Breaking News

Uncategorized

‌ಸತತ ಪ್ರಯತ್ನದಿಂದ ಸಾಧನೆ ಸಾಧ್ಯ :ಯುವ ನಾಯಕ ರಾಹುಲ ಜಾರಕಿಹೊಳಿ

ಬೆಳಗಾವಿ: ನಮ್ಮಲ್ಲಿಯೂ ಐಎಎಸ್‌ ಹಾಗೂ ಕೆಎಎಸ್‌ ಅಧಿಕಾರಿಗಳಾಗುವ ಸಾಮರ್ಥ ಹೊಂದಿರುವ ವಿದ್ಯಾರ್ಥಿಗಳಿದ್ದು, ಆದರೆ ಅದನ್ನು ಸಾಧಿಸುವ ಛಲ ನಮ್ಮ ವಿದ್ಯಾರ್ಥಿಗಳಲ್ಲಿ ಹೊಂದಬೇಕು. ವಿದ್ಯಾರ್ಥಿಗಳಲ್ಲಿ ಅಂತಹ ದೊಡ್ಡ ದೊಡ್ಡ ಗುರಿ ಸಾಧಿಸುವತ್ತ ಪ್ರಯತ್ನಿಸಿದರೆ ಅದು ಅಸಾಧ್ಯವೇನಲ್ಲ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಕಾಕತಿಯ ಕಲ್ಪವೃಕ್ಷ ಪದವಿ ಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪುನಶ್ಚೇತನ, ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂಕಾರಂಜಿ ಉತ್ಸವ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಕ್ರೀಡೆಯಿಂದ ಉತ್ತಮ ಆರೋಗ್ಯ: ಯುವ ನಾಯಕ ರಾಹುಲ್‌

ಬೆಳಗಾವಿ: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು.   ಹೊಸ ವಂಟಮುರಿ ಗ್ರಾಮದಲ್ಲಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ನಡೆದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.   ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಹತ್ವ ಕೊಟ್ಟಷ್ಟುಕ್ರೀಡೆಗೂ ಮಹತ್ವ ನೀಡಬೇಕು. ಇಂದಿನ ದಿನಮಾನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿದ್ದು, ಇಂತಹ ಕ್ರೀಡೆಗಳನ್ನು ಜೀವಂತವಾಗಿರಸಲು …

Read More »

ಸಚಿವ ಈಶ್ವರಪ್ಪ ಹೇಳಿಕೆ ಒಪ್ಪಲು ಸಾಧ್ಯವಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಹಿಜಾಬ್‌ ವಿವಾದ ಹಳ್ಳಿ ಹಳ್ಳಿಗಳಿಗೆ ಹರಡಲು ಬಿಜೆಪಿ ಸರ್ಕಾರವೇ ಕಾರಣ   ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಗಂಭೀರವಾಗಿ ಪರಿಗಣಿಸಿದ್ದು, ಕಾಂಗ್ರೆಸ್‌ ನಾಯಕರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,   ಕೆಲ ದಿನಗಳ ಹಿಂದೆ ಸಚಿವ ಈಶ್ವರಪ್ಪ ಕೇಸರಿ ಧ್ವಜ ಕೆಂಪು ಕೋಟೆ ಮೇಲೆ ಹಾರಿಸುತ್ತೇವೆ ಎಂದು ಹೇಳಿದ್ದಾರೆ. ಮುಂದೊಂದು …

Read More »

ಸತ್ ಚಿಂತನೆಗಳನ್ನು ಬಳಸಿಕೊಂಡು ಹೃದಯವನ್ನು ಶುದ್ಧವಾಗಿಸಿ ಕೊಳ್ಳುವುದೆ ಸಂಸ್ಕಾರ:ಶ್ರೀ ನಾರಾಯಣ ಶರಣರು

ಗೋಕಾಕ: ಸತ್ ಚಿಂತನೆಗಳನ್ನು ಬಳಸಿಕೊಂಡು ಹೃದಯವನ್ನು ಶುದ್ಧವಾಗಿಸಿ ಕೊಳ್ಳುವುದೆ ಸಂಸ್ಕಾರವಾಗಿದ್ದು, ಅದು ಪ್ರತಿಯೊಬ್ಬ ಭಾರತೀಯರಲ್ಲೂ ಇದೆ ಎಂದು ವಡೆಯರಟ್ಟಿ ಅಂಭಾ ದರ್ಶನ ಪೀಠದ ಶ್ರೀ ನಾರಾಯಣ ಶರಣರು ಹೇಳಿದರು. ನಗರದ ಶೂನ್ಯ ಸಂಪಾದನ ಮಠದಲ್ಲಿ ಶ್ರೀ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ವಚನ ಸಾಹಿತ್ಯ ಚಿಂತನ ಮಂಥನ ವೇದಿಕೆ ಹಾಗೂ ಲಿಂಗಾಯತ ಮಹಿಳಾ ವೇದಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಹುಣ್ಣಿಮೆ ನಿಮಿತ್ತ ಹಮ್ಮಿಕೊಂಡ 151 ನೇ ಶಿವಾನುಭವ ಗೋಷ್ಠಿಯಲ್ಲಿ ಪಾಲ್ಗೊಂಡು ಅವರು …

Read More »

ಗ್ರಾಮಗಳ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅಗತ್ಯ:‌ ರಾಹುಲ್ ಜಾರಕಿಹೊಳಿ

ಯಮಕನಮರಡಿ: ಗ್ರಾಮಗಳ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿಯವರ ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದ ಪಾತರೋಟಗಲ್ಲಿಯಲ್ಲಿಒಟ್ಟು 15 ಲಕ್ಷ ವೆಚ್ಚದ  ಚರಂಡಿ  ಮತ್ತು ಪೇವರಸ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಅವರು ಮಾತನಾಡಿದರು. ಇಂದಿನ ಯುವಕರು ದುಶ್ಚಟಗಳತ್ತ ಮುಖ ಮಾಡದೇ ಗ್ರಾಮಗಳ ಅಭಿವೃದ್ಧಿ ಮಾಡುವತ್ತ ಮುಖ ಮಾಡಬೇಕಿದೆ ಎಂದ ಅವರು, ಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರ ನಮ್ಮ ದೇಶ …

Read More »

ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ!

  ಗೋಕಾಕ ತಾಲೂಕಾ ಘಟಕದ ತಾಲೂಕಾಧ್ಯಕ್ಷರಾಗಿ ಬಸವರಾಜ ದೇಶನೂರ ನೇಮಕ ಗೋಕಾಕ ಫೆ 16 : ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಬುಧವಾದಂದು ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ರಶೀದ್ ಮಕಾಂದಾರ ಅವರು ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತಾಲೂಕಾಧ್ಯಕ್ಷರಾಗಿ ಬಸವರಾಜ ದೇಶನೂರ, ಉಪಾಧ್ಯಕ್ಷರಾಗಿ ಕೃಷ್ಣಾ ಖಾನಪ್ಪನವರ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಖಂಡ್ರಿ, ಖಜಾಂಚಿಯಾಗಿ ಇಮ್ರಾನ್ ಗೊಟೇದ ಹಾಗೂ …

Read More »

ಶಾಸಕ ಸತೀಶ್‌ ಜಾರಕಿಹೊಳಿ ಪ್ರಶ್ನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಉತ್ತರ

ಬೆಂಗಳೂರು: ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಅವುಗಳನ್ನು ಭರ್ತಿ ಮಾಡಲು ಸರ್ಕಾರ ತೆಗೆದುಕೊಂಡಿರುವ ಕ್ರಮ ಏನು? ಎಂದು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಉತ್ತರಿಸಿದ್ದಾರೆ.   ಶಾಸಕ ಸತೀಶ್‌ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, 2021-22ನೇ ಸಾಲಿನಲ್ಲಿ ಸರ್ಕಾರ 1171 ಪೊಲೀಸ್‌ ಸಬ್‌ …

Read More »

ಕವಿ ಚೆನ್ನವೀರ ಕಣವಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸಂತಾಪ

ಬೆಳಗಾವಿ: ಕನ್ನಡ ಸಾಹಿತ್ಯದ ಹಿರಿಯ ಚೇತನ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ‘ಕನ್ನಡದ ಸಾಹಿತ್ಯ ಲೋಕದ ನಕ್ಷತ್ರದಂತಿದ್ದ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಬಹು ದೊಡ್ಡ ನಷ್ಟ ಎಂದು ಅವರು ಹೇಳಿದ್ದಾರೆ. ವಿಮರ್ಶೆಗಳ ಜತೆಗೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸಿನನ್ವಯ ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನ!

ಗೋಕಾಕ : ಮೂಡಲಗಿ ತಾಲೂಕಿನ ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಮತ್ತು ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಲಾಯಿತು.   ಮಂಗಳವಾರದಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣ ಪಂಚಾಯತಿಗಳು ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದು ಅವರನ್ನು ಕ್ಷೇತ್ರದ ಮುಖಂಡರು ಸತ್ಕರಿಸಿ ಅಭಿನಂದಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ …

Read More »

ದಿನಾಂಕ 16 ರಂದು ಶ್ರೀ ಬನಶಂಕರಿ ಜಾತ್ರಾ ಮಹೋತ್ಸವ

ಗೋಕಾಕ ಫೆ 15 : ನಗರದ ಶ್ರೀ ಬನಶಂಕರಿ ಜಾತ್ರಾ ಮಹೋತ್ಸವವು ದಿನಾಂಕ 16 ರಂದು ಜರುಗಲಿದೆ. ಬುಧವಾರ ಮುಂಜಾನೆ ಬನಶಂಕರಿ ದೇವಿಗೆ ರುದ್ರಾಭಿಷೇಕ,ಅಲಂಕೃತ ಬುತ್ತಿ ಪೂಜೆ ನಡೆಯುವುದು. ಮಧ್ಯಾಹ್ನ ಪುರಜನರಿಂದ ನೈವೈದ್ಯ ಹಾಗೂ ಮುತ್ತೈದೆಯರಿಂದ ಉಡಿ ತುಂಬುವ ಕಾರ್ಯಕ್ರಮ, ಸಂಜೆ 7 ಘಂಟಗೆ ಸಕಲ ವಾದ್ಯ ವೈಭವಗಳೊಂದಿಗೆ ರಥೋತ್ಸವ ಜರುಗಿಲಿದೆ ಜಾತ್ರಾಮಹೋತ್ಸವದ ನಿಮಿತ್ಯ ತರಕಾರಿಗಳಿಂದ ದೇವಿಯನ್ನು ಅಲಂಕಾರ ಗೊಳಿಸಲಾಗಿತ್ತು. ಈ ಜಾತ್ರಾ ಮಹೋತ್ಸವಕ್ಕೆ ಭಕ್ತರು ಕೊವಿಡ ನಿಯಮ ಪಾಲನೆಯೊಂದಿಗೆ …

Read More »