Breaking News

ರಾಷ್ಟ್ರೀಯ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ!

ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ …

Read More »

ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ & ರಮೇಶ್ ಜಾರಕಿಹೊಳಿ‌ ಭೇಟಿ !ಮಹಾ ರಾಜಕಾರಣದಲ್ಲಿ ಭಾರಿ ಸಂಚಲನ..

ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಮತ್ತು ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ಮುಖಂಡರಾದ ಕರ್ನಾಟಕದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ‌ …

Read More »

ಮೇಕೆದಾಟು ; ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ‌*

ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಕೇಂದ್ರ ಜಲಶಕ್ತಿ ಸಚಿವರಾದ *ಶ್ರೀ ಗಜೇಂದ್ರ ಸಿಂಗ್ ಶೇಖಾವತ್* ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ …

Read More »

ಮೇಕೆದಾಟು, ಎತ್ತಿನಹೊಳೆ ನೀರಾವರಿ ಯೋಜನೆ : ಶೀಘ್ರವೇ ದೆಹಲಿಗೆ ಸಿಎಂ ನೇತೃತ್ವದ ನಿಯೋಗ – ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.

ಬೆಂಗಳೂರು : ರಾಜ್ಯದಲ್ಲಿನ ಮಹತ್ವದ ಮೇಕೆದಾಟು, ಎತ್ತಿನಹೊಳೆ ಯೋಜನೆ ಸಹಿತ ಬೃಹತ್ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ತಾಂತ್ರಿಕ ಮತ್ತು ಕಾನೂನು ತೊಡಕುಗಳ ನಿವಾರಣೆಗೆ ತಕ್ಷಣದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹೊಸದಿಲ್ಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನಕ್ಕೆ ಕೆಲ ಕಾನೂನು ಮತ್ತು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು …

Read More »

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ ನಷ್ಟವಾಗಿದೆ. …

Read More »

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ.

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು …

Read More »

ಅಧಿಕೃತವಾಗಿ ಬಿಜೆಪಿಗೆ ಸಿಂಗಂ ಅಣ್ಣಾಮಲೈ ಸೇರ್ಪಡೆ…..!

ಬೆಂಗಳೂರು : ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾದರು. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ, 2019 ರ ಮೇ ತಿಂಗಳಲ್ಲಿ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದರು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾದರು. ಅಣ್ಣಾಮಲೈ ಬಿಜೆಪಿಗೆ ಸೇರಿದ ನಂತರದಲ್ಲಿ ಮಾತನಾಡಿದ ಮುರಳೀಧರ್​ ರಾವ್​, ತಮಿಳುನಾಡಿನಲ್ಲಿ ಹಲವಾರು ಜನ ಬಿಜೆಪಿ ಸೇರುತ್ತಿದ್ದಾರೆ. ಈಗ …

Read More »

ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ಪಾತ್ರ ದೊಡ್ಡದು : ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೆಚ್ಚುಗೆ.

ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಬಹುದಾದ ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ಪಾತ್ರ ದೊಡ್ಡದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಗಳ ಕಿರುಹೊತ್ತಿಗೆ ಜಲಯಜ್ಞ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿವರ್ಷ ಮಹಾರಾಷ್ಟ್ರ ಭಾಗದಲ್ಲಿ ಕುಂಭದ್ರೋಣ ಮಳೆ ಆದಾಗಲೆಲ್ಲಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ಪ್ರವಾಹ ಪರಿಸ್ಥಿತಿ …

Read More »

ಹೈದರಾಬಾದ್: ತಹಶೀಲ್ದಾರ್ ಮನೆ ಮೇಲೆ ಎಸಿಬಿ ದಾಳಿ ಒಂದು ಕೋಟಿ ರೂಪಾಯಿ ಜಪ್ತಿ!

ಹೈದರಾಬಾದ್​​: ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ತಹಸೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ. ತೆಲಂಗಾಣದಲ್ಲಿ ನಿನ್ನೆ ತಹಶೀಲ್ದಾರ್​​ವೊಬ್ಬರ ಮನೆ ಮೇಲೆ ನಡೆದ ಎಸಿಬಿ ದಾಳಿ ವೇಳೆ ಬರೋಬ್ಬರಿ 1 ಕೋಟಿ ರೂಪಾಯಿಗೂ ಅಧಿಕ ಮೊತ್ತದ ನಗದು ಹಣವನ್ನ ಜಪ್ತಿ ಮಾಡಲಾಗಿದೆ. ಮೆಡ್ಚಲ್-ಮಲ್ಕಜ್ಗಿರಿ ಜಿಲ್ಲೆಯ ಕೀಸಾರಾ ತಹಶೀಲ್ದಾರ್​ ಇರ್ವ ಬಾಲರಾಜು ನಾಗರಾಜು, ತಮ್ಮ ಮನೆಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆ ನಾಗರಾಜು ಹಾಗೂ …

Read More »

ಸ್ವಾತಂತ್ರ್ಯ ದಿನಾಚರಣೆ ಪ್ರಶಸ್ತಿ: ರಾಜ್ಯದ 19 ಪೊಲೀಸರಿಗೆ ಗೌರವ

ಹೊಸದಿಲ್ಲಿ: ಸ್ವಾತಂತ್ರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿಗೆ ಈ ಬಾರಿ ರಾಜ್ಯದ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗಿದ್ದಾರೆ. ಕೇಂದ್ರ ಗೃಹ ಇಲಾಖೆ  ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಕರ್ನಾಟಕ ಪೊಲೀಸ್ ಸಿಐಡಿ ಎಎಸ್‌ಐ ಪ್ರಸನ್ನ ಕುಮಾರ್‌ ಅವರಿಗೆ ರಾಷ್ಟ್ರಪತಿ ಪದಕ ನೀಡಲಾಗಿದೆ. ಇನ್ನು ರಾಜ್ಯದ 18 ಪೊಲೀಸರಿಗೆ ಪ್ರಶಂಸನೀಯ ಸೇವಾ ಪದಕ ನೀಡಿ ಗೌರವಿಸಲಾಗಿದೆ. 1. ಹೇಮಂತ್‌ಕುಮಾರ್ ರಂಗಪ್ಪ-DSP, ಲೋಕಾಯುಕ್ತ 2. ಪರಮೇಶ್ವರ್ ಹೆಗ್ಡೆ-DSP, ಆರ್ಥಿಕ ಅಪರಾಧ ಇಲಾಖೆ …

Read More »