ಗೋಕಾಕ : ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಸನ್ಮಾನಿಸಿದರು. ಹಾನಗಲ್ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಕೈ ಕಾರ್ಯಕರ್ತರು ಗೋಕಾಕನ ಹಿಲ್ ಗಾರ್ಡನ್ ಕಚೇರಿಗೆ ಆಗಮಿಸಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕರಿಸಿದರು. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಹಾನಗಲ್ ಕ್ಷೇತ್ರದಲ್ಲಿ ಬಿಡುಬಿಟ್ಟು ಕೈ ಅಭ್ಯರ್ಥಿ ಪರ ನಿರಂತರ ಪ್ರಚಾರ ನಡೆಸಿದ ಹಿನ್ನಲೆ ಕಾಂಗ್ರೆಸ್ …
Read More »66ನೇ ಕನ್ನಡ ರಾಜ್ಯೋತ್ಸವ ಆಚರಿಸಿದ ರಾಹುಲ್ ಜಾರಕಿಹೊಳಿ
ಗೋಕಾಕ : ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು 66 ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರೊಂದಿಗೆ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ರಾಹುಲ್ ಮಾತನಾಡಿ, ನಾವೆಲ್ಲರೂ ಒಂದಾಗಿ ಕನ್ನಡದ ತೇರನ್ನು ಮುನ್ನಡೆಸೋಣ. ಕರ್ನಾಟಕವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸೋಣ ಎಂದರು. ಕರ್ನಾಟಕವನ್ನು ಪ್ರಗತಿಪರ ರಾಜ್ಯವನ್ನಾಗಿ ಕಟ್ಟಲು ಎಲ್ಲರೂ ಕೈ ಜೋಡಿಸೋಣ. ಕನ್ನಡ ನಾಡು-ನುಡಿ , ನೆಲ-ಜಲ …
Read More »ಶೀಘ್ರ ಮಹಾನ್ ವ್ಯಕ್ತಿಗಳ ಕಿರುಹೊತ್ತಿಗೆಗಳ ಬಿಡುಗಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಯಮಕನಮರಡಿ: ಬುದ್ಧ, ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಸೇರಿ ಇನ್ನಿತರ ಮಹಾನ್ ವ್ಯಕ್ತಿಗಳ ಕಿರುಹೊತ್ತಿಗೆಗಳನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಹೇಳಿದರು. ಮತಕ್ಷೇತ್ರದ ಇಸ್ಲಾಂಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಮೂರು ಕೊಠಡಿಗಳನ್ನು ಶನಿವಾರ ಉದ್ಘಾಟಿಸಿ, ಮಕ್ಕಳಿಗೆ ನೋಟ್ ಬುಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಮಕ್ಕಳು ಹಾಗೂ ಯುವಕರಿಗೆ ಮಹಾನ್ ವ್ಯಕ್ತಿಗಳ ಬದುಕು ಹಾಗೂ ಹೋರಾಟವನ್ನು ತಿಳಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ …
Read More »ಮತದಾರರು ಹಣದ ಆಮಿಷಕ್ಕೆ ಮರುಳಾಗದೇ, ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಹಾನಗಲ್: ಬಿಜೆಪಿಯವರು ನೀಡುತ್ತಿರುವ ಹಣ ಒಂದು ದಿನದ ಖರ್ಚಿಗೆ ಮಾತ್ರ ಸಾಲುತ್ತದೆ. ಹೀಗಾಗಿ, ಹಣ ಹಾಗೂ ಇನ್ನಿತರ ಆಮಿಷಗಳಿಗೆ ಮತದಾರರು ಮರುಳಾಗದೇ ರಾಜ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮನವಿ ಮಾಡಿದರು. ಮತಕ್ಷೇತ್ರದ ಮತ್ತಂಗ, ಸಮ್ಮಸಗಿ ಸೇರಿ ವಿವಿಧ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರ ಪರ ಇಂದು ಪ್ರಚಾರ ನಡೆಸಿ ಅವರು ಮಾತನಾಡಿದರು. ದೇಶದ ಜನರು …
Read More »ಬಡವರನ್ನು ಮತ್ತಷ್ಟು ಬಡವರನ್ನಾಗಿಸುವುದು ಬಿಜೆಪಿಯ ಯೋಜನೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ
ಹಾನಗಲ್: ಬಡವರನ್ನು ಮತ್ತಷ್ಟು ಬಡವರನ್ನಾಗಿಸುವುದು ಬಿಜೆಪಿಯ ಯೋಜನೆಯಾಗಿದೆ. ಹೀಗಾಗಿಯೇ, ಸರ್ಕಾರ ನಿರಂತರವಾಗಿ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುತ್ತಲೇ ಸಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಮತಕ್ಷೇತ್ರದ ಅಕ್ಕಿಆಲೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಸಾಪುರ ಹಾಗೂ ವೀರಾಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಆದರೂ …
Read More »ಹಾನಗಲ್ ಉಪಚುನಾವಣಾ ಅಖಾಡಕ್ಕಿಳಿದ ಯುವ ನಾಯಕ ರಾಹುಲ್ ಜಾರಕಿಹೊಳಿ;ತಂದೆ ಸತೀಶ ಜಾರಕಿಹೊಳಿಯವರಿಗೆ ಸಾಥ್
ಹಾನಗಲ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಪುತ್ರ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿಯವರು ಇಂದಿನಿಂದ ಹಾನಗಲ್ ಉಪಚುನಾವಣಾ ಅಖಾಡಕ್ಕಿಳಿದಿದ್ದಾರೆ. ಹಾನಗಲ್ ಮತಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ತಂದೆ ಸತೀಶ ಜಾರಕಿಹೊಳಿಯವರಿಗೆ ಪುತ್ರ ರಾಹುಲ್ ನೆರವಾಗುತ್ತಿದ್ದಾರೆ. ತಂದೆಯೊಂದಿಗೆ ಎಲ್ಲೆಡೆಯೂ ಪ್ರಚಾರದಲ್ಲಿ ತೊಡಗಿದ್ದಾರೆ. ಯುವ ಮತಗಳನ್ನು ಸೆಳೆಯುತ್ತಿರುವ ರಾಹುಲ್: ರಾಹುಲ್ ಅವರು ಇಂದು ಮತಕ್ಷೇತ್ರದ ಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಾದಾಮಗಟ್ಟ, ಅಕ್ಕಿಆಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಕ್ಕಿವಳ್ಳಿ ಗ್ರಾಮ …
Read More »ಸಿಂದಗಿ ವಿಧಾನಸಭಾ ಉಪಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಭರ್ಜರಿ ಪ್ರಚಾರ
ಸಿಂದಗಿ: ನಿಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಸೂಕ್ತ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದೆ. ಮತದಾರರು ಬಹುಮತದಿಂದ ಅಶೋಕ ಮನಗೂಳಿರನ್ನು ಆಯ್ಕೆ ಮಾಡಿ, ವಿಧಾನಸಭಾ ಪ್ರವೇಶಿಸುವಂತೆ ಆಶೀರ್ವಾದ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ಸಿಂದಗಿ ವಿಧಾನಸಭಾ ಉಪಚುನಾವಣೆ ಅಂಗವಾಗಿ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಕಣೋಳ್ಳಿ ಗ್ರಾಮದಲ್ಲಿ ಇಂದು ನಡೆದ ಪ್ರಚಾರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಈ ಕ್ಷೇತ್ರದ ಬದಲಾವಣೆಗಾಗಿ ಅಶೋಕ ಅವರ ತಂದೆ …
Read More »ಬೆಲೆ ಏರಿಕೆಗೆ ಜನರು ತಕ್ಕ ಉತ್ತರ ನೀಡಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಸಿಂದಗಿ: ಅಗತ್ಯ ವಸ್ತುಗಳ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಜನರು ಉಪಚುನಾಣೆಯಲ್ಲಿ ತಕ್ಕ ಉತ್ತರ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಸಿಂದಗಿ ವಿಧಾನಸಭಾ ಉಪಚುನಾವಣೆ ಅಂಗವಾಗಿ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಯಂಕಂಚಿ ಗ್ರಾಮದಲ್ಲಿ ಇಂದು ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕೇಂದ್ರ ಸರ್ಕಾರ ಜನರ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳದೇ ನಿರಂತರವಾಗಿ ಬೆಲೆಯನ್ನು …
Read More »ಹಾನಗಲ್ ನಿಂದ ದೇಶಕ್ಕೆ ಸಂದೇಶ ಹೋಗಲಿ: ಸತೀಶ ಜಾರಕಿಹೊಳಿ ಕರೆ
ಹಾನಗಲ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತಕ್ಷೇತ್ರದ ವಿವಿಧೆಡೆ ಇಂದು ಬಿರುಸಿನ ಪ್ರಚಾರ ನಡೆಸಿದರು. ಮತಕ್ಷೇತ್ರದ ಮಾರನಬೀಡ, ಬೈಚವಳ್ಳಿ ಹಾಗೂ ಸಾವಿಕೇರಿ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಅವರು ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಮತಯಾಚನೆ ಮಾಡಿದರು. ಶ್ರೀನಿವಾಸ್ ಮಾನೆ ಯೋಗ್ಯ ಅಭ್ಯರ್ಥಿ: ಸಾವಿಕೇರಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸತೀಶ ಅವರು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಯೋಗ್ಯ ಅಭ್ಯರ್ಥಿಯಾಗಿದ್ದಾರೆ. ಒಬ್ಬ ಯೋಗ್ಯ ಅಭ್ಯರ್ಥಿಯನ್ನು ಕಳೆದುಕೊಳ್ಳುವುದರಿಂದ …
Read More »ಹಾನಗಲ್: ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ
ಹಾನಗಲ್: ಮತಕ್ಷೇತ್ರದ ತಿಳವಳ್ಳಿ ಗ್ರಾಮದಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಸಮ್ಮುಖದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಸತೀಶ ಅವರು ಕಾರ್ಯಕರ್ತರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಸತೀಶ ಅವರನ್ನು ಸನ್ಮಾನಿಸಿದರು. ಹಾನಗಲ್ ನಲ್ಲಿ ಸೆಕೆಂಡ್ ಡೋಸ್ ಲಸಿಕೆ ಹಾಕೋಣ: ಮಸ್ಕಿಯಲ್ಲಿ ಈಗಾಗಲೇ ಫಸ್ಟ್ ಡೋಸ್ ಲಸಿಕೆ ಆಗಿದೆ. ಈಗ ಹಾನಗಲ್ ನಲ್ಲಿ ಸೆಕೆಂಡ್ ಡೋಸ್ ಲಸಿಕೆ ಯಶಸ್ವಿಯಾಗಿ ಹಾಕಬೇಕಿದೆ. ಎರಡು ಡೋಸ್ …
Read More »