ಅರೇನ್ನವರ, ನಗರ ಸಭೆ ಸದಸ್ಯರಾದ ಅಬ್ಬಾಸ ದೇಸಾಯಿ, …
Read More »*ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ.!*
ಗೋಕಾಕ: ಗೋಕಾಕ ಮತಕ್ಷೇತ್ರದ ಉಪ್ಪಾರಟ್ಟಿ ಹಾಗೂ ಮಾಲದಿನ್ನಿ ಗ್ರಾಮದಲ್ಲಿ ೧ ಕೋಟಿ ೬೦ ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ಶನಿವಾರದಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನೀರಾವರಿ ಇಲಾಖೆಯಿಂದ ಎಸ್‌ಇಪಿಟಿಎಸ್‌ಪಿ ಯೋಜನೆಯಡಿಯಲ್ಲಿ ೮೫ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ, ೧೫ ಲಕ್ಷ ರೂಪಾಯಿ ವೆಚ್ಚದ ಸಮುದಾಯ ಭವನ. ೨೦ ಲಕ್ಷ ರೂಪಾಯಿ …
Read More »*ನಾಡು, ನುಡಿ ವಿಷಯಕ್ಕೆ ಬಂದಾಗ ಪಕ್ಷಾತೀತ ಹೋರಾಟ, ಒಗ್ಗಟ್ಟು ಪ್ರದರ್ಶಿಸಬೇಕು: ಶಾಸಕ ಸತೀಶ ಜಾರಕಿಹೊಳಿ*
ಮಂಡ್ಯ: ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪುತ್ತಿದ್ದು, ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪ್ರತಿಯೊಬ್ಬರು ಹೋರಾಟ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಶುಕ್ರವಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡವನ್ನು ಪ್ರತಿಯೊಬ್ಬರು ನಿರಂತರವಾಗಿ ಪ್ರೀತಿಸಿ, ಪ್ರೋತ್ಸಾಹಿಸಬೇಕು. ರಾಜ್ಯ, ಹೊರ ರಾಜ್ಯಗಳಲ್ಲಿಯೂ ಕನ್ನಡ ಕ್ರಾಂತಿಯಾಗಬೇಕು. ನಾಡು, ನುಡಿ ವಿಷಯಕ್ಕೆ ಬಂದಾಗ ಪಕ್ಷಾತೀತ ಹೋರಾಟ …
Read More »