Breaking News

ಬೆಂಗಳೂರು

ಅಕ್ರಮ TDR ಪ್ರಕರಣ: ಬಿಬಿಎಂಪಿ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ!…..

ಬೆಂಗಳೂರು: ಇಂದು ಬೆಳಗ್ಗೆ ಬಿಬಿಎಂಪಿ ಎಂಜಿನಿಯರ್ ಹಾಗೂ ಬ್ರೋಕರ್ ಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಏಕಕಾಲದಲ್ಲಿ ಬೆಂಗಳೂರಿನ ನಾಲ್ಕು ಸ್ಥಳಗಳಲ್ಲಿ ಎಸಿಬಿ ತಂಡ ದಾಳಿ ನಡೆಸಿದೆ. ಅಕ್ರಮ ಟಿಡಿಆರ್ ಹಗರಣ ಸಂಬಂಧಿಸಿ ಇಬ್ಬರು ಮಧ್ಯವರ್ತಿಗಳು, ಜಮೀನು ಮಾಲೀಕ ಹಾಗೂ ಓರ್ವ ಸಹಾಯಕ ಇಂಜನಿಯರ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಸಹಾಯಕ ಇಂಜನಿಯರ್ ದೇವರಾಜು, ಮಧ್ಯವರ್ತಿಗಳಾದ ನಾಗೇಶ್, ನಾಗರಾಜು ಮತ್ತು ಜಮೀನು ಮಾಲೀಕನೆಂದು ಮೋಸ …

Read More »

ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಬಿ ಎಲ್ ಸಂತೋಷ್ ಅವರು ಶ್ರೀ ಗೌರಿ ಗಣೇಶ್ ಹಬ್ಬ ಆಚರಣೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆ ಬಿ.ಎಲ್. ಸಂತೋಷ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿಸಿ ಗಣೇಶ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆತ್ಮೀಯರೂ ಆಗಿರುವ ಬಿ.ಎಲ್. ಸಂತೋಷ್ ಅವರನ್ನು ಇಂದು ಮನೆಗೆ ಆಹ್ವಾನಿಸಿ …

Read More »

ಸಚಿವ ರಮೇಶ ಜಾರಕಿಹೊಳಿ ಅವರಿಗೆ ಭೇಟಿಯಾದ ವಾಲ್ಮೀಕಿ ಶ್ರೀ ನೇತೃತ್ವದ ನಿಯೋಗ.

ಬೆಂಗಳೂರು: ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ   ಸಚಿವ  ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ನಿಯೋಗ  ಸಮುದಾಯದ ಮತ್ತು ಜ್ವಲಂತ ವಿಷಯಗಳ  ಕುರಿತು ಚರ್ಚೆ ನಡೆಸಿದರು. ನಗರದ ಸಚಿವರ ಮನೆಯಲ್ಲಿ ನಡೆದ ಈ ಸಭೆಯಲ್ಲಿ ಹೊಸದುರ್ಗದ ಉಪ್ಪಾರ ಗುರುಪೀಠದ ಪುರುಷೋತ್ತಮಾನಂದ ಮಹಾಸ್ವಾಮಿಗಳು, ಕುಂಚಿಟಿಗರ ಮಠದ ಶಾಂತವೀರ ಮಹಾಸ್ವಾಮಿಗಳು,ಮಡಿವಾಳ ಮಾಚಿದೇವ ಮಹಾಸ್ವಾಮಿಗಳು, ಕಾಗಿನೆಲೆ ಗುರುಪೀಠದ ಈಶ್ವರಾನಂದ ಮಹಾಸ್ವಾಮಿಗಳು, ಬೋವಿ ಪೀಠದ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಮತ್ತು ಹರಳಯ್ಯ …

Read More »

ಕೊರೋನಾ ಗೆದ್ದು ಬಂದ ರಾಜಾಹುಲಿ

ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಯಡಿಯೂರಪ್ಪ ಅವರನ್ನು ಬೀಳ್ಕೊಟ್ಟರು. ಆಗಸ್ಟ್ 2ರ ಭಾನುವಾರ ರಾತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗಲಿರುವುದು ಖಚಿತವಾಗಿತ್ತು. ಬಳಿಕ ಅವರನ್ನು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 9 ದಿನದಿಂದ ಅವರು …

Read More »

ಜಿಲ್ಲಾಧಿಕಾರಿ, ಜಿಪಂ ಇಸಿಒ, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಬಿ.ಎಸ್. ಯಡಿಯೂರಪ್

ಬೆಂಗಳೂರು:  ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು  ತಾಲೂಕು ಕೇಂದ್ರಗಳಲ್ಲಿ  ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದ್ರು.  ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ,  ರಾಯಚೂರು ಮತ್ತು ಉಡುಪಿ   ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಪಂ ಇಸಿಒ, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಮಾತನಾಡಿದರು. ಅಧಿಕಾರಿಗಳು  ತಾಲೂಕುಗಳನ್ನು ವಿಭಾಗಿಸಿಕೊಂಡು ತಾಲೂಕು  ಕೇಂದ್ರದಲ್ಲಿ  ಮೊಕ್ಕಾಂ …

Read More »