Breaking News

Uncategorized

ಸಬ್ ರಿಜಿಸ್ಟರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ…!

ಬೆಳಗಾವಿ: ಬೆಳಗಾವಿಯ ಸಬ್ ರಿಜಿಸ್ಟರ್ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಚೇರಿಯಲ್ಲಿನ ಪ್ರತಿಯೊಂದು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ನ್ಯಾಯವಾದಿ ಶುಭವೀರ ಜೈನ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಹಿರಿಯ ಉಪನೊಂದಣಾಧಿಕಾರಿ ಕರಿಬಸವಗೌಡ ಪಿ, ಹಾಗೂ ಅವರ ಸಿಬ್ಬಂಧಿಗಳ ಮೇಲೆ ಭ್ರಷ್ಚಾರದ ಆರೋಪಗಳು ಕೇಳಿ ಬಂದ ಹಿನ್ನೆಲೆ ದಾಳಿ ನಡೆದಿದೆ. ಸಾರ್ವಜನಿಕರಿಂದ ಸಬ್ ರೆಜಿಸ್ಟಾರ್ ಕಚೇರಿಯ ಕುರಿತು ನಿರಂತರ ದೂರುಗಳು ಬಂದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ …

Read More »

ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜು : ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಯಬಾಗ: ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.  ರಾಯಬಾಗ ಪಟ್ಟಣದ ಮಹಾವೀರ ಭವನದಲ್ಲಿ ಮಂಗಳವಾರ ನಡೆದ ರಾಯಬಾಗ ತಾಲೂಕಿನ …

Read More »

*ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ*

ಶ್ರೀಮಠದ ಜಗದ್ಗುರು ಪಂಚಮಲಿಂಗೇಶ್ವರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಜಾರಕಿಹೊಳಿ- ಜೊಲ್ಲೆ *ನಿಡಸೋಸಿ* (ತಾ. ಹುಕ್ಕೇರಿ)- ಮೂರು ಶತಮಾನಗಳ ಭವ್ಯ ಇತಿಹಾಸ ಹೊಂದಿರುವ ನಿಡಸೋಸಿ ಶ್ರೀ ಮಠವು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗಗಳಲ್ಲಿ ಮಹತ್ತರ ಕೊಡುಗೆ ನೀಡಿದೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಶ್ಲಾಘನೆ ವ್ಯಕ್ತಪಡಿಸಿದರು. ಗುರುವಾರದಂದು ಸಂಜೆ ನಿಡಸೋಸಿ ಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ಮಾತನಾಡಿದ ಅವರು, ಧಾರ್ಮಿಕತೆಯ …

Read More »

ಕೆರೆಗೆ ನೀರು ತುಂಬಿಸುವ ಯೋಜನೆ; ರೈತರಿಗೆ ಎಲ್ಲ ರೀತಿಯಿಂದ ಅನುಕೂಲವಾಗಲಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಮನ್ನಿಕೇರಿ ಗ್ರಾಮದ ಸಾರ್ವಜನಿಕರಿಗೆ ಅನುಕೂಲವಾಗಲು ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಮುಂದಿನ‌ ದಿನಗಳಲ್ಲಿ ಈ ಯೋಜನೆಯಿಂದ ರೈತರಿಗೆ ಎಲ್ಲ ರೀತಿಯಿಂದ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಈಚೆಗೆ ಮನ್ನಿಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮೀದೇವಿ ದೇವಸ್ಥಾನವನ್ನು ಉದ್ಘಾಟಿಸಿ ಮಾತನಾಡಿದರು. ಈಗಾಗಲೇ ಈ ಭಾಗಕ್ಕೆ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಅನುಕೂಲ …

Read More »

*ಸಂಗನಕೇರಿಯಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ನಿರ್ಮಾಣ: ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ : ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತ ವ್ಯಾಪ್ತಿಯ ಸಂಗನಕೇರಿ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ  ನಿರ್ಮಾಣವಾಗಲಿರುವ ಸರ್ಕಾರಿ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿಸಿ …

Read More »

ಗೋವಾದಲ್ಲಿ ಕನ್ನಡಗರ ಮೇಲೆ ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಕರವೇ ಮನವಿ

ಗೋಕಾಕ : ಗೋವಾದಲ್ಲಿ ಕರ್ನಾಟಕ ಮೂಲದ ಟ್ರಕ್ ಚಾಲಕ ಅನೀಲ್ ರಾಠೋಡ ಮೇಲೆ ಹಲ್ಲೆ ಮಾಡಿದರ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶುಕ್ರವಾರದಂದು ತಹಶೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು‌. ಜುಲೈ 22 ರಂದು ಉತ್ತರ ಗೋವಾ ರಾಜ್ಯದ ಪೆರನೆಮ್ ನಗರದಲ್ಲಿ ಕರ್ನಾಟಕ ಮೂಲದ ಟ್ರಕ್ ಚಾಲಕ ಹಾಗೂ ಮಾಲಕರಾಗಿರುವ ಅನೀಲ್ ರಾಠೋಡ್ ಎಂಬ ವಿಜಯಪುರ ಕಲಕೇರಿ ಗ್ರಾಮದವರಾಗಿದ್ದು, ಗೋವಾದಲ್ಲಿ ಕಳೆದ ಸುಮಾರು …

Read More »

ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮಸಗುಪ್ಪಿ : ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧನಿರುವೆ. ಬೆಮುಲ್ ನಲ್ಲಿ ಎರಡು ಸ್ಥಾನಗಳಿಗೆ ನಿರ್ದೇಶಕರನ್ನು ನೇಮಕ ಮಾಡಲಾಗುತ್ತಿದ್ದು, ಅದರಲ್ಲಿ ಒಂದನ್ನು ಮೂಡಲಗಿ- ಗೋಕಾಕ ತಾಲ್ಲೂಕಿಗೆ ಸೇರಿರುವ ಭಗೀರಥ- ಉಪ್ಪಾರ ಸಮಾಜಕ್ಕೆ ಸೇರಿರುವ ರೈತಪರ ಕಾಳಜಿಯುಳ್ಳ ವ್ಯಕ್ತಿಯೊಬ್ಬರನ್ನು ನಿರ್ದೇಶಕನನ್ನಾಗಿ ಮಾಡಿಕೊಳ್ಳುತ್ತೇನೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭರವಸೆಯನ್ನು ನೀಡಿದರು. ಮೂಡಲಗಿ ತಾಲ್ಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಬುಧವಾರದಂದು ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ …

Read More »

*ಬಿಡಿಸಿಸಿ ಬ್ಯಾಂಕ್ ಚುನಾವಣೆ ಎದುರಿಸಲು ಸನ್ನದ್ಧ, ಶೀಘ್ರವೇ ಪ್ರಚಾರ: ಶಾಸಕ ಬಾಲಚಂದ್ರ ಜಾರಕಿಹೊಳಿ*

ಬೆಳಗಾವಿ- ಬರುವ ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮಾಜಿ ಸಂಸದ ಜೊಲ್ಲೆಯವರ ಯಕ್ಸಂಬಾ ಬ್ಯಾಂಕಿನಲ್ಲಿ ಮಂಗಳವಾರದಂದು ಸಭೆಯನ್ನು ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ. ಪ್ರಭಾಕರ ಕೋರೆ, ಗೋಕಾಕ ಶಾಸಕ ರಮೇಶ್‌ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಬಿಡಿಸಿಸಿ …

Read More »

*ಎನ್ಡಿಡಿಬಿ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರಿಗೆ ಗೌರವ ಸಮರ್ಪಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗುಜರಾತ್ (ಆನಂದ್ ನಗರ) ದಲ್ಲಿ ನಡೆಯುತ್ತಿರುವ ಎನ್ಸಿಡಿಎಫ್ಐ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಭಾಗಿಯಾಗಿರುವ ಎನ್ಸಿಡಿಎಫ್ಐ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಗುಜರಾತ್ ದಲ್ಲಿರುವ ಎನ್ಸಿಡಿಎಫ್ಐ ಹೊಸ ಕಟ್ಟಡ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎನ್ಡಿಡಿಬಿ ಚೇರಮನ್ನರೂ ಆಗಿರುವ ಎನ್ಸಿಡಿಎಫ್ಐ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರನ್ನು ಆಡಳಿತ ಮಂಡಳಿಯ ಸದಸ್ಯರು ಸತ್ಕರಿಸಿ, ಗೌರವಿಸಿದರು. ಎನ್ಸಿಡಿಎಫ್ಐ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ …

Read More »

*ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ : ಸಹಕಾರಿ ಸಂಘಗಳ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDFI) ಗುಜರಾತ್ ನ ಆನಂದ್ ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ನೂತನ ಕಟ್ಟಡವನ್ನು ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಷಾ ಅವರು ಲೋಕಾರ್ಪಣೆ ಮಾಡಿದರು. ಗುಜರಾತ್ ರಾಜ್ಯದಲ್ಲಿರುವ ಆನಂದ್ ನಗರದಲ್ಲಿ ನಿನ್ನೆ ಭಾನುವಾರದಂದು ಸುಮಾರು ೩೦ ಕೋಟಿ ರೂಪಾಯಿ ವೆಚ್ಚದ ಎನ್ಸಿಡಿಎಫ್ಐ ಕಚೇರಿಯ ನೂತನ ಕಟ್ಟಡವನ್ನು …

Read More »