ಶಿರಸಿ : ಸಿಎಂ ಬದಲಾವಣೆಯ ಚರ್ಚೆ ಜೋರಾಗಿರುವಂತ ಸಂದರ್ಭದಲ್ಲಿಯೇ, ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಪ್ರಸ್ತುತ ರಾಜಕೀಯದ ಬಗ್ಗೆ ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ. ಅದೇನ್ ಅಂತ ಮುಂದೆ ಓದಿ.. ಈ ಕುರಿತಂತೆ ಶಿರಸಿಯ ನೇರಲಕಟ್ಟೆ ಗ್ರಾಮದಲ್ಲಿನ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಬೇಟೆಗಾರನೊಬ್ಬನಿಂದ ತಪ್ಪಿಸಿಕೊಂಡ ಜಿಂಕೆ, ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಆ ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಭೇಟೆಗಾರ ಕೇಳಿದಾಗ ಸನ್ಯಾಸಿ …
Read More »ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ರದ್ದು!
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಜುಲೈ 25 ರಂದು ಸಿಎಂ ಯಡಿಯೂರಪ್ಪ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದೆಲ್ಲಾ ಹೇಳಲಾಗಿತ್ತು. ಸ್ವಾಮೀಜಿಗಳು ಕೂಡ ಸಿಎಂ ಬೆನ್ನಿಗೆ ನಿಂತು ಬಿ.ಎಸ್.ವೈ. ಬದಲಾವಣೆ ಮಾಡಿದ್ರೆ ಸರಿ ಇರಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಕೂಡ ಯಡಿಯೂರಪ್ಪನವರಿಗೆ ಬೆಂಬಲ ನೀಡಿದ್ದು, ಈ ರೀತಿ ಅನೇಕ ಬೆಳವಣಿಗೆಗಳ ನಡುವೆ ಬಿಜೆಪಿಯಲ್ಲಿ ತೆರೆಮರೆಯಲ್ಲೇ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಲು …
Read More »ವಿಧಾನಸೌಧದ ಕಾರಿಡಾರ್ನಲ್ಲಿ ಮಾಧ್ಯಮ ನಿರ್ಬಂಧ ಆದೇಶ ಹಿಂಪಡೆದ ಸಿಎಂ.
ಬೆಂಗಳೂರು: ವಿಧಾನಸೌಧದ ಕಾರಿಡಾರ್ನಲ್ಲಿ ಮಾಧ್ಯಮ ನಿರ್ಬಂಧ ಎಂಬ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಪಸ್ ಪಡೆದಿದ್ದಾರೆ. ಈ ಆದೇಶ ಹಿಂಪಡೆಯದಿದ್ದರೆ ಎಲ್ಲಾ ಸರ್ಕಾರಿ ಕಾರ್ಯಕ್ರಮ ಹಾಗೂ ಮುಖ್ಯಮಂತ್ರಿಗಳ ಕಾರ್ಯಕ್ರಮ ಬಾಯ್ಕಾಟ್ ಮಾಡಲು ಮಾಧ್ಯಮ ಪ್ರತಿನಿಧಿಗಳು ತೀರ್ಮಾನಿಸಿದ್ದರು. ಆ ಹಿನ್ನೆಲೆಯಲ್ಲಿ, ಇದೀಗ ವಿಧಾನಸೌಧದ ಕಾರಿಡಾರ್ನಲ್ಲಿ ಮಾಧ್ಯಮ ನಿರ್ಬಂಧ ಆದೇಶ ಹಿಂಪಡೆಯಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಮಾಧ್ಯಮ ನಿರ್ಬಂಧ ಹಿಂಪಡೆಯುವ ಬಗ್ಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ಗೆ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ …
Read More »ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ!
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಆಧಾರದ ಮೇಲೆ ಪಿಯುಸಿ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಎಕ್ಸಾಂ ಮಾಡುವಂತೆ ಮನವಿ ಮಾಡಿದ್ರು. ಆದರೆ, ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಲಾಗಿದೆ ಎಂದು …
Read More »ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕೆ ದಿನಾಂಕ ನಿಗದಿ.
ಬೆಂಗಳೂರು: ಇದೇ 19ರಂದು ನಡೆದ ಹಾಗೂ 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 10 ರಂದು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ. ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುರೇಶ್ ಕುಮಾರ್ ಹೇಳಿದರು. ಮೊದಲ ಪತ್ರಿಕೆ ಪರೀಕ್ಷೆ ಪೂರ್ಣ ಯಶಸ್ವಿಯಾಗಿದ್ದು, ಶೇ. 99.6 ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. …
Read More »ಅಸೆಂಬ್ಲಿಯನ್ನು ವಿಸರ್ಜಿಸಲು ಶಿಫಾರಸು ಮಾಡ್ತಾರಾ ಸಿಎಂ!
ಬೆಂಗಳೂರು, ಜು.20- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯಿಂದ ವಾಪಸಾದ ಎರಡು ದಿನಗಳ ನಂತರವೂ ನಾಯಕತ್ವ ಬದಲಾವಣೆಯ ಚರ್ಚೆ ಮುಂದುವರಿಯುತ್ತಲೇ ಇದೆ. ದೆಹಲಿಯಲ್ಲಿ ನಡೆದ ಚರ್ಚೆಗಳು ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ಯಾವುದೇ ಸ್ಪಷ್ಟತೆ ಸಿಗುತ್ತಿಲ್ಲ. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಕೆಲ ಸಚಿವರು ಹೇಳುತ್ತಿದ್ದಾರೆ. ಆದರೆ, ಈ ತಿಂಗಳ ಅಂತ್ಯದಲ್ಲಿ ಅಥವಾ ಆಗಸ್ಟ್ ತಿಂಗಳಿನಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದು ಎಂದು ಪಕ್ಷದೊಳಗಿನ ಕೆಲವರು ಹೇಳುತ್ತಿದ್ದಾರೆ. ಜುಲೈ 26ರಂದು …
Read More »ರಾಜ್ಯದಲ್ಲಿ ನಾಳೆ ಮಳೆ ಅಬ್ಬರ,ಹಲವೆಡೆ ರೆಡ್ ಅಲರ್ಟ.
ಬೆಂಗಳೂರು : ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿರುವ ಮಳೆ, ಮುಂದಿನ 48 ಗಂಟೆಗಳು ಮತ್ತಷ್ಟು ಬಿರುಸುಗೊಳ್ಳಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಜುಲೈ 19, 20 ರಂದು ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ವೇಳೆ 204 ಮಿಮೀ. ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಈ ಭಾಗಗಳಲ್ಲಿ ಈಗಾಗಲೇ ಎಡೆಬಿಡದೆ ಮಳೆ ಸುರಿಯುತ್ತಿರುವ …
Read More »BREAKING NEWS : ನಾಳೆಯಿಂದ ‘ಥಿಯೇಟರ್’, ಜುಲೈ.26ರಿಂದ ‘ಪದವಿ ಕಾಲೇಜು’ಗಳ ಆರಂಭ!
ಬೆಂಗಳೂರು : ಇಂದು ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ರ ಕುರಿತು ಚರ್ಚೆ ನಡೆಸಿದರು. ಈ ಸಭೆಯಲ್ಲಿ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಚಿತ್ರಮಂದಿರ ಹಾಗೂ ಜುಲೈ.26ರಿಂದ ಪದವಿ ಕಾಲೇಜುಗಳನ್ನು ತೆರೆಯೋದಕ್ಕೆ ಅನುಮತಿಸುವಂತ ನಿರ್ಣಯವನ್ನು ಕೈಗೊಂಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದ್ದು, ನಾಳೆಯಿಂದ ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿಗೊಳಿಸಲಾಗುತ್ತಿದೆ. ಈ ಮಾರ್ಗಸೂಚಿಯಂತೆ ನೈಟ್ ಕರ್ಪ್ಯುನ್ನು ರಾತ್ರಿ 10 …
Read More »ವಾಯುಭಾರ ಕುಸಿತ, ಇಂದು ನಾಳೆ ಕರ್ನಾಟಕದಲ್ಲಿ ಹಲವೆಡೆ ಬಾರಿ ಮಳೆ. ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ನೋಡಿ?
ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು (ಜುಲೈ 17) ಮತ್ತು ನಾಳೆ (ಜುಲೈ 18) ಸಹ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ (Monsoon 2021). ಕಾವೇರಿ ನದಿಯ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ನದಿ ತೀರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಭಾರೀ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು …
Read More »ಬಾಕಿ ಉಳಿದಿರುವ ಡಿಪ್ಲೊಮಾ, ಪದವಿ ಪರೀಕ್ಷೆಗಳಿಗೆ ದಿನಾಂಕ ನಿಗದಿ
ಬೆಂಗಳೂರು: ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್ ಮತ್ತು ಅಕ್ಟೋಬರ್ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಎಲ್ಲ ವಿಶ್ವವಿದ್ಯಾಲಯ ಹಾಗೂ ಪಾಲಿಟೆಕ್ನಿಕ್‌ಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರದಂದು ಪರೀಕ್ಷೆಗಳು ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಮಂಡಳಿ ಸದಸ್ಯರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ …
Read More »