ಗೋಕಾಕ: ಸ್ವಾತಂತ್ರೋತ್ಸವದ ಅಂಗವಾಗಿ ಅಕ್ಕತಂಗೇಹಾಳ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಅಣ್ಣಪ್ಪಾ ಶಿವರುದ್ರಪ್ಪಾ ಕರಲಿಂಗನ್ನವರ ಅವರಿಗೆ ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಗೋಕಾಕ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ವತಿಯಿಂದ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಶನಿವಾರ ಸನ್ಮಾನಿಸಿದರು. ಈ ವೇಳೆ ಯುವ ನಾಯಕ ರಾಹುಲ್ ಜಾರಕಿಹೊಳಿ ಮಾತನಾಡಿ, ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದಲು ಹಿರಿಯರ ಸ್ವಾತಂತ್ರ್ಯಗಾರರ ಹೋರಾಟ ಪ್ರೇರಣೆ ಅಗತ್ಯವಿದೆ. ನಮ್ಮ ಯುವಕರ ಸಂಘಟನೆಯು ಬಲಿಷ್ಠವಾಗಿ ಬೆಳೆಯಬೇಕೆಂದರೆ, …
Read More »ದುರದುಂಡಿ; ಕುಡಿಯುವ ನೀರಿನ ಕಾಮಗಾರಿಗೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಚಾಲನೆ
ಘಟಪ್ರಭಾ: ಅರಬಾಂವಿ ಶಾಸಕರು ಹಾಗೂ ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಇವರ ಆದೇಶದ ಮೇರೆಗೆ ದುರದುಂಡಿ ಗ್ರಾಮದಲ್ಲಿ ಜಲ ಜೀವನ ಮಿಷನ ಯೋಜನೆಯಡಿಯಲ್ಲಿ 1.80ಲಕ್ಷ ರೂ.ಗಳ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಶುಕ್ರವಾರ ಉದ್ಘಾಟಿಸಲಾಯಿತು. ಕಾಮಗಾರಿಗೆ ಯುವ ನಾಯಕರಾದ ಸರ್ವೋತ್ತಮ್ ಜಾರಕಿಹೊಳಿ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಿಕ, ಗ್ರಾ.ಪಂ ಅಧ್ಯಕ್ಷೆ ರೇಣುಕಾ ಹಾಲಪ್ಪ …
Read More »ಅನಾಥಾಶ್ರಮದ ಮಕ್ಕಳಿಗೆ ಹಾಲು ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಗೋಕಾಕ: ಮಾನವ ಬಂಧುತ್ವ ವೇದಿಕೆ ತಾಲೂಕು ಘಟಕದ ಸದಸ್ಯರು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಲ್ಲ ನಾಗದೇವರಿಗೆ ಹಾಲು ಎರೆಯದೆ, ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯ ಬದಲು ಬಸವ ಪಂಚಮಿಯನ್ನು ವಿಶಿಷ್ಟವಾಗಿ ಆಚರಿಸಿದರು. ಮಾನವ ಬಂಧುತ್ವ ವೇದಿಕೆ ತಾಲೂಕು ಘಟಕದ ವತಿಯಿಂದ ನಗರದ ಶಿವ ಫೌಂಡೇಶನ್ ಅನಾಥಾಶ್ರಮದ ಮಕ್ಕಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹಾಲು ವಿತರಣೆ ಮಾಡಿದರು. …
Read More »ಹೆಸರಾಂತ ಹಾಸ್ಯ ಕಲಾವಿದ ಶಿವು ಪೂಜೇರಿ ಅಪಘಾತದಲ್ಲಿ ನಿಧನ: ಸತೀಶ ಜಾರಕಿಹೊಳಿ ಸಂತಾಪ
ಗೋಕಾಕ: ನಗರದ ಹೆಸರಾಂತ ಹಾಸ್ಯ ಕಲಾವಿದ ಶಿವು ಪೂಜೇರಿ (34) ಅವರು ನಿನ್ನೆ ರಾತ್ರಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಂಕೇಶ್ವರ-ನರಗುಂದ ರಾಜ್ಯ ಹೆದ್ದಾರಿಯಲ್ಲಿ ಶಿವು ಅವರು ಘಟಪ್ರಭಾದಿಂದ ಗೋಕಾಕಗೆ ಬೈಕ್ ನಲ್ಲಿ ಆಗಮಿಸುತ್ತಿದ್ದಾಗ ಘಟಪ್ರಭಾದ ರಾಷ್ಟ್ರೀಯ ಸೇವಾದಳ ಕೇಂದ್ರದ ಬಳಿ ಬೈಕ್ ಮತ್ತು ಟಂಟಂ ನಡುವೆ ಅಪಘಾತ ಸಂಭವಿಸಿ, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗೋಕಾಕ ನಗರದ ನಿವಾಸಿಯಾಗಿರುವ ಅವರಿಗೆ ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗ ಇದ್ದಾರೆ. …
Read More »ಕ್ರೀಡಾಪಟುಗಳು ಗ್ರಾಮೀಣ ಕ್ರೀಡೆಗಳಿಗೆ ಒತ್ತು ನೀಡಬೇಕು: ಯುವ ನಾಯಕ ರಾಹುಲ್ ಜಾರಕಿಹೊಳಿ
ಮೂಡಲಗಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ತಾಲೂಕಿನ ರಾಜಾಪುರದಲ್ಲಿ ಇಂದು ಏರ್ಪಡಿಸಿದ್ದ ಟಗರಿನ ಕಾಳಗ ಪಂದ್ಯಾವಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಟಗರಿನ ಕಾಳಗ ಪರಂಪರಾಗತವಾಗಿ ಸಾಗಿ ಬಂದಿರುವ ಕ್ರೀಡೆಯಾಗಿದೆ. ಇದನ್ನು ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಹೇಳಿದರು. ಕ್ರೀಡಾಪಟುಗಳು ಸಾಧನೆ ಮಾಡುವತ್ತಾ ಗಮನಹರಿಸಬೇಕು. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ಕೊಡಬೇಕು. ಸತತ ಪ್ರಯತ್ನದಿಂದ ಸಾಧನೆಯತ್ತ ಮುನ್ನುಗ್ಗಬೇಕು ಎಂದರು. ತಂದೆ ಸತೀಶ …
Read More »ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಎಂದು ಘೋಷಣೆ.
ಬೆಂಗಳೂರು : ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು, ಮಳೆಹಾನಿ, ಬೆಳೆಹಾನಿ, ಮೂಲಸೌಕರ್ಯಗಳಿಗೆ ಹಾನಿ, ಜೀವ ಹಾನಿ ಉಂಟಾಗಿದೆ. ಪ್ರವಾಹ ಪೀಡಿತ ತಾಲೂಕುಗಳಲ್ಲಿ ಮಾರ್ಗಸೂಚಿಯ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಾಂದರ್ಭಿಕ ರಜೆ ಕುರಿತಂತೆ ಪೊಲೀಸ್ …
Read More »ಗ್ರಾಮದ ಸ್ವಚ್ಚತೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತ್ಯವ್ಯ: ಬಂತಿ
ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ …
Read More »ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು …
Read More »ಶುಕ್ರವಾರ ದಿ. 13 ರಂದು ಗೋಕಾಕ ನಗರದ ಶ್ರೀ ಸಿದ್ದೇಶ್ವರ ಜಾತ್ರೆ
ಗೋಕಾಕ ಅ 11 : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ (ಟ್ರಸ್ಟ್) ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ಕೊರೋನಾ ಮಹಾಮಾರಿ ತಡೆಗಟ್ಟಲು ಸರಕಾರದ ನಿಯಮಗಳನ್ನು ಪಾಲಿಸುವ ಸಲುವಾಗಿ ಈ ಸಲ ರಥೋತ್ಸವವನ್ನು ರದ್ದು ಗೋಳಿಸಲಾಗಿದ್ದು, ರಥೋತ್ಸವ ದಿನದಂದು ರಥದ ಸ್ಥಳದಲ್ಲೇ ಸಾಯಂಕಾಲ 4 ಘಂಟೆಗೆ ಪೂಜೆ ಮಾಡಲಾಗುವುದು. ದೇವರ ದರ್ಶನಕ್ಕೆ …
Read More »ಬೆಳಗಾವಿ ಹುಬ್ಬಳ್ಳಿ-ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿ
ಹುಬ್ಬಳ್ಳಿ-ಧಾರವಾಡ, ಕಲಬುರಗಿ ಹಾಗೂ ಬೆಳಗಾಗಿ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 3ರಂದು ಚುನಾವಣೆ ನಡೆಯಲಿದ್ದು ಸೆಪ್ಟೆಂಬರ್ 6ನೇ ತಾರೀಖಿನಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ಆಗಸ್ಟ್ 6ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹಾಗೂ ಆಗಸ್ಟ್ 23 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಹುಬ್ಬಳ್ಳಿ – ಧಾರವಾಡದಲ್ಲಿ ಕಳೆದ 2 ವರ್ಷಗಳಿಂದ ಮಹಾನಗರ ಪಾಲಿಕೆ ಚುನಾವಣೆ ನೆನೆಗುದಿಗೆ ಬಿದ್ದಿತ್ತು. ಇತ್ತ ಕಲಬುರಗಿ ಜಿಲ್ಲೆಯಲ್ಲಿಯೂ ಕಳೆದ 3 ವರ್ಷಗಳಿಂದ …
Read More »