Breaking News

ರಾಜ್ಯ

ಸದ್ಯದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ : ಸಾರಿಗೆ ಸಚಿವ.

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಅಂತ ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನಸಭೆ ಕಲಾಪದ ವೇಳೆ ಮಾಹಿತಿ ನೀಡಿದ್ದಾರೆ. ಸಾರಿಗೆ ನೌಕರರನ್ನ ಸರ್ಕಾರಿ ನೌಕರರಾಗಿ ಮಾಡುವಂತೆ ಶಾಸಕ ಜಿ. ಟಿ. ದೇವೇಗೌಡ ಒತ್ತಾಯ ಮಾಡಿದ್ರು. ಈಗಾಗಲೇ ಸಾರಿಗೆ ನೌಕರರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೀಗಾಗಿ ಅವರನ್ನ ಕರೆದು ಮಾತುಕತೆ ನಡೆಸುವಂತೆ ಜಿಟಿಡಿ ಸರ್ಕಾರಕ್ಕೆ ಒತ್ತಾಯಿಸಿದ್ರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಲಕ್ಷ್ಮಣ …

Read More »

ಲಂಚ ಸ್ವೀಕಾರ ಆರೋಪ ಡಿವೈಎಸ್ಪಿ ವಿಜಯಲಕ್ಷ್ಮಿಗೆ 4 ವರ್ಷ ಜೈಲು ಶಿಕ್ಷೆ

ಕಲಬುರಗಿ : ಲಂಚ ಸ್ವೀಕಾರ ಆರೋಪ ಸಾಬೀತಾದ ಹಿನ್ನೆಲೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿವೈಎಸ್ಪಿ ವಿಜಯಲಕ್ಷ್ಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಧೀಶ ಸತೀಶ್​ ಸಿಂಗ್ ಆದೇಶ ಹೊರಡಿಸಿದ್ದಾರೆ. ವಿಜಯಲಕ್ಷ್ಮಿ 2015 ರಲ್ಲಿ ಶಹಾಬಾದ್ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ವೇಳೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಜಪ್ತಿ ಮಾಡಿದ್ದ ವಾಹನ ಬಿಡಲು 25 ಸಾವಿರ ರೂಪಾಯಿ ಲಂಚ ಕೇಳಿದ್ದ ಆರೋಪದ ಹಿನ್ನೆಲೆ ರಾಜು ಎಂಬ …

Read More »

ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ರಾಜ್ಯ ರೈತರಿಂದ ಬಾರುಕೋಲು ಚಳುವಳಿ…!

ಕೃಷಿ ಕಾಯ್ದೆ ವಿರೋಧಿಸಿ ವಿಧಾನಸೌಧದೆದುರು ರೈತರ ಪ್ರತಿಭಟನೆ ಬೆಂಗಳೂರು : ಡಿಸೆಂಬರ್ ೮ ರಂದು ಭಾರತ ಬಂದ್‌ಗೆ ಬೆಂಬಲ ನೀಡಿದ್ದ ರೈತ ಪರ ಸಂಘಟನೆಗಳು ಇಂದು ಬೆಂಗಳೂರಲ್ಲಿ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ. ರೈತರ ಪರವಾಗಿ ರೈತ ಸಂಘಟನೆಗಳ ಜೊತೆಗೆ ಇತರೆ ಸಂಘಟನೆಗಳು ಬೀದಿಗಿಳಿಯಲಿವೆ. ಮುಖ್ಯವಾಗಿ ೧೦ ಸಾವಿರಕ್ಕೂ ಹೆಚ್ಚು ರೈತರು ಇವತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಈಗಾಗಲೇ ಬೆಂಗಳೂರಿಗೆ ಬರುತ್ತಿರುವ ರೈತರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಆನಂದ್‌ರಾವ್ ಸರ್ಕಲ್ …

Read More »

ರೈತರ ಹೋರಾಟಕ್ಕೆ ಸಾಥ ಕೊಟ್ಟ ಯೋಧ ಪೊಲೀಸ್ ವಶಕ್ಕೆ

ಹುಬ್ಬಳ್ಳಿ : ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್​ ಬಂದ್​ಗೆ ನಗರದಲ್ಲಿ ಸೈನಿಕರೊಬ್ಬರು ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು. ಕುಂದಗೋಳ ತಾಲೂಕಿನ ಬರದ್ವಾಡದ ರಮೇಶ್ ಮಾಡಳ್ಳಿ ಎನ್ನುವ ಸೈನಿಕ ರೈತರ ಹೋರಾಟಕ್ಕೆ ಸಾಥ್ ನೀಡಿದವರು. ಇವರು ಅಸ್ಸೋಂನ ಆರ್​ಆರ್​ ವಿಂಗ್​ನ ಹವಾಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿಭಟನೆಗೆ ಹಸಿರು ಶಾಲು, ಬಾರುಕೋಲು ಮೂಲಕ ಬೆಂಬಲ ಸೂಚಿಸಿದರು‌. ಈ ಸಂದರ್ಭ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ವೇಳೆ ಮಾತನಾಡಿದ …

Read More »

ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ.

ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ *ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ* ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ …

Read More »

ಯಾರಾದರೂ ಒಬ್ಬರು ಹಿಂದೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆ ಮಾಡಲು ಸಿದ್ಧ: ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಕಳೆದ ಹಲವು ದಿನಗಳಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆಯನ್ನು ಮಾಡಿ ಚಿಕ್ಕೋಡಿ ಗೋಕಾಕ ಜಿಲ್ಲೆಯನ್ನಾಗಿ …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿನ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ …

Read More »

ಮೂಡಲಗಿ ತಹಶೀಲ್ದಾರ ಕಛೇರಿ ಮೇಲೆ ಎಸಿಬಿ ದಾಳಿ: ಗ್ರಾಮ ಲೆಕ್ಕಾಧಿಕಾರಿ ಈಗ ಎಸಿಬಿ ಅತಿಥಿ!

ಮೂಡಲಗಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಅಶೋಕ ತಳವಾರ ಎಂಬುವವರ ಮೇಲೆ ಸೋಮವಾರ ಸಾಯಂಕಾಲ ನಾಲ್ಕು ಗಂಟೆಗೆ ಎಸಿಬಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಮಳೆಯ ಅನಾವೃಷ್ಟಯಿಂದ ಮನೆಗಳು ಬಿದ್ದಿರುವುದರಿಂದ ಸರ್ಕಾರ ಸಂತ್ರಸ್ತರಿಗೆ ಐದು ಲಕ್ಷ ರೂ, ಗಳ ಮನೆ ನಿರ್ಮಾಣಕ್ಕೆ ಹಣ ಘೋಷಣೆ ಹಿನ್ನೆಲೆಯಲ್ಲಿ ಫಲಾನುಭವಿಗಳ ನೋಂದಣಿ ಕಾರ್ಯಚರಣೆಯನ್ನು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ ಪ್ರಾರಂಭಿಸಲಾಗಿತ್ತು. ಹೊಸ ತಾಲೂಕಿನ ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಈ ಫಲಾನುಭವಿಗಳ ನೋಂದಣಿ …

Read More »

2021ರವರೆಗೆ ಹೆಚ್ ವಿಶ್ವನಾಥ್ ಸಚಿವರಾಗುವಂತಿಲ್ಲ .

ಬೆಂಗಳೂರು : ಅನರ್ಹರಾಗಿ ಸೋತು ನಾಮನಿರ್ದೇಶನವನ್ನು ಹೆಚ್ ವಿಶ್ವನಾಥ್ ಗೊಂಡಿದ್ದಾರೆ. ಹೀಗಾಗಿ 2021ರವರೆಗೆ ಹೆಚ್ ವಿಶ್ವನಾಥ್ ಸಚಿವರಾಗುವಂತಿಲ್ಲ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಿದೆ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್ ಗೆ ಬಿಗ್ ಶಾಕ್ ನೀಡಿದೆ. ಅಲ್ಲದೇ ಆರ್ ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ. ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ …

Read More »

ಗ್ರಾಮ ಪಂಚಾಯಿತಿ ಚುನಾವಣೆಗೆ ಅಖಾಡ ಸಿದ್ಧ.

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಎರಡು ಹಂತಗಳಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ರಾಜ್ಯ ಚುನಾವಣಾ ಆಯೋಗ ಇಂದು ಚುನಾವಣಾ ದಿನಾಂಕ ಪ್ರಕಟಿಸಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮೊದಲ ಹಂತಕ್ಕೆ ಡಿಸೆಂಬರ್ 22 ಹಾಗೂ ಎರಡನೇ ಹಂತದಲ್ಲಿ ಡಿಸೆಂಬರ್ 27ಕ್ಕೆ ಮತದಾನ ನಡೆಯಲಿದೆ. ಡಿ.30 ಮತ ಎಣಿಕೆ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ರಾಜ್ಯದ 5,762 ಗ್ರಾಮ ಪಂಚಾಯಿತಿಗಳ 35, 884 ಕ್ಷೇತ್ರಗಳ 92,121 ಸದಸ್ಯ …

Read More »