Breaking News

Uncategorized

ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅಗಲಿಕೆಗೆ ಸಂತಾಪ ಸೂಚಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಗೋಕಾಕ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ತೀವ್ರ ನೋವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.  ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹದಲ್ಲಿ‌ ನಾನೂ ಕೂಡ ಭಾಗಿಯಾಗಿದ್ದೇನೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ …

Read More »

ಲಕ್ಷ್ಮೀ ದೇವಿ ದರ್ಶನ ಪಡೆದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ

ಹಲವು ವಿಶೇಷತೆಗಳಿಂದ ಕೂಡಿದ ತುಕ್ಕಾನಟ್ಟಿ ಹಸರಬ್ಬ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ      ಮೂಡಲಗಿ- ತುಕ್ಕಾನಟ್ಟಿ ಲಕ್ಷ್ಮೀ ದೇವಿಯ ಜಾತ್ರೆಯ ನಿಮಿತ್ಯವಾಗಿ ನಡೆಯುವ ಹಸರಬ್ಬವು ತನ್ನದೇಯಾದ ಪ್ರಸಿದ್ಧಿಯನ್ನು ಪಡೆದಿದ್ದು, ಹಲವು ವಿಶೇಷತೆಗಳಿಂದ ಕೂಡಿರುವ ತುಕ್ಕಾನಟ್ಟಿ ಹಸರಬ್ಬ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.        ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಗ್ರಾಮದ ಎಲ್ಲ …

Read More »

*ಒಗ್ಗಟ್ಟಿನ ಮಂತ್ರ ಜಪಿಸಿ ಅಭಿವೃದ್ಧಿಗೆ ನಾಂದಿ ಹಾಡಿದ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ*

ರಾಜಾಪೂರ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ      ಮೂಡಲಗಿ : ಗ್ರಾಮದ ಹಿರಿಯರು ಒಗ್ಗಟ್ಟಿನಿಂದ ಗ್ರಾಮಾಭಿವೃದ್ಧಿಯನ್ನು ಕೈಗೊಂಡು ರಾಜಾಪೂರ ಗ್ರಾಮದ ಅಭಿವೃದ್ಧಿಗೆ ಕಂಕಣಬದ್ಧರಾಗಿ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರರಾಗಿರುವುದು ಶ್ಲಾಘನೀಯವಾಗಿದೆ. ಒಗ್ಗಟ್ಟಿನ ಮೂಲಕ ಏನು ಬೇಕಾದರೂ ಸಾಧಿಸಬಹುದೆಂಬುದನ್ನು ಹಿರಿಯರು ಹಾಗೂ ಗ್ರಾಪಂ ಸದಸ್ಯರು ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು.      ಸನ್ 2022-23ನೇ ಸಾಲಿನ ರಾಜಾಪೂರ ಗ್ರಾಮ …

Read More »

*ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ರಂಗದಲ್ಲಿ ಶ್ರೀಗಳ ಪಾತ್ರ ಗಣನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಹುಣಶ್ಯಾಳ ಪಿಜಿ : ನಿಜಗುಣ ದೇವರ ಷಷ್ಠಬ್ಧಿ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ*    *ಮೂಡಲಗಿ :* ಎಲ್ಲರನ್ನು ಪ್ರೀತಿಸು. ಪ್ರೀತಿಯೇ ದೇವರು ಎಂಬ ತತ್ವವನ್ನು ಸಾರುತ್ತ, ಪಾದರಸದಂತೆ ಸದಾ ಓಡಾಡಿ ನಗುಮುಖದಿಂದಲೇ ತಮ್ಮ ಆತ್ಮೀಯ ವಲಯವೊಂದನ್ನು ಸೃಷ್ಟಿಸಿ ಹುಣಶ್ಯಾಳ ಪಿಜಿ ಕೀರ್ತಿಯನ್ನು ಎಲ್ಲೆಡೆ ಪಸರಿಸಿರುವ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮವನ್ನು ಅತೀ ವಿಜ್ರಂಭನೆಯಿಂದ ಆಚರಿಸಲು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ.  ರವಿವಾರದಂದು ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ …

Read More »

*ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್*

*ಮಹಾಲಕ್ಷ್ಮೀ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 6.80 ಕೋಟಿ ರೂ. ವ್ಯಯ : ಶಾಸಕ ರಮೇಶ ಜಾರಕಿಹೊಳಿ*     *ಗೋಕಾಕ* : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.     ಶನಿವಾರ ಸಂಜೆ ಇಲ್ಲಿಯ …

Read More »

*ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ*

ಯಾದವಾಡದಲ್ಲಿ ಎನ್‍ಆರ್‍ಎಂಎಲ್ ಯೋಜನೆಯಡಿ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ     *ಮೂಡಲಗಿ* : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ವರ್ಷಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ರಾಜಕೀಯ ಸ್ಥಾನಮಾನ ಪಡೆಯಲಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.     ತಾಲೂಕಿನ ಯಾದವಾಡ …

Read More »

*ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ರಾಮೇಶ್ವರ ಏತ ನೀರಾವರಿ ಯೋಜನೆಯ ವೆಂಕಟಾಪೂರ ಮುಖ್ಯ ಕಾಲುವೆಯನ್ನು ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*   *ಮೂಡಲಗಿ* : ರಾಮೇಶ್ವರ ಏತ ನೀರಾವರಿ ಯೋಜನೆಯಡಿ ಇದುವರೆಗೂ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಭಾಗದ ರೈತರಿಗೆ ತಮ್ಮ ಜಮೀನುಗಳಿಗೆ ನೀರು ಪೂರೈಸಲು ಹೊಸ ಚೇಂಬರ್ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. …

Read More »

*ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ತಮ್ಮ ಗೃಹ ಕಛೇರಿಯಲ್ಲಿ ಬಿಸಿಯೂಟ ಸಿಬ್ಬಂದಿಯನ್ನುದ್ಧೇಶಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ    *ಗೋಕಾಕ* : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.    ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರನ್ನುದ್ಧೇಶಿಸಿ ಮಾತನಾಡಿದ ಅವರು, ನಿಮ್ಮೆಲ್ಲ …

Read More »

ಯುವಕರಿಗೆ ರಾಹುಲ್‌ ಜಾರಕಿಹೊಳಿ ಮಾದರಿ: ಗುರು ಸಿದ್ದೇಶ್ವರ ಸ್ವಾಮೀಜಿ

ಉಭಯ ಶ್ರೀಗಳಿಂದ ಆಶೀರ್ವಾದ ಪಡೆದ ರಾಹುಲ್‌ ಜಾರಕಿಹೊಳಿ- 24ನೇ ಜನ್ಮದಿನ ನಿಮಿತ್ತ ಉಚಿತ ಕಣ್ಣಿನ ತಪಾಸಣೆ- ಅಪಾರ ಅಭಿಮಾನಿಗಳು ರಕ್ತದಾನ ಬೆಳಗಾವಿ: ಯುವಕರಿಗೆ ಮಾದರಿಯಾಗಿ, ನಿರಂತರ ಸಮಾಜ ಸೇವೆ ಸಲ್ಲಿಸುವ ಮೂಲಕ ಹೆಸರುವಾಸಿಯಾದ ಸತೀಶ್‌ ಶುಗರ್ಸ್‌ ನಿರ್ದೇಶಕ, ಯುವ ನಾಯಕ ರಾಹುಲ್ ಜಾರಕಿಹೊಳಿ ಸಮಾಜದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹತ್ತರಗಿಯ ಕಾರಿ ಮಠದ ಶ್ರೀ ಗುರು ಸಿದ್ದೇಶ್ವರ ಸ್ವಾಮೀಜಿ ಹರಿಸಿದರು. ಯಮಕನಮರಡಿ ಮತಕ್ಷೇತ್ರದ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ …

Read More »

ಅಂಕಲಗಿ-ಪಾಶ್ಚಾಪುರ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಗೋಕಾಕ: ಗೋಕಾಕ, ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಂಕಲಗಿ ಪಾಶ್ಚಾಪುರ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿಯವರು ಪರಿಶೀಲಿಸಿ, ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕಾಮಗಾರಿಯಲ್ಲಿ ಗುಣಮಟ್ಟದ ಕಾಯ್ದುಕೊಳ್ಳಲು ಸೂಚಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಿಸಬೇಕು. ರಸ್ತೆ ಕಾಮಗಾರಿಯಲ್ಲಿ ಕಳಪೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಎಜುಕೇಟಿವ್‌ ಇಂಜಿನಿಯರ್‌ ಎಸ್. ಎನ್.‌ ಬಳೊಲ್‌, …

Read More »