Breaking News

Uncategorized

ದೇವರು ಮತ್ತು ಮತದಾರರ ಆಶೀರ್ವಾದದಿಂದ ನಮ್ಮ ಗುಂಪಿಗೆ ಬಿಡಿಸಿಸಿ ಬ್ಯಾಂಕ್ ಆಡಳಿತ ಚುಕ್ಕಾಣಿ – ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ದೇವರು ಮತ್ತು ಸಹಕಾರ ಕ್ಷೇತ್ರದ ಮತದಾರರ ಆಶೀರ್ವಾದದಿಂದ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ ಚುಕ್ಕಾಣಿ ಹಿಡಿಯುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ವಿಶ್ವಾಸ ವ್ಯಕ್ತಪಡಿಸಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಬ್ಯಾಂಕಿನ ಪ್ರಚಾರಾರ್ಥವಾಗಿ ಜಿಲ್ಲೆಯ …

Read More »

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ ಹೊಂದಿದ ಮನ್ನಿಕೇರಿ ಅವರಿಗೆ 2 ಕಿಲೋ ತೂಕದ ಬೆಳ್ಳಿಯ ಆಕರ್ಷಕ ಗಣೇಶನ ವಿಗ್ರಹ, ಭಗವದ್ಗೀತೆ ನೀಡಿ ಸತ್ಕರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ-* ಮೂಡಲಗಿ ವಲಯವು ಶೈಕ್ಷಣಿಕವಾಗಿ ಸುಧಾರಿಸುವಲ್ಲಿ ನಿರ್ಗಮಿತ ಬಿಇಓ ಅಜೀತ ಮನ್ನಿಕೇರಿ ಅವರ ಪಾತ್ರ ಗಣನೀಯವಾಗಿದ್ದು, ಈಗಿರುವ ಗುಣಮಟ್ಟದ ಶಿಕ್ಷಣವನ್ನು ಮುಂದುವರೆಸಿಕೊಂಡು ಹೋಗಲು ಶಾಸಕ, ಬೆಮುಲ್ …

Read More »

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ ಭೂಮಿ ಪೂಜೆಯನ್ನು ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯರಾದ ಶ್ರೀಮತಿ ವನಶ್ರೀ ಸಾಯನ್ನವರ, ಮಾಜಿ ನಗರ ಸಭೆ ಸದಸ್ಯರಾದ ಲಕ್ಷ್ಮಣ ಖಡಕಭಾಂವಿ, ನಗರದ ಪ್ರಮುಖರಾದ ರಾಯಪ್ಪ ಗುದಗನ್ನವರ, ಬಸವರಾಜ ಪೋಟಿ, ರಿಯಾಜ್ ಮುಲ್ಲಾ, ಲಕ್ಷ್ಮಣ ಕಿಲಾರಿ, ಬನ್ನಿಶೇಟ್ಟಿ ಅಜ್ಜಾ, ಶಂಕರ …

Read More »

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.‌ ನಿರಂತರ ಮಳೆಯಿಂದ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಆದ್ದರಿಂದ ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಮಾಡಿದ್ದಾರೆ.   ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ವಿಷಯ ತಿಳಿಸಿದ ಅವರು, ಹಿಡಕಲ್ ಜಲಾಶಯ …

Read More »

*ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ* *10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಹಾಲು ಉತ್ಪಾದಕ ಸಹಕಾರಿ ಸಂಘಗಳ ರೈತರಿಗೆ 6 ಕೋಟಿ ರೂಪಾಯಿ ವೆಚ್ಚದ ರಬ್ಬರ್ ಮ್ಯಾಟ್, ವಿದ್ಯುತ್ ಚಾಲಿತ 2 ಹೆಚ್.ಪಿ. ಮೇವು ಕತ್ತರಿಸುವ ಯಂತ್ರಗಳು, ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ*- ಜಿಲ್ಲಾ ಹಾಲು ಒಕ್ಕೂಟಕ್ಕೆ ಕಳೆದ ವರ್ಷ ಸುಮಾರು 13 ಕೋಟಿ ರೂಪಾಯಿಗಳ ಲಾಭಾಂಶವಾಗಿದ್ದು, ಈ ಲಾಭಾಂಶದಲ್ಲಿ ಸುಮಾರು 10 ಕೋಟಿ ರೂಪಾಯಿಗಳಷ್ಟು ಹಣವನ್ನು ರೈತರಿಗಾಗಿಯೇ ವಿವಿಧ ಯೋಜನೆಗಳಿಗಾಗಿ ಮೀಸಲಿಟ್ಟಿರುವುದಾಗಿ ಬೆಮುಲ್ …

Read More »

*ಒಂದೇ ಮಂದಿರದಲ್ಲಿ ಭಕ್ತರಿಗೆ ಶಿರಡಿ ಸಾಯಿಬಾಬಾ ಮತ್ತು ಪುಟ್ಟಪರ್ತಿ ಸಾಯಿಬಾಬಾರ ದರ್ಶನ ಭಾಗ್ಯ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ-* ಪಟ್ಟಣದ ಸತ್ಯಸಾಯಿ ಸೇವಾ ಸಮೀತಿಯವರು ಸಾರ್ವಜನಿಕರು ಮತ್ತು ವಿವಿಧ ಸಂಘ- ಸಂಸ್ಥೆಗಳ ವಂತಿಗೆಯಲ್ಲಿ ಭವ್ಯವಾಗಿ ನಿರ್ಮಿಸಿರುವ ಸಾಯಿ ಮಂದಿರವು ಭಕ್ತರನ್ನು ಆಕರ್ಷಿಸುವ ಸುಂದರವಾದ ಮಂದಿರವಾಗಿದೆ. ಸಾಯಿಬಾಬಾ ಸಕಲ ಭಕ್ತರ ಸಂಕಷ್ಟಗಳನ್ನು ನಿವಾರಿಸಿ ಎಲ್ಲರಲ್ಲಿಯೂ ಪ್ರೀತಿ, ಸಹನೆ ಮೂಡುವಂತಾಗಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಗುರುವಾರದಂದು ಪಟ್ಟಣದ ಲಕ್ಷ್ಮೀ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಸಾಯಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿಯಲ್ಲಿಯೇ ಸುಂದರವಾದ ಮಂದಿರವನ್ನು ನಿರ್ಮಿಸಲು …

Read More »

*ನಾಗನೂರ ಪಟ್ಟಣದಲ್ಲಿ ರಾತ್ರಿ ೧೨ ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ*- ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ರಾತ್ರಿ ೧೨.೦೦ ಗಂಟೆಯ ಸಮಯದಲ್ಲಿ ನಾಗನೂರ ಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸುವ ಅವಕಾಶ ದೊರೆತಿರುವುದು ನನ್ನ ಅದೃಷ್ಟವೆಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ನಾಗನೂರ ಪಟ್ಟಣದ ಮಾಧವಾನಂದ ಆಶ್ರಮದ ಬಳಿ ೭೯ ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ಮೂಡಲಗಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಬರುವ ಸಂದರ್ಭದಲ್ಲಿ ನಾಗನೂರ ಪಟ್ಟಣದ ಪ್ರಮುಖರು ಸೇರಿಕೊಂಡು ಇಲ್ಲಿಯೇ ಧ್ವಜಾರೋಹಣ ನೆರವೇರಿಸಿಕೊಂಡು …

Read More »

*ಮೂಡಲಗಿಯಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ: ಅಸಂಘಟಿತ ಕಾರ್ಮಿಕರು, ಬಡ ಜನರಿಗೆ ಇಂದಿರಾ ಕ್ಯಾಂಟಿನ್ ವರದಾನವಾಗಿದ್ದು, ಕಡಿಮೆ ದರದಲ್ಲಿ ಉಪಹಾರ ಮತ್ತು ಊಟದ ಸೌಲಭ್ಯಗಳನ್ನು ಹೊಂದಿರುವ ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಿಗೆ ಕರೆ ನೀಡಿದರು. ಗುರುವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ತೆರೆಯಲಾದ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಅವರು, ಬಡ ಬಗ್ಗರಿಗೆ ಇದು ಉಪಯುಕ್ತವಾಗಿದೆ ಎಂದು ತಿಳಿಸಿದರು. ಕಡಿಮೆ ದರದಲ್ಲಿ ಬೆಳಗಿನ ಉಪಹಾರ ಮತ್ತು …

Read More »

ಸಹಕಾರಿ ಸಚಿವ ಕೆಎನ್‌ ರಾಜಣ್ಣ ದಿಡೀರ್ ರಾಜೀನಾಮೆ!

ರಾಜ್ಯ ಕಾಂಗ್ರೆಸ್ ಸರ್ಕಾರದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಹೈಕಮಾಂಡ್ ನೇರ ಸೂಚನೆಯ ಮೇರೆಗೆ ನಡೆದಿದೆ ಎಂದು ತಿಳಿದುಬಂದಿದೆ. ರಾಜಣ್ಣ ಅವರು ಇತ್ತೀಚೆಗೆ ಕೊಟ್ಟ ವಿವಾದಾತ್ಮಕ ಹೇಳಿಕೆಗಳು ಮತ್ತು ಪಕ್ಷದ ವಿರುದ್ಧದ ಟೀಕೆಗಳು ಈ ನಿರ್ಧಾರಕ್ಕೆ ಕಾರಣವಾಗಿವೆ.ರಾಜಣ್ಣ ಅವರು ಇತ್ತೀಚೆಗೆ ನೀಡಿದ ಹೇಳಿಕೆಯಲ್ಲಿ, ‘ನಮ್ಮ ಸರ್ಕಾರವಿದ್ದಾಗಲೇ ಮತದಾರರ ಪಟ್ಟಿ ಮಾಡಲಾಗಿತ್ತು. ಆಗ ನಮ್ಮವರು ಕಣ್ಣು ಮುಚ್ಚಿಕೊಂಡು …

Read More »

*ಅವಿರೋಧ ಆಯ್ಕೆಗೆ ಪ್ರಾಮಾಣಿಕ ಪ್ರಯತ್ನ; ಬ್ಯಾಂಕಿನ ಅಭಿವೃದ್ಧಿ ಜತೆಗೆ ರೈತರ ಏಳ್ಗೆಯೇ ನಮಗೆ ಮುಖ್ಯ. ಯಾವುದೇ ಸ್ವಾರ್ಥವಿಲ್ಲ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ಬೈಲಹೊಂಗಲ ಪ್ರಚಾರ ಕಾರ್ಯದಲ್ಲಿ ಭಾಗಿಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ* *ಬೈಲಹೊಂಗಲ್*: ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ನಾಯಕರ ಸಹಕಾರದೊಂದಿಗೆ ಅವಿರೋಧವಾಗಿ ಆಯ್ಕೆ ಮಾಡುವ ಉದ್ದೇಶ ಇದೇಯಾದರೂ ಕೆಲವು ಕಡೆಗಳಲ್ಲಿ ಒಮ್ಮತದ ಆಯ್ಕೆ ಮೂಡುತ್ತಿಲ್ಲ. ಆದರೂ ಅವಿರೋಧ ಆಯ್ಕೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಚಿಕ್ಕ ಬಾಗೇವಾಡಿ ಹತ್ತಿರ …

Read More »