Breaking News

Uncategorized

*ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಕಳ್ಳಿಗುದ್ದಿ ಪಿಕೆಪಿಎಸ್ ಸಂಘದ ಎರಡನೇ ಮಹಡಿಯ ಉದ್ಘಾಟನೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*   *ಗೋಕಾಕ*: ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು ಇತ್ತಿಚೇಗೆ ತಾಲೂಕಿನ ಕಳ್ಳಿಗುದ್ದಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನವಾಗಿ ನಿರ್ಮಿಸಿದ …

Read More »

*ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿಯಲ್ಲಿ ಜರುಗಿದ ಪಿಡಿಓ ಮತ್ತು ವ್ಹಿಎಓ.ಗಳ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ*   *ಮೂಡಲಗಿ* : ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಗೃಹದಲ್ಲಿ ಬುಧವಾರದಂದು ಜರುಗಿದ ಅರಭಾವಿ ಕ್ಷೇತ್ರದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ …

Read More »

ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.!

ಗೋಕಾಕ: ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಭಗೀರಥ ಪೀಠ ಸ್ಥಾಪನೆ ಕಾಮಗಾರಿಗೆ ಚಾಲನೆ ನೀಡಲಾಗುವದು ಎಂದು ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಇಲ್ಲಿಯ ಮಹಾಂತೇಶ ನಗರದ ಹತ್ತಿರವಿರುವ ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ ಮಠ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿ, ಬೆಳಗಾವಿ, ವಿಜಯಪುರ, ಬಾಗಲಕೋಟ ಸೇರಿ …

Read More »

ದೂರದೃಷ್ಟಿ ಇಲ್ಲದ ಸಂಪೂರ್ಣ ನಿರಾಶಾದಾಯಕ ಬಜೆಟ್ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ: ಮೋದಿ ಸರ್ಕಾರದ ಬಜೆಟ್​ ಸಂಪೂರ್ಣ ನಿರಾಶಾದಾಯಕವಾಗಿದೆ. ಮಧ್ಯಮ ಮತ್ತು ಬಡವರ್ಗ ಸೇರಿದಂತೆ ಯಾರಿಗೂ ಬಜೆಟ್​ನಿಂದ ಅನುಕೂಲವಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಟೀಕಿಸಿದರು. ನಗರದಲ್ಲಿ ಬಜೆಟ್​ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದೆ. ಆದರೆ ಉದ್ಯೋಗ ಸೃಷ್ಟಿ ಮತ್ತು ಅದಕ್ಕೆ ಸಂಬಂಧಿಸಿ ವಿಷಯದಲ್ಲಿ ಬಜೆಟ್​ನಲ್ಲಿ ಏನೂ ಇಲ್ಲ. ಖಾಸಗಿ ಬಂಡವಾಳ ಹೂಡಿಕೆ ಹಾಗೂ ಎಮ್​ಎಸ್​ಎಮ್​ಇಗಳ ಸ್ಥಾಪನೆಗೆ ಅಗತ್ಯ ಕ್ರಮಗಳ ಬಗ್ಗೆಯೂ ತಿಳಿಸಿಲ್ಲ. …

Read More »

ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ 3.37 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇದರಿಂದ ಮಸಗುಪ್ಪಿ ಗ್ರಾಮದ ನಾಗರಿಕರಿಗೆ ಕುಡಿಯುವ ನೀರಿನ …

Read More »

RCU ನಡೆಗೆ ಬೇಸತ್ತ ವಿದ್ಯಾರ್ಥಿಗಳು…! ಹೇಳುವರೂ ಇಲ್ಲ ಕೇಳುವವರು ಇಲ್ಲ ವಿದ್ಯಾರ್ಥಿಗಳ ಪರದಾಟ.

ಬೆಳಗಾವಿ: ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಸ್ಟೂಡೆಂಟ್‌ ಪೋರ್ಟಲ್‌ನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ತಾಂತ್ರಿಕ ಸಮಸ್ಯೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) ವಿದ್ಯಾರ್ಥಿಗಳನ್ನು ಹೈರಾಣಾಗಿಸಿದೆ. ಆರ್‌ಸಿಯು ವ್ಯಾಪ್ತಿಯಲ್ಲಿ 400 ಪದವಿ ಕಾಲೇಜುಗಳಿದ್ದು, 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಿ.ಎ, ಬಿಬಿಎ, ಬಿಸಿಎ, ಬಿ.ಎಸ್ಸಿ, ಬಿಎಸ್‌ಡಬ್ಲ್ಯು 1, 3 ಮತ್ತು 5ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಂದ ಪರೀಕ್ಷಾ ಅರ್ಜಿ ಆಹ್ವಾನಿಸಲಾಗಿದ್ದು, ಜ.6ರಿಂದ 31ರವರೆಗೆ ಈ ಪೋರ್ಟಲ್‌ನಲ್ಲಿ ದಂಡರಹಿತವಾಗಿ …

Read More »

ದಲಿತ ಸಾಹಿತ್ಯ, ಚಿಂತನೆಗಳನ್ನು ಸಮಾಜದ ಜನತೆಗೆ ತಲುಪಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

4ನೇ ರಾಜ್ಯ ಮಟ್ಟದ ದಲಿತ ಲೇಖಕರ-ಚಿಂತಕರ ಸಮಾವೇಶ ಬೆಳಗಾವಿ: ದಲಿತ ಸಾಹಿತ್ಯ, ಚಿಂತಕರು ಇರುವಷ್ಟು ಬೇರೆಯವರು ಇಲ್ಲ. ಆದರೆ ದಲಿತ ಸಾಹಿತ್ಯ, ಚಿಂತನೆಗಳು ಸಮಾಜದ ಜನತೆಗೆ ಮುಟ್ಟುತ್ತಿಲ್ಲ. ಹೀಗಾಗಿ ದಲಿತ ಸಾಹಿತ್ಯ, ಚಿಂತನೆಗಳನ್ನು ಸಮಾಜಕ್ಕೆ ತಲುಪಿಸುವ ಕಾರ್ಯವನ್ನು ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.   ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ, ಕರ್ನಾಟಕ ರಾಜ್ಯ ಘಟಕ ಹಮ್ಮಿಕೊಂಡಿದ್ದ 4ನೇ ರಾಜ್ಯ …

Read More »

*ಕೌಜಲಗಿ ಹೊಸ ತಾಲೂಕು ರಚನಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ* *ಕೌಜಲಗಿ*(ತಾ.ಗೋಕಾಕ)- ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕೌಜಲಗಿ ಗ್ರಾಮದ ಬಲಭೀಮ ದೇವಸ್ಥಾನದ ಆವರಣದಲ್ಲಿ ತಾಲೂಕು ರಚನೆಗೆ ಸಂಬಂಧ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿಯೋಜಿತ ಕೌಜಲಗಿ ತಾಲೂಕು ಹೋರಾಟ ಚಾಲನಾ ಸಮಿತಿಯವರಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ …

Read More »

*ಮೂಡಲಗಿಗೆ “ಸಹಕಾರ ನಗರ” ಬಿರುದನ್ನು ನೀಡಲು ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ ಸಮಾರಂಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ* *ಮೂಡಲಗಿ* : ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಸಹಕಾರ ಸಂಘಗಳನ್ನು ಹೊಂದಿರುವ ಮೂಡಲಗಿ ಪಟ್ಟಣಕ್ಕೆ “ಸಹಕಾರ ನಗರ” ಎಂಬ ಬಿರುದನ್ನು ನೀಡಲು ಸರ್ಕಾರದ ಮಟ್ಟದ ಚಿಂತನೆ ನಡೆಸುತ್ತಿರುವುದಾಗಿ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ಪಟ್ಟಣದ ಬಸವ ರಂಗ ಮಂಟಪದಲ್ಲಿ ಜರುಗಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಮೃತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬೆನಚಿನಮರಡಿ (ಉ) ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …

Read More »