ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ ಜೀವನ ನಿರ್ವಹಣೆ ಮಾಡುವಂತೆ ಸಚಿವ *ರಮೇಶ್ ಜಾರಕಿಹೊಳಿ* ಕರೆ ನೀಡಿದ್ದಾರೆ. ಕೋವಿಡ್ 19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹಾ ವ್ಯವಸ್ಥಿತವಾಗಿ …
Read More »ಲೋಕಲ್ ವಾರ್ : ಬೆಳಗಾವಿಯಲ್ಲಿ ಒಟ್ಟಾರೆ ಶೇ.82.70 ಮತದಾನ.
ಬೆಳಗಾವಿ : ಗ್ರಾಮ ಪಂಚಾಯತಿ ಮೊದಲ ಹಂತದ ಚುನಾವಣೆ ಮಂಗಳವಾರ (ಡಿ.22) ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆಯಿತು. ಮೊದಲ ಹಂತದಲ್ಲಿ ಬೆಳಗಾವಿ, ಖಾನಾಪುರ, ಹುಕ್ಕೇರಿ, ಬೈಲಹೊಂಗಲ, ಕಿತ್ತೂರು, ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಮತದಾನ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನ ಪ್ರಕ್ರಿಯೆಯಲ್ಲಿ ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲರೂ ಉತ್ಸಾಹದಿಂದ ಭಾಗವಹಿಸಿದರು. ಮೊದಲ ಹಂತದಲ್ಲಿ ಏಳು ತಾಲ್ಲೂಕುಗಳಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಬೆಳಗಾವಿ ತಾಲ್ಲೂಕಿನಲ್ಲಿ ಅತೀ ಹೆಚ್ಚು ಅಂದರೆ ಶೇ.86.60 ರಷ್ಟು …
Read More »ಮುಂದಿನ ಗುರಿ ಬೆಳಗಾವಿ ಗ್ರಾಮೀಣ ; ಮುಖಂಡರ ಸಭೆಯಲ್ಲಿ ಗೆಲುವಿನ ಪಣ ತೊಟ್ಟ ಸಚಿವ ಜಾರಕಿಹೊಳಿ
ಬೆಳಗಾವಿ: ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ್ ನಗರದಲ್ಲಿರುವ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ವಾಡಿಕೆಗಿಂತಾ ಹೆಚ್ಚಿನ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಲೋಕಸಭೆಗೆ ಆಯ್ಕೆಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮತ್ತಷ್ಟು ಸುಭದ್ರ ಪಡಿಸಬೇಕು ಎಂದು ಸಚಿವರು ಕರೆ ನೀಡಿದರು. ಬೆಳಗಾವಿ ಜಿಲ್ಲೆಯಾದ್ಯಂತ …
Read More »ಅಜ್ಜನಕಟ್ಟಿ ಗ್ರಾ.ಪಂ ಗೆ ಅವಿರೋಧ ಆಯ್ಕೆ : ಸದಸ್ಯರಿಂದ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ
ಗೋಕಾಕ: ಮತಕ್ಷೇತ್ರದ ಮಮದಾಪುರ ಗ್ರಾಮ ಪಂಚಾಯತಿ ಹದ್ದಿಯ ಅಜ್ಜನಕಟ್ಟಿ ಗ್ರಾಮದ ಪಂಚಾಯತಿಯ ಐದಕ್ಕೆ-ಐದು ಸ್ಥಾನಗಳಿಗೆ ಗ್ರಾಮದ ಹಿರಿಯರು ಒಕ್ಕೋರಿಳಿನಿಂದ ಅವಿರೋಧ ಆಯ್ಕೆ ಮಾಡಿದ್ದು ಆಯ್ಕೆಯಾದ ಅಭ್ಯರ್ಥಿಗಳಾದ ರೂಪಾ ಸುನೀಲ ಅವರಾದಿ,ಲಕ್ಷ್ಮಿ ಮುತ್ತೆಪ್ಪ ರಕ್ಷಿ,ಭೀಮಪ್ಪ ಲಕ್ಷ್ಮಪ್ಪ ಚಂದರಗಿ,ರಾಜು ಯಲ್ಲಪ್ಪ ಬೆಳಗಲಿ,ಸಿದ್ದಲಿಂಗಪ್ಪ ಲಕ್ಷ್ಮಪ್ಪ ಪೂಜೇರ.ಅವರು ಅವಿರೋಧ ಆಯ್ಕೆ ಹಿನ್ನೆಲೆ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿಗೆ ಭೇಟಿ ನೀಡಿ ಕಾರ್ಮಿಕ ಮುಖಂಡರಾದ ಶ್ರೀ ಅಂಬಿರಾವ ಪಾಟೀಲ ಅವರಿಗೆ ಸನ್ಮಾನಿಸಿ ಕೃತಜ್ಞತೆ …
Read More »ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ
ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, ಭೀಮಶಿ …
Read More »ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ …
Read More »ತಿರುಮಲ ತಿಮ್ಮಪ್ಪನ ದರ್ಶನ ಪಡೆದ ಸಚಿವ ರಮೇಶ ಜಾರಕಿಹೊಳಿ.
ಆಂಧ್ರಪ್ರದೇಶ : ರಾಜ್ಯ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಂಗಳವಾರ ತಿರುಮಲ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಚಿತ್ತೂರು ಜಿಲ್ಲೆಯ ತಿರುಮಲ ಬೆಟ್ಟದ ಪಟ್ಟಣದಲ್ಲಿನ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಸಚಿವರ ಜತೆಗೆ ಶಾಸಕ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಬಿಜೆಪಿ ಮುಖಂಡರು ಇದ್ದಾರೆ.
Read More »ವಿಧಾನಪರಿಷತ್ತಿನ ಮಾನ-ಮರ್ಯಾದೆ ಹರಾಜು ಮಾಡಿದ ಮಾನ್ಯ ವಿಧಾನ ಪರಿಷತ ಶಾಸಕರುಗಳು!
ಬೆಂಗಳೂರು, ಡಿ.15- ವಿಧಾನ ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಪಟ್ಟಂತೆ ಆಡಳಿತ ಪಕ್ಷವಾದ ಬಿಜೆಪಿ, ಪ್ರತಿಪಕ್ಷವಾದ ಕಾಂಗ್ರೆಸ್ ನಡುವೆ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿ ವಿಧಾನ ಪರಿಷತ್‍ನಲ್ಲಿಂದು ಕೋಲಾಹಲ ಉಂಟಾಯಿತು. ಕಲಾಪ ಆರಂಭಕ್ಕೂ ಮುನ್ನ ಉಪಸಭಾಪತಿ ಧರ್ಮೇಗೌಡ ಅವರು ಸಭಾಪತಿ ಪೀಠದ ಮೇಲೆ ಕುಳಿತುಕೊಂಡಿದ್ದರು. ಇದನ್ನು ಕಾಂಗ್ರೆಸ್‍ನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿ ಆಕ್ಷೇಪ ವ್ಯಕ್ತಪಡಿಸಿದರು. ಪೀಠದ ಹಿಂದೆ ಇರುವ ಬಾಗಿಲ ಮೂಲಕ ಸಭಾಪತಿ ಅವರು ಸದನದ ಸಭಾಂಗಣ ಪ್ರವೇಶಿಸದಂತೆ …
Read More »ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಗೆ ಶ್ರಮ ವಹಿಸಿ, ಕೆಲಸಕ್ಕೆ ಪ್ರತಿಫಲ ದೊರೆಯುತ್ತದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ರಾಯಬಾಗ: ‘ ಪ್ರಧಾನಿ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೇನು ಹೊಸದೆನಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965ರಲ್ಲಿಯೇ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳೆದು, ಅಲಂಕರಿಸಿ ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ ಮರುಳಾಗದೆ. …
Read More »ಶಿಕ್ಷಕರು ಮತ್ತು ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ :ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …
Read More »