Breaking News

Uncategorized

ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.!

ಗೋಕಾಕ: ವಿಶ್ವವನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನ ಸಂಕ್ರಮಣದ ಕಾಲದಲ್ಲಿ ಬಿಜೆಪಿ ಕಾರ್ಯಕರ್ತರು ಸಮಾಜ ಬಗ್ಗೆ ಅತ್ಯಂತ ಸಂವೇದನೆಯಿಂದ, ಸೇವಾ ಮನೋಭಾವನೆಯಿಂದ, ಜನಸೇವೆಯೇ ಜನಾರ್ದನ ಸೇವೆ ಎಂಬ ಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗುರುವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಗೋಕಾಕ್ ನಗರ ಮತ್ತು ಗ್ರಾಮೀಣ ಮಂಡಳ …

Read More »

ಮೃತ ಕಲಾವಿದನ‌ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ ಕುಂದರಗಿಯ ಶ್ರೀಗಳು

ಗೋಕಾಕ: ಮೊನ್ನೆ ದಿನ ರಾತ್ರಿ ಅಪಘಾತದಲ್ಲಿ ಆಕಸ್ಮಿಕವಾಗಿ ಮೃತನಾದ ಗೋಕಾಕಿನ ಕಲಾವಿದ ಶಿವು ಪೂಜೇರಿ ಮನೆಗೆ ಇವತ್ತು ಕುಂದರಗಿಯ ಶ್ರೀ ಅಮರೇಶ್ವರ ಮಹಾಸ್ವಾಮಿಗಳು ಮೃತನ ಮನೆಗೆ ಆಗಮಿಸಿ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದರು, ಅದರ ಜೊತೆಯಲ್ಲಿ ಮೃತ ಶಿವು ಪೂಜೇರಿಯ ಮಗನ ಬೆಳೆಸುವ ಜೊತೆಯಲ್ಲಿ ಅವನ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು ಮೃತ ಕುಟುಂಬದ ದು:ಖವನ್ನು ಮರಿಸುವಂತೆ ದೇವರಲ್ಲಿ ಶಕ್ತಿ ನೀಡಲೆಂದು ಪ್ರಾರ್ಥಿಸಿದರು.ಇದೆ ಸಂದರ್ಭದಲ್ಲಿ ಕಲಾವಿದರಾದ ಮಹಾಂತೇಶ ತಾಂವಶಿ ಹಾಗೂ ರಿಯಾಜ ಚೌಗಲಾ …

Read More »

ಯುವಕರಿಗೆ ಸಹಬಾಳ್ವೆ, ಸಹೋಧರತ್ವದಿಂದ ಬದುಕುವುದನ್ನು ಕಲಿಸಬೇಕಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಘಟಪ್ರಭಾ: ಇಲ್ಲಿನ ಡಾ.ಎನ್.ಎಸ್. ಹರ್ಡೀಕರ್ ರಾಷ್ಟ್ರೀಯ ಸೇವಾದಳ ಕೇಂದ್ರದ ಆವರಣದಲ್ಲಿ ಇಂದು 75ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ರಾಷ್ಟ್ರೀಯ ಸೇವಾದಳದ ಉಪಾಧ್ಯಕ್ಷ ಬಲಾರಮ್ ಸಿಂಗ್ ಬದೌರಿಯಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ನಾವು 75ನೇ ಸ್ವಾತಂತ್ರ್ಯೋತ್ಸವದ ಹೊಸ್ತಿಲಲ್ಲಿದ್ದೇವೆ. ಈ ಸಂದರ್ಭದಲ್ಲಿ ನಾವು ದೇಶಕ್ಕಾಗಿ ಹೋರಾಡಿದ ಪ್ರತಿಯೊಬ್ಬ ಹೋರಾಟಗಾರರನ್ನು ನೆನೆಯಬೇಕಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳವು ಪ್ರಮುಖ ಪಾತ್ರ ವಹಿಸಿತ್ತು: ಸತೀಶ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ …

Read More »

ಬೆಣಚಿನಮರಡಿ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ತಾಲೂಕಿನ ಬೆಣಚಿನಮರಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಭೇಟಿ ನೀಡಿದರು. ಶಾಲೆಯಲ್ಲಿ ನೂತನವಾಗಿ ಮುಖ್ಯಧ್ವಾರ ಹಾಗೂ ಧ್ವಜ ಸ್ತಂಭಗಳನ್ನು ನಿರ್ಮಿಸಲಾಗಿದ್ದು, ಆ.15 ರಂದು ಇವುಗಳ ಉದ್ಘಾಟನೆ ಮಾಡಲಾಗುತ್ತಿದೆ.  ಇವುಗಳನ್ನು ವೀಕ್ಷಿಸಿದ ಸತೀಶ ಅವರು, ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಂಕರ ಗಿಡ್ಡಣವರ, ಯಲ್ಲಪ್ಪ ಬೀರನಗಡ್ಡಿ, ಯಮನಪ್ಪ ಮಾಳಗಿ, ಶಿವಪ್ಪ ಮಾಗಿ, ಅಸ್ಪಾಕ್ ಮುಜಾವರ್, ಭಗವಂತ ಹುಳ್ಳಿ, ಚನ್ನಬಸು …

Read More »

ಸರ್ಕಾರದ ಅಧಿಕಾರಿಶಾಹಿ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್ ಕಾಗೇರಿ.

ಬೆಂಗಳೂರು: ವಿಧಾನಸಭಾ ಸ್ಪೀಕರ್ ಆಗಿ 2 ವರ್ಷಗಳಲ್ಲಿ ಅನೇಕ ಕಠಿಣ ನಿಲುವುಗಳನ್ನು ತೆಗೆದುಕೊಂಡಿದ್ದೇನೆ. ಸಭಾಧ್ಯಕ್ಷನಾಗಿ ನಿಸ್ಪಕ್ಷಪಾತ ಧೋರಣೆ ಅನುಸರಿಸಿದ್ದೇನೆ. ಸದಸ್ಯರನ್ನು ಜವಾಬ್ದಾರಿಯಿಂದ ನಿಭಾಯಿಸಿದ್ದೇನೆ. ಕನಿಷ್ಠ 60 ದಿನ ಅಧಿವೇಶನ ನಡೆಸಲು ಸೂಚಿಸಿದ್ದೇನೆ. ಆದರೆ ಒಂದು ಕೆಲಸ ಸಾಧ್ಯವಾಗಿಲ್ಲ ಎಂಬ ಬೇಸರವಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಕಾಗೇರಿ, ವಿಧಾನಸಭೆಯಲ್ಲಿ ಇ-ವಿಧಾನ್ ಜಾರಿ ಸಾಧ್ಯವಾಗಿಲ್ಲ. ಇದಕ್ಕೆ ರಾಜ್ಯ ಸರ್ಕಾರದ ಧೋರಣೆ ಹಾಗೂ ನಿಲುವುಗಳೇ ಕಾರಣ. ಅನುದಾನದ ನೆರವಿಗೆ …

Read More »

ಕಡೋಲಿ, ಕಾಕತಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ

ಬೆಳಗಾವಿ: ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಜಾಪರವಾಡಿ, ಕಡೋಲಿ, ದೇವಗಿರಿ ಹಾಗೂ ಕಾಕತಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾಕತಿ, ಹೊನಗಾ, ಜಮನಾಳ, ಕೆಂಚನಟ್ಟಿ, ಬೈಲೂರ, ಮಳವಳ್ಳಿ, ಹೊಸವಂಟಮುರಿ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ಭೇಟಿ ನೀಡಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದರು. ಈ ಗ್ರಾಮಗಳಲ್ಲಿ ಪ್ರವಾಹ ಹಾಗೂ ಮಳೆಯಿಂದಾಗಿ ಮನೆ, ಬೆಳೆ, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದ್ದು, ಇವುಗಳನ್ನು ರಾಹುಲ್ ಪರಿಶೀಲಿಸಿದರು. …

Read More »

ಹುಬ್ಬಳ್ಳಿ ಮಹಿಳಾ ಘಟಕದ ಕಾರ್ಯವನ್ನು ಶ್ಲಾಘೀಸಿದ ಸತೀಶ್ ಜಾರಕಿಹೊಳಿ

ಹುಬ್ಬಳ್ಳಿ : ‘ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನಿಮ್ಮೊಂದಿಗೆ ನಾವಿದ್ದೇವೆ, ಪಕ್ಷ ಸಂಘಟನೆಯಲ್ಲಿ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಗುರುವಾರ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್  ಸಂದರ್ಭದಲ್ಲಿ ಮೊದಲೆ ಹಾಗೂ ಎರಡನೇ ಅಲೆಯಲ್ಲಿ ಮಹಿಳಾ ಕಾಂಗ್ರೆಸ್ ಬಡವರಿಗೆ ಕಿಟ್ ನೀಡುವ ಮೂಲಕ ಒಳ್ಳೆಯ ಕಾರ್ಯವನ್ನು ಮಾಡಿದ್ದೀರಿ …

Read More »

ಪದವಿ ಕಾಲೇಜುಗಳ ಆರಂಭದ ಕುರಿತು ನೂತನ ಮಾರ್ಗಸೂಚಿ ಪ್ರಕಟ!

ನವದೆಹಲಿ : ಪದವಿ ಕಾಲೇಜುಗಳ ಆರಂಭದ ಕುರಿತಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅಕ್ಟೋಬರ್ 1 ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಸೂಚನೆ ನೀಡಿದೆ. ಯುಜಿಸಿ ಮಾರ್ಗಸೂಚಿ ಪ್ರಕಾರ, ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಅಂತಿಮ ವರ್ಷ / ಸೆಮಿಸ್ಟರ್ ಪರೀಕ್ಷೆಗಳನ್ನು ಆನ್ ಲೈನ್, ಆಫ್ ಲೈನ್ ಅಥವಾ ಬ್ಲೆಂಡ್ ಮಾಡಿದ ಮೋಡ್ ನಲ್ಲಿ ಆಗಸ್ಟ್ 31 ರೊಳಗೆ ಪೂರ್ಣಗೊಳಿಸಬೇಕು. ಇದಲ್ಲದೆ, ಆಂತರಿಕ ಮೌಲ್ಯಮಾಪನ ಮತ್ತು …

Read More »

ಮಾದಕ ವಸ್ತುಗಳಿಂದ ಅಪರಾಧಿಗಳು ಜಾಸ್ತಿ!

ಆನೇಕಲ್: ಆನೇಕಲ್‌ ಪೊಲೀಸ್‌ ಉಪ ವಿಭಾಗದ ಏಳು ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದ 100 ಬೈಕ್‌, ಮೊಬೈಲ್‌ಗಳು ಮತ್ತು ಚಿನ್ನಾಭರಣ ಸೇರಿದಂತೆ ಒಟ್ಟು ₹ 1.74 ಕೋಟಿ ಮೌಲ್ಯದ ವಸ್ತುಗಳನ್ನು ಹೆಬ್ಬಗೋಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ವಲಯ ಐಜಿಪಿ ಎಂ. ಚಂದ್ರಶೇಖರ್‌ ವಾರಸುದಾರರಿಗೆ ಹಸ್ತಾಂತರಿಸಿದರು. ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ 37 ಪ್ರಕರಣಗಳಲ್ಲಿ 56 ಆರೋಪಿಗಳನ್ನು ಬಂಧಿಸಿ ಮಾಲನ್ನು ವಶಕ್ಕೆ ಪಡೆದಿದ್ದು, ಸಂಬಂಧಿಸಿದವರಿಗೆ ನೀಡಲಾಯಿತು. ಹೆಬ್ಬಗೋಡಿ ಠಾಣೆ …

Read More »

ಭಾರಿ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಸಂಪೂರ್ಣ ಮುಳುಗಡೆ.

ಸುಬ್ರಹ್ಮಣ್ಯ: ನಿರಂತರ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಕಳೆದ 4 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಅಲ್ಲದೆ ಘಟ್ಟ ಪ್ರದೇಶ ಹಾಗೂ ಕುಮಾರ ಪರ್ವತದಲ್ಲಿ ಭಾರಿ ಮಳೆಯಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕ್ಷೇತ್ರಕ್ಕೆ ಬಂದಿರುವ ಭಕ್ತಾದಿಗಳು ಕುಮಾರಧಾರಾ ನದಿಯ ದಡದಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲೇ ತೀರ್ಥಸ್ನಾನ ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿದೆ. ಸ್ನಾನಘಟ್ಟದ ಬಳಿಯಿರುವ ಕಿಂಡಿ ಅಣೆಕಟ್ಟು ಕೂಡ ಸಂಪೂರ್ಣ ಮುಳುಗಡೆಯಾಗಿದೆ.

Read More »