ಬೆಳಗಾವಿ: “ಡಾ.ಬಿ.ಆರ್. ಅಂಬೇಡ್ಕರ್ ಅವರಿಂದ ದೇಶದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಹಾಗೂ ಗೌರವ ದೊರೆತಿದೆ” ಎಂದು ಸತೀಶ ಶುಗರ್ಸ್ ನಿರ್ದೇಶಕಿ ಹಾಗೂ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅಭಿಪ್ರಾಯಪಟ್ಟರು. ತಾಲೂಕಿನ ಹುದಲಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಮಹಿಳೆಯರಿಗೆ ಸಮಾನತೆ ದೊರಕಿಸಿಕೊಡುವಲ್ಲಿ ಅಂಬೇಡ್ಕರ್ ಅವರ ಪಾತ್ರ …
Read More »*ರಮೇಶ್ ಜಾರಕಿಹೊಳಿ ಅವರನ್ನು ಅಧಿಕಾರದಿಂದ ತೆಗೆಯಲು ಷಡ್ಯಂತ್ರ ನಡೆದಿದೆ: ಬಾಲಚಂದ್ರ ಜಾರಕಿಹೊಳಿ*
ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೋಳಿ ಅವರ ವಿರುದ್ದ ಷಟ್ಯಂತ್ರ ಮಾಡಲಾಗಿದೆ ಎಂದು ಅವರ ಸಹೋದರ, ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೋಳಿ ಹೇಳಿದರು. ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಷಡ್ಯಂತ್ರದಲ್ಲಿ ನಾಲ್ಕು ಮಂದಿ ಭಾಗಿಯಾಗಿದ್ದಾರೆ. ಹಾಗೂ ಸಂತ್ರಸ್ಥ ಯುವತಿಗೆ 50 ಲಕ್ಷದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದರು. ಆದರೆ ನಾಲ್ವರ ಹೆಸರನ್ನು ಈಗಲೇ ಬಹಿರಂಗಪಡಿಸಲ್ಲ. ಷಡ್ಯಂತ್ರದ ಹಿಂದೆ ಕಾಣದ ಕೈಗಳ ಕೈವಾಡ ಇದೆ. …
Read More »ಸಾಹುಕಾರ್ ವಿರುದ್ಧ ನೀಡಿದ ದೂರು ವಾಪಸ್ ॥ ಸತ್ಯ ಮೇವ ಜಯತೆ ಎಂದ ಅಭಿಮಾನಿಗಳು.
ಗೋಕಾಕ : ಗೋಕಾಕ ಸಾಹುಕಾರ ರಮೇಶ್ ಜಾರಕಿಹೊಳಿ ಅವರ CD ಕೇಸ್ಗೆ ಸಂಬಂಧಿಸಿದಂತೆ ನೀಡಿದ್ದ ದೂರನ್ನು ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆದಿದ್ದಾರೆ. ಇಂದು ಈ ಪ್ರಕರಣಕ್ಕೆ ಹೊಸ ಟ್ವೀಸ್ಟ ಸಿಕ್ಕಿದ್ದು ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ದೂರಿನ ಕೇಸ್ ವಕೀಲರ ಮೂಲಕ ವಾಪಸ್ ಪಡೆಯಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರಿನ ವಿಚಾರದಲ್ಲಿ ದಿನೇಶ್ ಕಲ್ಲಹಳ್ಳಿ ಬಹುದೊಡ್ಡ ಯೂ-ಟರ್ನ್ ಹೊಡೆದಿದ್ದು, ನೀಡಿದ್ದ ದೂರು ವಾಪಸ್ ಪಡೆದಿದ್ದಾರೆ. ಇನ್ನು ಮಾರ್ಚ್ …
Read More »ನವೀಕರಣಗೊಂಡ ಅಂಬೇಡ್ಕರ್ ಮೂರ್ತಿ ಪರಿಶೀಲಿಸಿದ ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕ ಸಭೆ ನಡೆಸಿ, ಕುಂದುಕೊರತೆ ಆಲಿಸಿದರು. ಸಭೆಯ ನಂತರ ಪಾಲಿಕೆಯ ಆವರಣದಲ್ಲಿರುವ ನವೀಕರಿಸಲಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಯನ್ನು ಪರಿಶೀಲಿಸಿದರು. ಮೂರ್ತಿಯ ಸುತ್ತ ಉದ್ಯಾನ ಹಾಗೂ ದೀಪಾಲಂಕಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ಟಿ ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ, ಪಾಲಿಕೆಯ …
Read More »ಕೌಜಲಗಿಯಲ್ಲಿ ‘ಹರ್ ಘರ್ ಜಲ್’ ಕಾಮಗಾರಿಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ ಮೂಡಲಗಿ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ …
Read More »ಗೋಕಾಕ ಸಾಹಿತ್ಯ ಸಮ್ಮೇಳನಕ್ಕೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸುವುದಾಗಿ ಕನ್ನಡಪರ ಸಂಘಟನೆಗಳ ಎಚ್ಚರಿಕೆ.
ಗೋಕಾಕ: ಇದೇ ತಿಂಗಳು 27 ರಂದು ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರ ವಿರುದ್ದ ಗೋಕಾಕ ಗ್ರಾಮೀಣ ಭಾಗದ ಕನ್ನಡ ಪರ ಸಂಘಟನೆಗಳು ಘಟಪ್ರಭಾ ನಗರದಲ್ಲಿ ಗುರುವಾರ ಸಂಜೆ ಸಭೆ ಸೇರಿ ತೀವ್ರ ವಿರೊಧ ವ್ಯಕ್ತ ಪಡಿಸಿದರು. ಈ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ ಅವರು ಈ ಸಮ್ಮೇಳನದ ಆಮಂತ್ರಣ ಪತ್ರಿಕೆಯಲ್ಲಿ ಗ್ರಾಮೀಣ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಗ್ರಾಮೀಣ ಭಾಗದ ಘಟಾನುಘಟಿ ಕನ್ನಡ …
Read More »ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು: ರಾಹುಲ್ ಜಾರಕಿಹೊಳಿ ಆಗ್ರಹ
ಗೋಕಾಕ: “ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೋವಿಡ್ ನಿಂದಾಗಿ ಜನರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ, …
Read More »ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …
Read More »*ಮಹದಾಯಿ ವಿವಾದ:ನ್ಯಾಯಾಂಗ ನಿಂದನೆಗೆ ಸಂಬಂಧಿಸಿ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿಲ್ಲ-ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ
ನವದೆಹಲಿ : ಕರ್ನಾಟಕ ಮತ್ತು ಗೋವಾ ನಡುವೆ ತಲೆದೋರಿರುವ ಮಹದಾಯಿ ನದಿ ನೀರು ಹಂಚಿಕೆ ಸಂಬಂಧದ ಗೋವಾ ವಾದಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟ್ ಜಂಟಿ ಸಮಿತಿಯಿಂದ ಸ್ಥಳ ಪರಿಶೀಲನೆಗೆ ಆದೇಶಿಸಿದೆಯೇ ಹೊರತು ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಜಲ ಸಂಪನ್ಮೂಲ ಸಚಿವ *ರಮೇಶ್ ಜಾರಕಿಹೊಳಿ* ಸ್ಪಷ್ಟನೆ ನೀಡಿದ್ದಾರೆ. ವಿವಿಧ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಸಂಬಂಧ ಉದ್ಭವಿಸಿರುವ ಬಿಕ್ಕಟ್ಟಿಗೆ ಪ್ರತಿಯಾಗಿ ನವದೆಹಲಿ ಪ್ರವಾಸ …
Read More »ಕಾಕತಿ ಪಂಚಾಯಿತಿಯಲ್ಲಿ ಸಾರ್ವಜನಿಕರ ಕಂದು ಕೊರತೆ ಆಲಿಸಿದ ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು, ಕಾಕತಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ಒಳ ಚರಂಡಿ ಹಾಗೂ ರಸ್ತೆ ಸಮಸ್ಯೆಗಳ ಕುರಿತು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು. ಇವರ ಸಮಸ್ಯೆಗೆ ಸ್ಪಂದಿಸಿದ ಶಾಸಕರು ಶೀಘ್ರದಲ್ಲೇ ನೆರವೇರಿಸುವ ಬಗ್ಗೆ ಬರವಸೆ ನೀಡಿದರು, ಉದೋಗ ಖಾತರಿ ಯೋಜನೆ ಸದುಪಯೋಗ ಪಡೆಸಿಕೊಂಡು ಗ್ರಾಮ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು. …
Read More »
CKNEWSKANNADA / BRASTACHARDARSHAN CK NEWS KANNADA