Breaking News

Uncategorized

*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಸಮರ್ಥ ಮಾರ್ಗದರ್ಶನ; ಪ್ರಭಾ ಶುಗರ್ಸ್ ಅಧ್ಯಕ್ಷರಾಗಿ ಕಂಬಳಿ, ಉಪಾಧ್ಯಕ್ಷರಾಗಿ ಕಬ್ಬೂರ ಅವಿರೋಧವಾಗಿ ಆಯ್ಕೆ*

*ಗೋಕಾಕ-* ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಜೋಕಾನಟ್ಟಿ ಗ್ರಾಮದ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ರಂಗಾಪೂರ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರದಂದು ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಗೋಕಾಕ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ಅವರು ಪ್ರಕಟಿಸಿದರು.  ಇಲ್ಲಿಯವರೆಗೆ …

Read More »

ಮೂಡಲಗಿ ತಾಲ್ಲೂಕಿನ ಪಿಕೆಪಿಎಸ್ ಅಧ್ಯಕ್ಷರ ಸಭೆ; ಬಿಡಿಸಿಸಿ ಬ್ಯಾಂಕಿನ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಶೀಘ್ರ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ-ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಕ್ಷೇತ್ರದಿಂದ ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗುವುದು. ನಾವು ಒಮ್ಮತದಿಂದ ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ತಮ್ಮೆಲ್ಲರ ಸಹಕಾರ ಅವಶ್ಯವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಮೂಡಲಗಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿಯ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಅವರು, ರೈತರು …

Read More »

*ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ*- ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರನ್ನು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ಮಾಡಿದರು. ನಗರದ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿಯವರ ನಿವಾಸದಲ್ಲಿ ಸಚಿವ ಜೋಷಿಯವರನ್ನು ಭೇಟಿ ಮಾಡಿದರು.ಈ ಸಂದರ್ಭದಲ್ಲಿ ಇಬ್ಬರು ಸುದೀರ್ಘವಾದ ರಾಜಕೀಯ ಚರ್ಚೆಯನ್ನು ನಡೆಸಿದರು. ಬಾಲಚಂದ್ರ ಜಾರಕಿಹೊಳಿಯವರ ಸ್ವ- ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಯವರು ಪ್ರಲ್ಹಾದ ಜೋಷಿಯವರನ್ನು ಸತ್ಕರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ …

Read More »

ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತ್ತೇವೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕಣಗಲಾ(ತಾ.ಹುಕ್ಕೇರಿ) : ಎಲ್ಲ ಸಮಾಜಗಳನ್ನು ಒಂದೇ ತಕ್ಕಡಿಯಲ್ಲಿ ತೂಗಿ‌ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೆ.28 ರಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿರುವ ನಿಮಿತ್ತ ಹುಕ್ಕೇರಿ ತಾಲೂಕಿನ ಕಣಗಲಾ ಜಿ.ಪಂ. ವ್ಯಾಪ್ತಿಯ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವ ಸಮಾಜಗಳ ಏಳ್ಗೆಯೇ ನಮ್ಮ ಪ್ರಮುಖ ಆದ್ಯತೆ ಆಗಿದೆ ಎಂದು ತಿಳಿಸಿದರು. ಲಿಂಗಾಯತರು, …

Read More »

ನಾನಾಗಲೀ, ನನ್ನ ಕುಟುಂಬವಾಗಲಿ. ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ (ಹುಕ್ಕೇರಿ)- ನಾನಾಗಲೀ, ನನ್ನ ಕುಟುಂಬವಾಗಲಿ. ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ. ಜನರ ಪ್ರೀತಿ, ಆಶೀರ್ವಾದದಿಂದ ನಾವು ಒಂದೇ ಕುಟುಂಬದಲ್ಲಿ ಬೇರೇ ಬೇರೇ ಕ್ಷೇತ್ರಗಳಿಂದ ಸಾರ್ವತ್ರಿಕ ಚುನಾವಣೆಗಳಲ್ಲಿ ಜನರಿಂದ ಆಯ್ಕೆಯಾಗಿದ್ದೇವೆ. ವಿರೋಧಿಗಳ ಆರೋಪದಲ್ಲಿ ಯಾವುದೇ ನಿಜಾಂಶವಿಲ್ಲ ಎಂದು ಅರಭಾವಿ ಶಾಸಕ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು.  ಹುಕ್ಕೇರಿ ತಾಲೂಕಿನ ಎಲೆಮುನೋಳಿ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪ್ರಚಾರ …

Read More »

*ಹುಕ್ಕೇರಿ ತಾಲೂಕು ವಿದ್ಯುತ್ ಸಹಕಾರ ಸಂಘದ ಚುನಾವಣೆಯ ಪ್ರಚಾರ ಸಭೆ ನಡೆಸಿದ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

ಹುಕ್ಕೇರಿ ತಾಲೂಕಿನ ಘೊಡಗೇರಿ, ಹುಲ್ಲೊಳಿ, ಎಲೆ ಮುನೊಳಿ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ಬೆಳಗಾವಿ- ನಷ್ಟದಲ್ಲಿರುವ ಹುಕ್ಕೇರಿ ತಾಲೂಕಿನ ಸಹಕಾರ ಸಂಸ್ಥೆಗಳನ್ನು ಉಳಿಸಿ, ಬೆಳೆಸಬೇಕೆಂಬ ಸಂಕಲ್ಪದೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಸೇರಿಕೊಂಡು ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಸಹಕಾರ ಪರ್ವವನ್ನು ಆರಂಭಿಸಿರುವುದಾಗಿ ಚಿಕ್ಕೋಡಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆಯವರು ಹೇಳಿದರು. ರವಿವಾರದಂದು ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಹುಕ್ಕೇರಿ ತಾಲ್ಲೂಕು ವಿದ್ಯುತ್ ಸಹಕಾರ ಸಂಘದ …

Read More »

*ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಬೆಳಗಾವಿ ತಾಲ್ಲೂಕಿನ ಸಂಭಾವ್ಯ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧಾರ ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕುಲಗೋಡೆ ಭಾಗಿ *ಬೆಳಗಾವಿ-* ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಶುಕ್ರವಾರದಂದು ನಗರದ …

Read More »

ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕದಲ್ಲಿ ಮೂಡಲಗಿ- ಗೋಕಾಕ ತಾಲೂಕಿನ ಪಿಕೆಪಿಎಸ್ ಅಧ್ಯಕ್ಷರು ಸದಸ್ಯರುಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ- ನಾನು ಮತ್ತು ಗೋಕಾಕ ಶಾಸಕ ರಮೇಶ್‌ ಜಾರಕಿಹೊಳಿಯವರು ಸೇರಿಕೊಂಡು ಇದೇ ತಿಂಗಳ ಅಂತ್ಯದೊಳಗೆ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನಸಹಕಾರ ಸಂಘಗಳ …

Read More »

*ಬಿಡಿಸಿಸಿ ಬ್ಯಾಂಕ್ ಚುನಾವಣೆ ಗಂಭೀರವಾಗಿ ಪರಿಗಣಿಸಿರುವೆ, ಅವಿರೋಧ ಆಯ್ಕೆಗೆ ಪ್ರಯತ್ನ: ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ:ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಖಾನಾಪೂರ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಅಲ್ಲಿನ ಶಾಸಕ ವಿಠ್ಠಲ ಹಲಗೇಕರ ಮತ್ತು  ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠಯವರೊಂದಿಗೆ ಸುದೀರ್ಘ ಚರ್ಚೆಯನ್ನು ನಡೆಸಿದರು.   ಅಕ್ಟೋಬರ್ …

Read More »

ದೇವರು ಮತ್ತು ಮತದಾರರ ಆಶೀರ್ವಾದದಿಂದ ನಮ್ಮ ಗುಂಪಿಗೆ ಬಿಡಿಸಿಸಿ ಬ್ಯಾಂಕ್ ಆಡಳಿತ ಚುಕ್ಕಾಣಿ – ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ದೇವರು ಮತ್ತು ಸಹಕಾರ ಕ್ಷೇತ್ರದ ಮತದಾರರ ಆಶೀರ್ವಾದದಿಂದ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ ಚುಕ್ಕಾಣಿ ಹಿಡಿಯುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ವಿಶ್ವಾಸ ವ್ಯಕ್ತಪಡಿಸಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಬ್ಯಾಂಕಿನ ಪ್ರಚಾರಾರ್ಥವಾಗಿ ಜಿಲ್ಲೆಯ …

Read More »