Breaking News

Uncategorized

ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ!

ಗೋಕಾಕ ಫೆ, 27 : ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ …

Read More »

3.5 ಲಕ್ಷ ರೂ. ಪರಿಹಾರ ನೀಡಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ

ಬೆಳಗಾವಿ: ಭೂತರಾಮನಹಟ್ಟಿ ಗ್ರಾಮದ 35 ಬಣವಿ ಸುಟ್ಟು ಹಾನಿಗೊಳಗಾದ ಕುಟುಂಬಸ್ಥರಿಗೆ ಇಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಭೇಟಿ ನೀಡಿ ತಲಾ ಹತ್ತು ಸಾವಿರ ರೂ. ದಂತೆ ಪರಿಹಾರ ನೀಡಿದರು. ಯಮಕನಮರಡಿ ಮತಕೇತ್ರದ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಮನಹಟ್ಟಿ ಗ್ರಾಮದಲ್ಲಿ ಫೆ.25 ರಂದು 35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಯಾಗಿತ್ತು. ಸ್ಥಳಕ್ಕೆ ಉಪ ತಹಶೀಲ್ದಾರ್‌ ಅವರು ಭೇಟಿ ನೀಡಿದ್ದರು. ಹಾನಿಗೊಳಗಾದ 35 ಕುಟುಂಬಸ್ಥರಿಗೆ ತಲಾ …

Read More »

ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ!

ಗೋಕಾಕ ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು , ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ರವಿವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು . ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಗುವ ಸಕಲ ಸೌಲಭ್ಯಗಳನ್ನು ದೊರೆಯುತ್ತಿದ್ದು , ಇನ್ನೂ ಹೆಚ್ಚಿನ ಅನುಕೂಲವಾಗಲು ಈಗಿರುವ 100 ಹಾಸಿಗೆ ಆಸ್ಪತ್ರೆಯನ್ನು 250 ಕ್ಕೆ …

Read More »

35 ಬನವಿ ಭಸ್ಮ; ಶಾಸಕ ಸತೀಶ್ ಜಾರಕಿಹೊಳಿ 10 ಸಾವಿರ ರೂ. ಪರಿಹಾರ ಘೋಷಣೆ

ಬೆಳಗಾವಿ: ಭೂತರಾಯನಹಟ್ಟಿ ಗ್ರಾಮದಲ್ಲಿ 35 ಬನವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ನೀಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಘೋಷಿಸಿದ್ದಾರೆ. ಶುಕ್ರವಾರ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಯನಹಟ್ಟಿ ಗ್ರಾಮದಲ್ಲಿ 35 ಬನವಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದಾರೆ. ನಾಳೆ (ಫೆ.27) ಭೂತರಾಯನಹಟ್ಟಿ ಗ್ರಾಮಕ್ಕೆ ಯುವ …

Read More »

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ ವಿದ್ಯಾರ್ಥಿಗಳು …

Read More »

ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮನವಿ

ಉಕ್ರೇನ್‌-ರಷ್ಯಾ ನಡುವೆ ಯುದ್ಧ ಆರಂಭ   ಬೆಳಗಾವಿ: ಉಕ್ರೇನ್‌-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್‌ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮನವಿ ಮಾಡಿದ ಅವರು, ಹಲವು ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು …

Read More »

*ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ*

ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‍ಸಿಡಿಎಫ್‍ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿಂದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ …

Read More »

ಯುವಕರ ಸಾಧನೆಗೆ ಸತೀಶ ಜಾರಕಿಹೊಳಿ ಫೌಂಡೇಶನ್ ಬೆನ್ನೆಲುಬಾಗಿ ನಿಲ್ಲಲಿದೆ: ಯುವ ನಾಯಕ ರಾಹುಲ ಜಾರಕಿಹೊಳಿ

ಘಟಪ್ರಭಾ: ಯುವಕರು ದೇಶದ ರಕ್ಷಣೆ ಮಾಡುವ ಸೇನೆ ಹಾಗೂ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸದರೆ ಅದು, ಸಮಾಜ ಸೇವೆಗೆ ಸಮ. ಹೆಚ್ಚೆಚು ಯುವಕರು ಉದ್ಯೋಗ ಪಡೆದು ಜೀವನ ರೂಪಿಸಿಕೊಂಡರೆ ಸತೀಶ ಜಾರಕಿಹೊಳಿ ಫೌಂಡೇಶನ್‌ ಗೆ ಹೆಮ್ಮೆ, ಗೌರವ ನೀಡಿದಂತಾಗುತ್ತದೆ ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಹೇಳಿದರು. ಘಟಪ್ರಭಾದ ಸೇವಾದಳದಲ್ಲಿ ಆರಂಭವಾದ ಆಸಕ್ತ ಯುವಕರಿಗೆ ಹತ್ತು ದಿನಗಳ ಕಾಲ ಉಚಿತ ಸೇನಾ ಮತ್ತು ಪೊಲೀಸ್ ಕಾನ್ಟೇಬಲ್ ತರಬೇತಿ ಶಿಬಿರಕ್ಕೆ ಚಾಲನೆ …

Read More »

‌ಸತತ ಪ್ರಯತ್ನದಿಂದ ಸಾಧನೆ ಸಾಧ್ಯ :ಯುವ ನಾಯಕ ರಾಹುಲ ಜಾರಕಿಹೊಳಿ

ಬೆಳಗಾವಿ: ನಮ್ಮಲ್ಲಿಯೂ ಐಎಎಸ್‌ ಹಾಗೂ ಕೆಎಎಸ್‌ ಅಧಿಕಾರಿಗಳಾಗುವ ಸಾಮರ್ಥ ಹೊಂದಿರುವ ವಿದ್ಯಾರ್ಥಿಗಳಿದ್ದು, ಆದರೆ ಅದನ್ನು ಸಾಧಿಸುವ ಛಲ ನಮ್ಮ ವಿದ್ಯಾರ್ಥಿಗಳಲ್ಲಿ ಹೊಂದಬೇಕು. ವಿದ್ಯಾರ್ಥಿಗಳಲ್ಲಿ ಅಂತಹ ದೊಡ್ಡ ದೊಡ್ಡ ಗುರಿ ಸಾಧಿಸುವತ್ತ ಪ್ರಯತ್ನಿಸಿದರೆ ಅದು ಅಸಾಧ್ಯವೇನಲ್ಲ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಕಾಕತಿಯ ಕಲ್ಪವೃಕ್ಷ ಪದವಿ ಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪುನಶ್ಚೇತನ, ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂಕಾರಂಜಿ ಉತ್ಸವ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಕ್ರೀಡೆಯಿಂದ ಉತ್ತಮ ಆರೋಗ್ಯ: ಯುವ ನಾಯಕ ರಾಹುಲ್‌

ಬೆಳಗಾವಿ: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು.   ಹೊಸ ವಂಟಮುರಿ ಗ್ರಾಮದಲ್ಲಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ನಡೆದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.   ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಹತ್ವ ಕೊಟ್ಟಷ್ಟುಕ್ರೀಡೆಗೂ ಮಹತ್ವ ನೀಡಬೇಕು. ಇಂದಿನ ದಿನಮಾನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿದ್ದು, ಇಂತಹ ಕ್ರೀಡೆಗಳನ್ನು ಜೀವಂತವಾಗಿರಸಲು …

Read More »