Breaking News

Uncategorized

ನೂತನ ವರ್ಷದ ಕ್ಯಾಲೆಂಡರ್ ಡೈರಿನ್ನು ಲೋಕಾರ್ಪಣೆಗೊಳಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ:  ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಗುರುವಾರ ಕೆಪಿಟಿಸಿಎಲ್ ಡಿಪ್ಲೊಮಾ ರಾಜ್ಯ ಇಂಜಿನಿಯರಿಂಗ್ ಅಸೋಷಿಯೇಶನ್ ದ ನೂತನ ವರ್ಷದ 2022 ( ಕ್ಯಾಲೆಂಡರ್ ) ಡೈರಿನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹಾಗೂ ಯುವನಾಯಕ ರಾಹುಲ ಜಾರಕಿಹೊಳಿ ಲೋಕಾರ್ಪಣೆಗೊಳಿಸಿದರು. ಈ ವೇಳೆ ಯುವನಾಯಕ ರಾಹುಲ ಜಾರಕಿಹೊಳಿ, ಕೆಪಿಟಿಸಿಎಲ್  ಕಾರ್ಯನಿರ್ವಾಹಕ ಅಧಿಕಾರಿ ಏ. ಸನ್ನಕಿ,  ಪಾಂಡು ಮನ್ನಿಕೇರಿ, ವಿವೇಕ್ ಜತ್ತಿ, ಲಗಮಣ್ಣಾ ಕಳಸನ್ನವರ, ಪಜಲ್ ಮಕಾಂದರ, ಪಾಂಡು ರಂಗಸುಬೆ, ಜೋಗಿ,  …

Read More »

ಮೂಡಲಗಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿAದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …

Read More »

ಪಿಎಸ್ಐ ಕೆ ವಾಲಿಕಾರ ಅವರಿಗೆ ಕರವೇ ಕಾರ್ಯಕರ್ತರಿಂದ ಸತ್ಕಾರ

ಗೋಕಾಕ: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲ್ಲೂಕು ಘಟಕದ ವತಿಯಿಂದ ಮೊನ್ನೆ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಕನ್ನಡದಲ್ಲಿ ಪಥಸಂಚಲನಕ್ಕೆ ನಿರ್ದೇಶನ ನೀಡಿದ ಗೋಕಾಕ ನಗರ ಟಾಣೆಯ ಪಿಎಸ್ಐ ಕೆ ವಾಲಿಕಾರ ಅವರನ್ನುಕನ್ನಡ ಪ್ರೇಮ ಮೆರೆದ ಹಿನ್ನೆಲೆಯಲ್ಲಿ ಇವತ್ತು ಗೋಕಾಕ ನಗರ ಪೋಲಿಸ್ ಠಾಣೆಗೆ ಆಗಮಿಸಿ ಅವರನ್ನು ಸನ್ಮಾನ ಮಾಡಲಾಯಿತು.   ಈ ಸಂಧರ್ಭದಲ್ಲಿ ಸನ್ಮಾನ ಮಾಡಿ ಮಾತನಾಡಿದ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಸಂಚಾಲಕ ರೆಹಮಾನ್ ಮೊಕಾಶಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ …

Read More »

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …

Read More »

ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡಿದ ಕೇಂದ್ರ:‌ ಸತೀಶ ಜಾರಕಿಹೊಳಿ ಟೀಕೆ

ಬೆಳಗಾವಿ:  ” ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ  2022-23ನೇ ಸಾಲಿನ ಬಜೆಟ್ ಶೂನ್ಯ ಬಜೆಟ್ ಆಗಿದೆ ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ  ಅವರು ಹೇಳಿದ್ದಾರೆ. ಬಜೆಟ್‌ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ 25 ಜನ ಬಿಜೆಪಿ ಸಂಸದರಿದ್ದರೂ, ರಾಜ್ಯದಿಂದ  ಪ್ರತಿನಿಧಿಸಿದ್ದರೂ ಹಣಕಾಸು ಸಚಿವರು, ರಾಜ್ಯದ ಜನರ ನಿರೀಕ್ಷೆ ಹುಸಿಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ದೇಶದ ಜನರು ಏಳು ವರ್ಷಗಳಿಂದ ಅಪಾರ …

Read More »

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ

ಕೇಂದ್ರ ಸರ್ಕಾರದ ವಿತ್ತಮಂತ್ರಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಬೂಸ್ಟ್ ನೀಡಿದೆ. ರೈತರಿಗೆ ವ್ಯಾಪಾರಸ್ಥರಿಗೆ ಮತ್ತು ಜನ ಸಾಮಾನ್ಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ವಿಶೇಷವಾಗಿ ರೈತರು ಸಾವಯವ ಪದಾರ್ಥಗಳನ್ನು ಬೆಳೆಯಲು ಬಜೆಟ್‌ನಲ್ಲಿ ಉತ್ತೇಜನ ನೀಡಲಾಗಿದೆ. ಈ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢವಾಗಿಸಲು ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಅಲ್ಲದೆ ಕಾವೇರಿ–ಪೆನ್ನಾರ್‌, ಪೆನ್ನಾರ್‌–ಕೃಷ್ಣಾ, ಗೋದಾವರಿ–ಕೃಷ್ಣ ಸೇರಿದಂತೆ ನದಿ …

Read More »

ಧರಣಿ ನಿರತ ಎಬಿವಿಪಿ ಕಾಯರ್ಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್​!

ಬೆಂಗಳೂರು: ಪರೀಕ್ಷೆ ಮೌಲ್ಯಮಾಪನ, ಫಲಿತಾಂಶಕ್ಕೆ ಸಮಸ್ಯೆಯಾಗಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ. ಬೆಂಗಳೂರು: ನಗರದ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ(ABVP) ಪ್ರತಿಭಟನೆ ನಡೆಸಿದ್ದು, ಧರಣಿ ನಿರತ ಎಬಿವಿಪಿ ಕಾಯರ್ಕರ್ತರ ಮೇಲೆ ಪೊಲೀಸರು(Karnataka Police) ಲಾಠಿಚಾರ್ಜ್​ ಮಾಡಿದ್ದಾರೆ.ಬೆಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಇಂದು (ಜನವರಿ 31) ಎಬಿವಿಪಿ ಪ್ರತಿಭಟನೆ (Protest) ನಡೆಸುತ್ತಿದೆ. ಪರೀಕ್ಷೆ ಮೌಲ್ಯಮಾಪನ, …

Read More »

ಹಲವು ಗ್ರಾಮದಲ್ಲಿ ನೂತನ ಕಟ್ಟಡಗಳ ಉದ್ಘಾಟನೆ, ಅಭಿವೃದ್ಧಿ ಕಾಮಗಾರಿಗಳಿಗೆ ಸತೀಶ್ ಜಾರಕಿಹೊಳಿ ಚಾಲನೆ

ಬೆಳಗಾವಿ: ಮತಕ್ಷೇತ್ರದ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದು, ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಟ್ಟಡಗಳ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು,ಮಣ್ಣೀಕೆರಿ ಗ್ರಾಮದಲ್ಲಿ ಇನ್ನೂ ಅನೇಕ ಸಮಸ್ಯೆಗಳಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ಪರಿಹರಿಸಲಾಗುವುದು ಎಂದರು. ಇದೇ ವೇಳೆ ಮಣ್ಣೀಕೆರಿ ಗ್ರಾಮದಲ್ಲಿ 26 ಲಕ್ಷ …

Read More »

2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಬೆಳಗಾವಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ 12ರಿಂದ 13 ಜನ ಕಾಂಗ್ರೆಸ್‌ ಶಾಸಕರು ಗೆಲ್ಲಲು ತಯಾರಿ ನಡೆಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಚುನಾವಣೆಗೆ ನಾವು ತಯಾರಿ ನಡೆಸಿದ್ದು, ನಮ್ಮ ಗೆಲುವು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು. ಗೋವಾದಲ್ಲಿ ಕಳೆದ ಸಲ 17 …

Read More »

ಶಾಲಾ ಕಟ್ಟಡ ಉದ್ಘಾಟನೆ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಯಮಕನಮರಡಿ: ಮತಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಸಮುದಾಯ ಭವನ ಕಟ್ಟಡಗಳನ್ನು ನಿರ್ಮಿಸಿದ್ದು, ಅವುಗಳ ಸದ್ಬಳಕೆಯಾಗಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಕರೆ ನೀಡಿದರು. ಯಮಕನಮರಡಿ ಕ್ಷೇತ್ರದ ದಡ್ಡಿ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ನರಶಿಂಗಾಪುರ, ನಾಗನೂರು, ಅತ್ತಿಹಾಳ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೆಲವು ಗ್ರಾಮಗಳಿಗೆ ಕುರ್ಚಿಗಳನ್ನು ನೀಡುತ್ತಿದ್ದು, ಅವು ವೈಯಕ್ತಿಕ, ಧಾರ್ಮಿಕ ಸಮಾರಂಭಕ್ಕೆ ಸರಿಯಾಗಿ ಬಳಸಿ, ಮತ್ತೆ ಅವುಗಳನ್ನು ಒಂದೇ ಸ್ಥಳದಲ್ಲಿ ಇಡಬೇಕೆಂದು ಸಲಹೆ ನೀಡಿದರು. …

Read More »