Breaking News

Uncategorized

*ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹೆಸ್ಕಾಂ ಹುಬ್ಬಳ್ಳಿ ವ್ಯವಸ್ಥಾಪಕ ನಿರ್ದೇಶಕ ರೋಷನ್ ಅವರು ಭೇಟಿ*

ಗೋಕಾಕ : ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರನ್ನು ಹೆಸ್ಕಾಂ ಹುಬ್ಬಳ್ಳಿ ವ್ಯವಸ್ಥಾಪಕ ನಿರ್ದೇಶಕ ರೋಷನ್ ಅವರು ಭೇಟಿಯಾಗಿದ್ದಾರೆ. ಇಂದು ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಆಗಮಿಸಿ ನೂತನ ಸಚಿವರಿಗೆ ಹೂವಿನ ಬುಕ್ಕೆ ನೀಡಿ ಅಭಿನಂದನೆ ಸಲ್ಲಿಸಿದರು,ನಂತರ ಹೆಸ್ಕಾಂ ಇಲಾಖೆಯ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು .

Read More »

ಕಳ್ಳತನ,ಕಳ್ಳತನ,ಕಳ್ಳತನ ಘಟಪ್ರಭಾದಲ್ಲಿ ಮತ್ತೆ ಕಳ್ಳರ ಕೈಚಳಕ..!

ಘಟಪ್ರಭಾ : ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಬಂಗಾರದ ಆಭರಣ ಸೇರಿದಂತೆ ನಗದು ಕಳ್ಳತನ ಮಾಡಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನಗಳು ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ಕೇಳಿಬರುತ್ತಿದ್ದವು, ಈಗ ಮತ್ತೆ ಖದೀಮರು ತಮ್ಮ ಕೈಚಳಕ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಘಟಪ್ರಭಾ ಸೇರಿದಂತೆ ಶಿಂಧಿಕುರಭೇಟ, ಅರಭಾವಿ, ಸಂಗನಕೇರಿ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನವಾಗಿವೆ. ಘಟಪ್ರಭಾ ಪಟ್ಟಣದ ಮಲ್ಲಿಕಾರ್ಜುನ ನಗರದ ಬಾರಾ ಕೂಟ್ …

Read More »

ವ್ಯಾಕ್ಸಿನ್ ಡಿಪೋದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ: ಜಂಟಿ ಸಭೆ ನಡೆಸಿ ಗೊಂದಲ ಪರಿಹರಿಸಲು ಸಚಿವ ಸತೀಶ್ ಜಾರಕಿಹೊಳಿ ನಿರ್ದೇಶನ

ಬೆಳಗಾವಿ, ಜು.1(ಕರ್ನಾಟಕ ವಾರ್ತೆ): ವ್ಯಾಕ್ಸಿನ್ ಡಿಪೋ ದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿ ಆರಂಭಿಸಿರುವುದಕ್ಕೆ ಸಂಬಂಧಿಸಿದಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ನಡೆಸಿ ಗೊಂದಲವನ್ನು ಬಗೆಹರಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು. ಬೆಳಗಾವಿ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಶನಿವಾರ (ಜು.1) ನಡೆದ ಸ್ಮಾರ್ಟ್ ಸಿಟಿ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕ ರಮೇಶ ಜಾರಕಿಹೊಳಿ

ಗೋಕಾಕ ಜು 1 : ನಾವು ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು ಮಾಜಿ ಸಚಿವ ,ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ಶನಿವಾರದಂದು ಅರಣ್ಯ ಇಲಾಖೆ ವತಿಯಿಂದ ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಕಾಣುತ್ತಿದೆ.ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ …

Read More »

ಇತಿಹಾಸ ಉಳಿಸಿ-ಬೆಳೆಸಲು ಮಹಾನ್ ಪುರುಷರ ಪ್ರತಿಮೆ ಅನಾವರಣ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಮಹಾನ್ ಪುರುಷರ ಇತಿಹಾಸ ತಿರುಚುವ ಪ್ರಯತ್ನ ಆಗುತ್ತಿದೆ. ಇತಿಹಾಸ ಉಳಿಸಿ, ಬೆಳೆಸುವ ಸಲುವಾಗಿ ಮಹಾನ್ ಪುರುಷರ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ. ಇಲ್ಲಿನ ಆಂಜನೇಯ ನಗರದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಮಹಾಪುರುಷರು ಇದ್ದ, ಹಾಗೆ ಇರಬೇಕು. ಯಾರೋ ಮಧ್ಯ ಬಂದು …

Read More »

*ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ*

ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ* l: ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ …

Read More »

ವಂದೇ ಭಾರತ್ ರೈಲಿನಲ್ಲೂ ಬೆಳಗಾವಿಗೆ ಅನ್ಯಾಯ.. ಜನರಲ್ಲಿ ಅಸಮಾಧಾನ!

ಬೆಳಗಾವಿ: ಇಂದಿನಿಂದ ಬೆಂಗಳೂರು- ಹುಬ್ಬಳ್ಳಿ- ಧಾರವಾಡ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದೆ. ಆದರೆ ಬೆಳಗಾವಿವರೆಗೂ ವಂದೇ ಭಾರತ್ ರೈಲು ಓಡದೇ ಇರುವುದು ಇಲ್ಲಿನ ಜನರ ಅಸಮಾಧಾನಕ್ಕೆ ಕಾರಣವಾಗಿದೆ. 3 ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿದ್ದ ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಬೊಮ್ಮಾಯಿ ಸರ್ಕಾರ ಹಾವೇರಿಗೆ ಸ್ಥಳಾಂತರ ಮಾಡಿದೆ. ಉಡಾನ್ ಯೋಜನೆಯಡಿ ಅನೇಕ ವಿಮಾನ ಸೇವೆಗಳು ರದ್ದಾಗಿವೆ. ಅಲ್ಲದೇ ಹಲವಾರು ಯೋಜನೆಗಳು ಕೂಡ ಬೆಳಗಾವಿ ಕೈ ತಪ್ಪಿದೆ. ಈಗ …

Read More »

ನಿಯಮ ಪಾಲಿಸದೆ ಮನೆಯ ವಿದ್ಯುತ್ ಸಂಪರ್ಕ ಕಡಿತ : ಬೆಸ್ಕಾಂಗೆ 25 ಸಾವಿರ ರೂ. ದಂಡ

ಅಧಿಕಾರಿಗಳು ನಿಯಮ ಪಾಲನೆ ಮಾಡದೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ ಪ್ರಕರಣವೊಂದರಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯು ಬೆಸ್ಕಾಂಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ದಾವಣಗೆರೆ: ನಿಯಮ ಪಾಲಿಸದೇ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪ್ರಕರಣ ಸಂಬಂಧ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯು ಬೆಸ್ಕಾಂಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ನ ಮನೆಯೊಂದರಲ್ಲಿ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಕುರಿತಂತೆ ಗ್ರಾಹಕರೊಬ್ಬರು …

Read More »

ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಬೇಕು : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಮೂಡಲಗಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿಕೊಂಡು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಗತ್ಯ ಬಿದ್ದರೆ ಕುಡಿಯುವ ನೀರಿಗಾಗಿ ಟ್ಯಾಂಕರಗಳ ಮೂಲಕ ವ್ಯವಸ್ಥೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಶನಿವಾರದಂದು ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯು ಕೈಕೊಟ್ಟಿದರಿಂದ್ದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ಕಟ್ಟು ನಿಟ್ಟಿನ …

Read More »

ಶಿರಾಡಿ ಘಾಟ್ ರಸ್ತೆ ಪರಿಶೀಲಿಸಿದ ಸತೀಶ್ ಜಾರಕಿಹೊಳಿ; ನವೆಂಬರ್ 1 ರ ಒಳಗೆ ಹಾಸನ-ಸಕಲೇಶಪುರ ಹೆದ್ದಾರಿ ಕಾಮಗಾರಿ ಪೂರ್ಣಕ್ಕೆ ಸೂಚನೆ

ಹಾಸನ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರು ಜೂನ್ 24ರ ಶನಿವಾರ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದರು, ಬಳಿಕ ಹಾಸನ-ಶಿರಾಡಿಘಾಟ್ನಲ್ಲಿ ಟನಲ್ ನಿರ್ಮಿಸುವ ಬಗ್ಗೆ ಸುಳಿವು ನೀಡಿದರು. ಹಾಗೂ ಇದೇ ವೇಳೆ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಭೂಕುಸಿತದ(Landslide) ಸಮಸ್ಯೆ ಎದುರಿಸುತ್ತಿರುವ ಅನೇಕ ಸ್ಥಳಗಳಿಗೆ ಭೇಟಿ ನೀಡಿ ಶೀಘ್ರವಾಗಿ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ …

Read More »