ಗೋಕಾಕ : ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಡಿ.ದೇವರಾಜ ಅರಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಕಛೇರಿ ಮ್ಯಾನೇಜರ್ ವಿ ಆರ್ ಪರಸನ್ನವರ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, …
Read More »ತಮ್ಮ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ -ಶಾಸಕ ಬಾಲಚಂದ್ರ ಜಾರಕಿಹೊಳಿ ದೊಡ್ಮನೆ ಕುಟುಂಬದಲ್ಲಿ ಹರ್ಷೊಲ್ಲಾಸದಿಂದ ನಡೆದ ರಾಖಿ ಹಬ್ಬ ಗೋಕಾಕ- ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊಸಪೇಟೆ ರಸ್ತೆಯಲ್ಲಿರುವ ತಮ್ಮ ಲಕ್ಷ್ಮೀ ನಿವಾಸದಲ್ಲಿ ಸಹೋದರಿಯವರಿಂದ ರಾಖಿ ಕಟ್ಠಿಸಿಕೊಂಡು ಮಾತನಾಡಿದ …
Read More »ತಂತ್ರಜ್ಞಾನದ ಯುಗದಲ್ಲಿ ಸ್ಮಾರ್ಟ್ ಕ್ಲಾಸ್ ವಿದ್ಯಾರ್ಥಿಗಳಿಗೆ ಬಹು ಉಪಯುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಗ್ರಾಮೀಣ ಭಾಗದ ಶಾಲೆಗಳಿಗೆ ದೃಶ್ಯ ಮಾಧ್ಯಮಗಳನ್ನು ಬಳಕೆ ಮಾಡಿ ಅಳವಡಿಸಿದ ಪಾಠಗಳಿಗೆ ಅನುಕೂಲತೆಗಳನ್ನು ಕಲ್ಪಿಸುವಲ್ಲಿ ಸ್ಮಾರ್ಟ್ ಕ್ಲಾಸ್ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಇತ್ತೀಚೆಗೆ ತಾಲೂಕಿನ ಸಂಗನಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಿದ ಸ್ಮಾರ್ಟ್ ಕ್ಲಾಸ್ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ತಂತ್ರಜ್ಞಾನದ ಯುಗದಲ್ಲಿ ಸ್ಮಾರ್ಟ್ ಕ್ಲಾಸ್ …
Read More »*ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಬಲಾಢ್ಯ ಭಾರತ ನಿರ್ಮಾಣಕ್ಕೆ ಮುಂದಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ *ಮೂಡಲಗಿ*- ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅಂತಹ ಆದರ್ಶ ಪುರುಷರ ಆದರ್ಶಗಳನ್ನು ಬೆಳೆಸಿಕೊಂಡು ಬಲಾಢ್ಯ ಭಾರತ ನಿರ್ಮಾಣಕ್ಕೆ ಮುಂದಾಗುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದ ಗಾಂಧೀ ಮೈದಾನದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು, …
Read More »ನಮ್ಮ ಒಕ್ಕೂಟಕ್ಕೆ ರೈತರೇ ಶಕ್ತಿ, ರೈತರ ಅಭಿವೃದ್ಧಿಯೇ ನಮಗೆ ಮುಖ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ರವಿವಾರ ಸಂಜೆ ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ …
Read More »*ಘಟಪ್ರಭಾ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಸರ್ಕಾರದಿಂದ ೫ ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ*- ಪ್ರವಾಹದ ಸಂದರ್ಭದಲ್ಲಿ ಘಟಪ್ರಭಾ ನದಿಯ ನೀರಿನ ಸೆಳೆತಕ್ಕೆ ಸಿಕ್ಕು ಮೃತಪಟ್ಟ ತಾಲ್ಲೂಕಿನ ಹಡಗಿನಾಳ ಗ್ರಾಮದ ಮುತ್ತೆಪ್ಪ ಶಿವನಾಯಿಕ ನಾಯಿಕ(48) ಅವರ ಕುಟುಂಬ ವರ್ಗಕ್ಕೆ ಅರಭಾವಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸರ್ಕಾರದಿಂದ 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಡಕಲ್ ಜಲಾನಯನ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ಸುರಿದ ಮಳೆಯ ಹಿನ್ನೆಲೆಯಲ್ಲಿ ಘಟಪ್ರಭಾ ನದಿಗೆ …
Read More »*ಮೂಡಲಗಿಯಲ್ಲಿ 6.92 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ*
ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿಗಾಗಿ ನೀಡುತ್ತಿಲ್ಲ ನೆರವು- ಬೇಸರ ಹೊರಹಾಕಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಮೂಡಲಗಿ ಪಟ್ಟಣದಲ್ಲಿ ಪುರಸಭೆಯಿಂದ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಿದ್ದು, ಇದಕ್ಕಾಗಿ 6.92 ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರ ಸಂಜೆ ಇಲ್ಲಿನ ಪುರಸಭೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಡಿಎಸ್ಎಂಟಿ ಯೋಜನೆಯಡಿ ವಾಣಿಜ್ಯ ಮಳಿಗೆಯನ್ನು ಇಲ್ಲಿಯ ಬಾಜಿ ಮಾರ್ಕೆಟ್ ಬಳಿ ನಿರ್ಮಿಸಲಿದ್ದು, ಇದು …
Read More »ಭಗೀರಥ ಉಪ್ಪಾರ ಸಮಾಜದ ಬೇಡಿಕೆಗಳಿಗೆ ನಾವು ಸದಾ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕಳೆದ ಹಲವಾರು ವರ್ಷಗಳಿಂದ ಭಗೀರಥ ಉಪ್ಪಾರ ಸಮಾಜವು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದು, ಈ ಸಮಾಜಕ್ಕೆ ಸಿಗಬೇಕಿರುವ ಸರ್ಕಾರದ ಮೀಸಲಾತಿಯನ್ನು ದೊರಕಿಸಿಕೊಡುವ ಸಂಬಂಧ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದರೇ ನಾವು ಕೂಡಾ ಕೇಂದ್ರ ಮಟ್ಟದಲ್ಲಿ ಒತ್ತಡ ಹಾಕುವ ಪ್ರಾಮಾಣಿಕವಾದ ಪ್ರಯತ್ನ ಮಾಡುವುದಾಗಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಹೊರವಲಯದಲ್ಲಿರುವ ಮೂಡಲಗಿ ಕ್ರಾಸ್‍ನಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ಭಗೀರಥ ಮೂರ್ತಿಯನ್ನು ಅನಾವರಣಗೊಳಿಸಿ …
Read More »ಅರಭಾವಿ ಮತಕ್ಷೇತ್ರದ ನೆರೆ ಸಂತ್ರಸ್ತರಿಗೆ ಅಗತ್ಯವಿರುವ ತ್ವರಿತ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಒತ್ತಾಯ
ಗೋಕಾಕ: ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು. ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ …
Read More »*ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ*
ಗೋಕಾಕ- ಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಮಂಗಳವಾರದಂದು ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಅರಭಾವಿ ಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿಜಿ, ವಡೇರಹಟ್ಟಿ ಮತ್ತು ಮುಸಗುಪ್ಪಿ ಗ್ರಾಮಗಳಿಗೆ ಭೇಟಿ ನೀಡಿದರು. ಅಲ್ಲಿರುವ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಮಳೆಯ ಪ್ರಮಾಣ ಸದ್ಯಕ್ಕೆ ಇಳಿಕೆಯಾಗುತ್ತಿದೆ. ಪ್ರವಾಹದಿಂದ ನದಿ ತೀರದ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ತುಂಬ ತೊಂದರೆಯಾಗುತ್ತಿದೆ. ಜಾನುವಾರುಗಳಿಗೆ ಮೇವಿನ ಸಮಸ್ಯೆ …
Read More »