Breaking News

Uncategorized

ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.!

ಗೋಕಾಕ: ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ ಹೋರಾಟ ಮಾಡುವ ಅವಶ್ಯ ಎಂದು ಹೊಸದುರ್ಗ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ಮಂಗಳವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿ, ಉಪ್ಪಾರ ಸಮಾಜವು ಶೈಕ್ಷಣಿಕ, ಸಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಸಮುದಾಯವಾಗಿದ್ದು ಸಂಘಟನೆಯಿಂದ ಮಾತ್ರ ನಮ್ಮ ಬೇಡಿಕೆಗಳು ಈಡೇರುತ್ತವೆ ಈ …

Read More »

ವಿಶ್ವ ಪರಿಸರ ದಿನ; ನಿಸರ್ಗದಲ್ಲಿಯೇ ಸಮಯ ಕಳೆದ ಸಚಿವ ಸತೀಶ್‌ ಜಾರಕಿಹೊಳಿ

ಗೋಕಾಕ: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿಯವರು ಪಟ್ಟಣದ ಹೊರ ವಲಯದ ಮಾರ್ಕಂಡೇಯ ನದಿ ಪಕ್ಕದಲ್ಲಿರುವ ಯೋಗಿ ಕೊಳ್ಳದ ನಿಸರ್ಗದಲ್ಲಿಯೇ ಸಮಯ ಕಳೆದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ನಾವು ಸ್ಥಳೀಯ ಆಹಾರಗಳನ್ನು ಸೇವಿಸಿದರೆ ರೋಗಗಳಿಂದ ದೂರವಿರಬಹುದು. ಹಿರಿಯರು ಅತಿ ಹೆಚ್ಚು ವರ್ಷಗಳ ಕಾಲ ಆರೋಗ್ಯವಂತರಾಗಿ ಬದುಕಲು ಅವರು ಸೇವಿಸುವ ಆಹಾರ ಕಾರಣ ಮತ್ತು ಅವರು ನಿಸರ್ಗದೊಂದಿಗೆ …

Read More »

ಪರಿಸರ ರಕ್ಷಿಸುವ ಕಾರ್ಯಕ್ಕೆ ಮುಂದಾಗಿ: ಸಚಿವ ಸತೀಶ್‌ ಜಾರಕಿಹೊಳಿ

ಗೋಕಾಕ: ಗಿಡ-ಮರಗಳ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು. ಆ ಮೂಲಕ ಜೀವಸಂಕುಲ ಉಳಿವಿಗೆ ಶ್ರಮಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.   ಘಟಪ್ರಭ ಅರಣ್ಯ ವಿಭಾಗದಿಂದ ನಗರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಿ ನಂತರ ಮಾತನಾಡಿದ ಅವರು, ಉತ್ತಮ ಪರಿಸರದಿಂದ ಮಾನವನು ಅತ್ಯುತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ. ಮಾನವನ ದುರಾಸೆಯಿಂದಾಗಿ ಇಂದು ಪರಿಸರ ನಾಶವಾಗುತ್ತಿದ್ದು, ಜಾಗತಿಕ ತಾಪಮಾನ ಹೆಚ್ಚಳವಾಗಿ …

Read More »

ಚುನಾವಣೆ ಕೆಲಸ ಮುಗಿಸಿ; ಮೂಲ ಸ್ಥಾನಕ್ಕೆ ಪೋಲಿಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

ಬೆಳಗಾವಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆಗೊಂಡಿದ್ದ ಜಿಲ್ಲೆಯ ವಿವಿಧ ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ಮರಳಿ ಅವರ ಮೂಲ ಸ್ಥಳಕ್ಕೆ ವರ್ಗಾವಣೆಗೊಳಿಸಲಾಗಿದೆ.ಹುಬ್ಬಳ್ಳಿ ಪೂರ್ವ ಸಂಚಾರ ಠಾಣೆಗೆ ವರ್ಗಾವಣೆಗೊಂಡಿದ್ದ ಶ್ರೀಶೈಲ ಗಾಭಿ ಅವರನ್ನು ಬೆಳಗಾವಿ ಉತ್ತರ ಸಂಚಾರ ಠಾಣೆಗೆ, ಉತ್ತರ ವಲಯದ ಐಜಿಪಿ ಕಚೇರಿಯ ಹಸನ್‌ಸಾಬ್ ಮುಲ್ಲಾ ಅವರನ್ನು ರಾಯಬಾಗ ಠಾಣೆಗೆ, ಮಂಜುನಾಥ ಹಿರೇಮಠ ಅವರನ್ನು ಬೆಳಗಾವಿ ಎಪಿಎಂಸಿ ಠಾಣೆಗೆ, ಶ್ರೀನಿವಾಸ ಹಂಡ ಅವರನ್ನು ಬೆಳಗಾವಿ ಗ್ರಾಮಾಂತರ …

Read More »

ಬೆಳಗಾವಿ: 2000 ನೋಟು ಬದಲಿಸಿ ವಂಚಿಸುವ ಗ್ಯಾಂಗ್‌ ಬಂಧನ

ಬೆಳಗಾವಿ: 2 ಸಾವಿರ ಮುಖ ಬೆಲೆಯ ನೋಟುಗಳನ್ನು ಬದಲಾಯಿಸಲು ಹೆಚ್ಚುವರಿ ಒಂದು ಲಕ್ಷ ರೂ. ನೀಡುವುದಾಗಿ ಆಮಿಷವೊಡ್ಡಿ ವಂಚಿಸಿದ ಪೊಲೀಸ್‌ ಪೇದೆ ಸೇರಿ ಮೂವರನ್ನು ಬಂಧಿಸುವಲ್ಲಿ ಕಾಗವಾಡ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.   ಮಹಾರಾಷ್ಟ್ರದ ಮಿರಜ್‌ ನಗರ ಠಾಣೆ ಪೊಲೀಸ್‌ ಪೇದೆ ಸಾಗರ ಸದಾಶಿವ ಜಾಧವ(31), ಆರೀಫ ಆಜಿಜ್‌ ಸಾಗರ(34) ಹಾಗೂ ಲಿಂಗನೂರನ ಲಕ್ಷ್ಮಣ ನಾಯ್ಕ(36) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ಘಟನೆ ನಡೆದ 24 ಗಂಟೆಯಲ್ಲೇ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.   …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಮೂರು ರೈಲುಗಳ ನಡುವೆ ಅಪಘಾತ: ಹಳಿಗಳ ಮೇಲೆ ಹೆಣಗಳ ರಾಶಿ

ಬಾಲಸೋರ್‌: ‘ರೈಲು ಹಳಿ ತಪ್ಪಿದಾಗ ಎಚ್ಚರಗೊಂಡೆ. ನನ್ನ ಮೇಲೆ ಏಕಾಏಕಿ 10-15 ಮಂದಿ ಬಿದ್ದರು. ಹೊರಗೆ ಬಂದು ನೋಡಿದರೆ ಜನರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೈಕಾಲುಗಳು ಚೆಲ್ಲಾಪಿಲ್ಲಿಯಾಗಿದ್ದವು, ಇಡೀ ಸ್ಥಳವೇ ರಕ್ತಸಿಕ್ತವಾಗಿತ್ತು.   ಒಡಿಶಾದ ಬಾಲಸೋರ್‌ನಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರೊಬ್ಬರು ಘಟನೆಯನ್ನು ಎನ್‌ಡಿಟಿವಿಗೆ ವಿವರಿಸಿದ್ದು ಹೀಗೆ.   ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕ ರೂಪಂ ಬ್ಯಾನರ್ಜಿ ಅವರು, ‘ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ನೆರವಿಗೆ ಧಾವಿಸಿದರು. …

Read More »

*ಜಾರಕಿಹೊಳಿ ಬ್ರದರ್ಸ್ ಹಿರಿಯ ಸಹೋದರಿ ಲಗಮವ್ವಾ ಸುಲಧಾಳ ನಿಧನ*

ಗೋಕಾಕ: ಜಾರಕಿಹೊಳಿಯವರ ಹಿರಿಯ ಸಹೋದರಿ, ಗೋಕಾಕ ನಗರಸಭೆ ಮಾಜಿ ಅಧ್ಯಕ್ಷೆ ಲಗಮವ್ವಾ ನಿಂಗಪ್ಪಾ ಸುಲಧಾಳ (67) ಹೃದಯಾಘಾತದಿಂದ ಇಂದು ಬೆಳಗ್ಗೆ 8:00 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರರು, ಓರ್ವ ಸುಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತ ಲಗಮವ್ವಾ ನಿಂಗಪ್ಪಾ ಸುಲಧಾಳ ಅವರು ಗೋಕಾಕ ನಗರಸಭೆ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೃತರ ಅಂತ್ಯಕ್ರಿಯೆ ನಗರದ ಕುಂಬಾರ ಗಲ್ಲಿಯ ರುಧ್ರಭೂಮಿಯಲ್ಲಿ ಮಧ್ಯಾಹ್ನ 12 …

Read More »

*ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ*.

ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮೂಡಲಗಿ, ಗೋಕಾಕ, ಹುಕ್ಕೇರಿ, ಚಿಕ್ಕೋಡಿ, ರಾಯಬಾಗ ತಾಲೂಕುಗಳ ಬಹುಗ್ರಾಮ ಕುಡಿಯುವ ನೀರು ಸರಬುರಾಜು …

Read More »

*ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

ಅರಭಾವಿ ಮಠ(ತಾ.ಮೂಡಲಗಿ)-ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ ಮೂಲಕ ಯುಪಿಎಸ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅರಭಾವಿ ನೆಲದ ಶೃತಿ ಶಿ. …

Read More »