ಅಥಣಿ: ಬ್ರಿಟಿಷರು ಭಾರತ ಬಿಟ್ಟು ಹೋದ ಬಳಿಕ ಕಾಂಗ್ರೆಸ್ ಪಕ್ಷದ ಸರ್ವ ಪ್ರಧಾನಿಗಳು ದೇಶದಲ್ಲಿ ಡ್ಯಾಮ್ ಗಳನ್ನು ನಿರ್ಮಿಸಿದರು. ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಿದರು. ಆದರೆ ಬಿಜೆಪಿಯವರು ಒಂದೇ ಒಂದು ಡ್ಯಾಮ್ನ್ನು ದೇಶದಲ್ಲಿ ನಿರ್ಮಿಸಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅಥಣಿ ತಾಲೂಕಿನ ತೆಲಸಂಗದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಚಿಕ್ಕೋಡಿ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಪರ ಮತಯಾಚಿಸಿ ಮಾತನಾಡಿದ …
Read More »*ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ*
*ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್* *ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ ಮತ ಯಾಚಿಸಿದ ಮುಖಂಡರು* ಮೂಡಲಗಿ: ಕಾಂಗ್ರೆಸ್ಸಿಗರು ನನ್ನ ವಿರುದ್ಧವೇ ಸುಳ್ಳು ಪ್ರಚಾರ ಮಾಡುತ್ತಿದ್ದು, ಅವುಗಳನ್ನು ಬದಿಗೊತ್ತಿ ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಶಾಸಕ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ …
Read More »ಚಿಕ್ಕಲದಿನಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಬೆಳಗಾವಿ: ಕಾಂಗ್ರೆಸ್ ಪಕ್ಷದ ಸಿದ್ದಾಂತ, ಅಭಿವೃದ್ಧಿಯನ್ನು ಮೆಚ್ಚಿ ಚಿಕ್ಕಲದಿನಿ ಗ್ರಾಮದ ಹಲವರು ಬಿಜೆಪಿ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಂತಸ ತಂದಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಚಿಕ್ಕೋಡಿ ನಗರದ ನಿವಾಸದಲ್ಲಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚಿಕ್ಕಲದಿನಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವೇಳೆ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಿಳಿಸಿ ಈ ಭಾರಿ …
Read More »ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಸ್ವ-ಕ್ಷೇತ್ರದಲ್ಲೇ ಶಕ್ತಿ ಪ್ರದರ್ಶಿಸಿದ ಎನ್ಸಿಪಿ- ವಿಜಯ ಸಂಕಲ್ಪ ಸಮಾವೇಶದಲ್ಲಿ 15 ಸಾವಿರಕ್ಕೂ ಹೆಚ್ಚು ಜನ ಭಾಗಿ- ಕೈಗೆ ಬಲ ತುಂಬಿದ ಪವಾರ್
ಬೆಳಗಾವಿ: ಸದ್ಯ ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಮಹತ್ವದ್ದಾಗಿದ್ದು, ವಿಶ್ವದ ಗಮನ ಈ ಚುನಾವಣೆಯತ್ತ ನೆಟ್ಟಿದೆ. ಸ್ವಾತಂತ್ರ್ಯಾ ನಂತರ ದೇಶದ ಮೊದಲ ಪ್ರಧಾನಿಗಳಾಗಿದ್ದ ಪಂಡಿತ್ ಜವಾಹರಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರ ಕಾಲದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿತ್ತು. ಆದರೆ ಈಗ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸರ್ವಾಧಿಕಾರವನ್ನು ತರುತ್ತಿದ್ದು, ಪ್ರಧಾನಿ ಮೋದಿ ಭರವಸೆ ಮರುಭೂಮಿಯ ದಾಹವಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಹಾಗೂ ಎನ್ಸಿಪಿ ಮುಖ್ಯಸ್ಥ ಶರದ್ …
Read More »ಅರಭಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಭರ್ಜರಿ ಪ್ರಚಾರ
ಗೋಕಾಕ: ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆ ಆದರೆ ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ. ಆಗ ನಾವು ಕೇಂದ್ರದ ಅನೇಕ ಯೋಜನೆಗಳನ್ನು ಹಾಗೂ ಅನೇಕ ಮಹತ್ವದ ಕೆಲಸಗಳನ್ನು ನಮ್ಮ ಕ್ಷೇತ್ರಕ್ಕಾಗಿ ಮಾಡಿಸಬಹುದು. ಹಾಗಾಗಿ ಜಗದೀಶ ಶೆಟ್ಟರ್ ಅವರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳುಹಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಬುಧವಾರದಂದು …
Read More »ಹೈಟೆಕ್ ಮಾದರಿ ಹುಕ್ಕೇರಿ ಕೋರ್ಟ್ ಕಟ್ಟಡ ನಿರ್ಮಾಣ-ಸಚಿವ ಜಾರಕಿಹೊಳಿ*
ಹುಕ್ಕೇರಿ* : ಬಹುದಿನಗಳ ಬೇಡಿಕೆಯಾಗಿರುವ ಹುಕ್ಕೇರಿಯ ನ್ಯಾಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಪಟ್ಟಣದ ನ್ಯಾಯಾಲಯದ ಸಭಾಭವನದಲ್ಲಿ ಶುಕ್ರವಾರ ನಡೆದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಪರ ಮತಪ್ರಚಾರದಲ್ಲಿ ಮಾತನಾಡಿದ ಅವರು, ಹುಕ್ಕೇರಿ ಕೋರ್ಟ್ನ ನೂತನ ಕಟ್ಟಡ ನಿರ್ಮಾಣಕ್ಕೆ ಕ್ಯಾರಗುಡ್ ಬಳಿ ಈಗಾಗಲೇ ಅಗತ್ಯ ನಿವೇಶನ ಮಂಜೂರಾಗಿದೆ. ಶೀಘ್ರವೇ ಹೈಟೆಕ್ ಮಾದರಿ ಕಟ್ಟಡ …
Read More »ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ
ಬೆಳಗಾವಿ: ಮೇ 7ರಂದು ನಡೆಯಲಿರುವ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು. ನಿಪ್ಪಾಣಿಯ ಕರದಗಾ, ಹಾಗೂ ಭೋಜ ಜಿಪಂ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ 2013ರಲ್ಲಿ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಪ್ರಣಾಳಿಕೆಯಲ್ಲಿ 165 ಭರವಸೆಗಳನ್ನು ನೀಡಿತು 158 ಭರವಸೆಗಳನ್ನು ಈಡೇರಿಸಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ಶೂ …
Read More »ದಿ.28 ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ; ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ …
Read More »ಜೈನ ಮುನಿಗಳ ಆಶೀರ್ವಾದ ಪಡೆದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮದ್ದೇವಾಧಿದೇವ ಶ್ರೀ ಭಗವಾನ 1008 ಆದಿನಾಥ ತೀರ್ಥಂಕರರ ನೂತನ ಜಿನಮಂದಿರದ ಶಿಖರ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಪ್ರತಿಷ್ಠಾ ಮಹಾಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ.ಪೂ. ಶ್ರೀ 108 ಬಾಲಾಚಾರ್ಯ ಧರ್ಮಪ್ರಭಾವಕ ಸಿದ್ದಸೇನಾ ಮುನಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ …
Read More »*ಅಂಬೇಡ್ಕರ್ ವಿಶ್ವರತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕದಲ್ಲಿಂದು ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಅಸ್ಪೃಶ್ಯತೆ ನಿವಾರಣೆಗಾಗಿ ಮತ್ತು ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ಪುರುಷರು ಅಂಬೇಡ್ಕರ್ ಆಗಿದ್ದರು ಎಂದು ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಎನ್ಎಸ್ಎಫ್ ಕಛೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ೧೩೩ ನೇ ಜಯಂತಿ …
Read More »