ಮೂಡಲಗಿ- ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕಗಳನ್ನು ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಪುರಸಭೆಯ ಆವರಣದಲ್ಲಿ 2 ಲಕ್ಷ ರೂಪಾಯಿ ವೆಚ್ಚದ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, ಇಂಥ ಪುಸ್ತಕಗಳನ್ನು ಓದಿ ಬಳಕೆ ಮಾಡಿಕೊಂಡು …
Read More »ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಯ ಪುರಸಭೆ ಸಭಾ ಭವನದಲ್ಲಿ ಕರೆಯಲಾಗಿದ್ದ ಪುರಸಭೆ ಸದಸ್ಯರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಬರದಂತೆ ಕೆಲಸ ಮಾಡುವಂತೆ ಅವರು ಸೂಚಿಸಿದರು. ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು …
Read More »ಬಿಜೆಪಿಯಿಂದ ಯತ್ನಾಳ್ ಗೆ 6ವರ್ಷ ಕಾಲ ಉಚ್ಚಾಟನೆ
ನಿನ್ನೆಯಷ್ಟೇ ಬಿಜೆಪಿ ಹೈಕಮಾಂಡ್ ಬಿಜೆಪಿ ಎರಡು ಬಣಗಳಿಗೆ ನೋಟಿಸ್ ನೀಡಿತ್ತು. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡುವಂತೆ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶ ಹೊರಡಿಸಲಾಗಿದೆ. ಈ ನಿರ್ಧಾರದ ಮೂಲಕ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ದೂರವಿಟ್ಟು, ಅವರ ಮೇಲಿನ …
Read More »ಮಹಾನಾಯಕನ ವಿರುದ್ಧ ಒಂದಾದ್ರಾ ಸಾಹುಕಾರ್- ದಳಪತಿ? ಏನಿದು ಹೊಸ ಗೇಮ್‌ಪ್ಲಾನ್!
ದೆಹಲಿ : ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಸದ್ದು ಮಾಡುತ್ತಿದ್ದು, ಇದರಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಒಬ್ಬ ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ದೂರು ಕೊಟ್ಟಿದ್ದು, ತನಿಖೆ ಮಾಡಲು ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲಿಯೇ ರಾಜಣ್ಣ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ಬಳಿಕ, ಶತ್ರುವಿನ ಶತ್ರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಹನಿಟ್ರ್ಯಾಪ್ ವಿಚಾರವನ್ನು ಚರ್ಚೆ ಮಾಡಿದ್ದಾರೆ. …
Read More »ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ
ಬೆಂಗಳೂರು: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲಿದೆ. ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ. ಇರ್ಪಾನುಲ್ಲಾ ಷರೀಫ್ ಮತ್ತು ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಚೇರ್ಮನ್ ಡಾ. ದಾಕ್ಷಯಿಣಿ ಎಸ್. ಅಪ್ಪ ಇವರಿಗೆ ಕೂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ …
Read More »ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ಅವರು ಅಧಿಕಾರ ಸ್ವೀಕಾರ
ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ನೂತನ ಕಾರ್ಯದರ್ಶಿಯಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಪದಗ್ರಹಣ ಮಾಡಿದರು. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನ ನೂತನ ಪದಾಧಿಕಾರಿಗಳು ಇದೇ ವೇಳೆ ಪದಗ್ರಹಣ ಮಾಡಿದರು. ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳೆಯರೂ ಪಕ್ಷಕ್ಕಾಗಿ ದುಡಿಯಬೇಕು, ಈ ನಿಟ್ಟಿನಲ್ಲಿ 74 ಮಹಿಳೆಯರಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡುತ್ತೇವೆ …
Read More »ಅರಳಿಮಟ್ಟಿ ಸರಕಾರಿ ಪ್ರಾಥಮಿಕ ಶಾಲೆ ಈಗ ಪಿಎಂ ಶ್ರೀ ಯೋಜನೆಗೆ*- *ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೊಂದು ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯು ಆಯ್ಕೆಯಾಗಿದ್ದು, ತಾಲ್ಲೂಕಿನ ಅರಳಿಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೇಂದ್ರ ಪುರಸ್ಕೃತ ಪಿಎಂಶ್ರೀ ಶಾಲೆಯನ್ನಾಗಿ ಪರಿವರ್ತನೆಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ದೇಶದಲ್ಲಿನ ಗ್ರಾಮೀಣ ಪ್ರದೇಶದ ಶಾಲೆಗಳನ್ನು ಕೇಂದ್ರೀಯ ಶಾಲೆಗಳ ರೀತಿಯಲ್ಲಿ ಸ್ಥಾಪಿಸಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಗ್ರಾಮೀಣ ಪ್ರದೇಶಗಳಲ್ಲಿ ಪಿಎಂಶ್ರೀ ಹೆಸರಿನ ಶಾಲೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮೂಡಲಗಿ ವಲಯದಲ್ಲಿ ಒಟ್ಟು …
Read More »ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಕೊಲ್ಲೂರು*- ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರದಂದು ಮುಂಜಾನೆ ಉಡುಪಿ ಜಿಲ್ಲೆಯ ಐತಿಹಾಸಿಕ, ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮೂಕಾಂಬಿಕೆಯ ದರ್ಶನ ಪಡೆದುಕೊಂಡ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಅರ್ಚಕರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರಾಂತ ದೇವಸ್ಥಾನಗಳಿವೆ. ಪ್ರತಿ ವರ್ಷವೂ …
Read More »*ಜನ ಮತ್ತು ಅಭಿವೃದ್ದಿ ವಿರೋಧಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*
ಸಾಲದ ಶೂಲಕ್ಕೆ ದೂಡಿದ ಬಜೆಟ್ ಸಿದ್ದರಾಮಯ್ಯನವರು 16ನೇ ಬಜೆಟ್ ಮಂಡನೆ ಮಾಡಿರುವುದೇ ಸಾಧನೆಯಾಗಿದೆ. ಮಾತ್ರವಲ್ಲ, ಮುಂಬರಲಿರುವ ತಾಪಂ, ಜಿಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ವೋಟ್ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕಕ್ಕೆ ₹5 ಸಾವಿರ ಕೋಟಿ ಮೀಸಲು, ಈ ಭಾಗಕ್ಕೆ 5 ಸಾವಿರಕ್ಕಿಂತ ಹೆಚ್ಚು ಶಿಕ್ಷಕರ ನೇಮಕ ಸೇರಿದಂತೆ ಹಲವು ಭರವಸೆ ನೀಡುವ ಮೂಲಕ ಪರೋಕ್ಷವಾಗಿ ರಾಷ್ಟ್ರೀಯ ಅಧ್ಯಕ್ಷರ …
Read More »ಎಲ್ಲಾ ವಲಯಗಳಿಗೆ ನ್ಯಾಯ ದೊರಕಿಸುವ ಬಜೆಟ್ : ಸಂಸದೆ ಪ್ರಿಯಂಕಾ ಜಾರಕಿಹೊಳಿ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ವಲಯಗಳನ್ನು ಒಟ್ಟಿಗೆ ತಗೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದಾರೆ. ಸಾಕಷ್ಟು ಹಣ ಉಚಿತ ಕಾರ್ಯಕ್ರಮಗಳಿಗೆ ಹೋಗುತ್ತದೆ. ಉಳಿದಿದ್ದರಲ್ಲಿಯೇ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಮಾನ್ಯವಾಗಿ ಇದೊಂದು ಒಳ್ಳೆಯ ಬಜೆಟ್. ಬೆಳಗಾವಿ ಜಿಲ್ಲೆಗೂ ಅನೇಕ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದು, ಬೆಳಗಾವಿ ಜಿಲ್ಲೆಗೆ ನೀರಾವರಿ …
Read More »