ಯಮಕನಮರಡಿ: ಮತಕ್ಷೇತ್ರದ ಚಿಕ್ಕಲದಿನ್ನಿ, ಗುಟಗುದ್ದಿ ಹಾಗೂ ಶಾಬಾಂದರ್ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 80 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಭೂಮಿಪೂಜೆ ನೆರವೇರಿಸಿದರು. ನಂತರ ಇಸ್ಲಾಂಪುರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರ ಅನುದಾನದಡಿ ನೂತನವಾಗಿ ನಿರ್ಮಿಸಿದ ಮಸೀದಿ ಹಾಗೂ ಶಾಲಾ ಕೊಠಡಿಯನ್ನು ರಾಹುಲ್ ಉದ್ಘಾಟನೆ ಮಾಡಿದರು. ಸಮಾಜದ ಮುಖಂಡರಾದ ಮೌಲಾಸಾಬ ದೇಸಾಯಿ ಸೇರಿ ಇನ್ನಿತರರು ಹಾಜರಿದ್ದರು. ಗ್ರಾಮದಲ್ಲಿ …
Read More »ದಡ್ಡಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾನ ಹಾನಿ ಪರಿಶೀಲಿಸಿದ ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ದಡ್ಡಿ ಜಿಪಂ ವ್ಯಾಪ್ತಿಯ ದಡ್ಡಿ, ಮೋದಗಾ, ಶೆಟ್ಟಿಹಳ್ಳಿ, ಧೋಂಡಗಟ್ಟಿ, ಕೋಟ ಹಾಗೂ ಸಲಾಮವಾಡಿ ಗ್ರಾಮಗಳಿಗೆ ತೆರಳಿ ಮಳೆ ಹಾಗೂ ಪ್ರವಾಹದಿಂದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾದ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ಪರಿಶೀಲನೆ …
Read More »3ನೇ ಅಲೆ ಆತಂಕ; ಬೆಳಗಾವಿ ಗಡಿಯಲ್ಲಿ ಕಟ್ಟು ನಿಟ್ಟಿನ ತಪಾಸಣೆ.
ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಮತ್ತು ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದಾಗಿ ಗಡಿಯ ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಅಲ್ಲಿಂದ ಬರುವವರಿಂದ ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್ಟಿಪಿಸಿಆರ್) ಕೇಳಲಾಗುತ್ತಿದೆ. ಅದು ಇಲ್ಲದಿದ್ದರೆ ಕೋವಿಡ್ ಡೋಸ್ ಪಡೆದಿರುವ ಬಗ್ಗೆ ಪ್ರಮಾಣಪತ್ರ ಪ್ರಸ್ತುತಪಡಿಸಬೇಕು. ಇವೆರಡೂ ಇಲ್ಲದಿದ್ದರೆ ಪ್ರವೇಶ ನೀಡುತ್ತಿಲ್ಲ. ಅಲ್ಲಿಂದಲೇ ವಾಪಸ್ ಕಳುಹಿಸಲಾಗುತ್ತಿದೆ. ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಗಡಿಯ ವಿವಿಧೆಡೆ 22 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿರುವ ಕೊಗನೊಳ್ಳಿ ಟೋಲ್ನಾಕಾ ಬಳಿಯ ಚೆಕ್ಪೋಸ್ಟ್ನಲ್ಲಿ …
Read More »ಕುರುಬ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ನೀಡಿ ರಾಮು ಕೋಣಿ ಒತ್ತಾಯ.
ಗೋಕಾಕ:-ರಾಜ್ಯ ರಾಜಕಾರಣ ಕೇಂದ್ರಿತವಾಗಿರುವುದು ಜಾತಿಯಲ್ಲಿಯೇ, ಜಾತಿ ಇಲ್ಲದೇ ರಾಜಕೀಯ ಮಾಡಲು ಸಾಧ್ಯವಿಲ್ಲ ಹಾಗಾಗಿ ಹಿಂದುಳಿದ ವರ್ಗಗಳ ಪರ ಧ್ವನಿ ಎತ್ತದೆ ಅನ್ಯಮಾರ್ಗವಿಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಸ್ಮಾರಕ ಪ್ರಾಧಿಕಾರ ಹೋರಾಟ ರಚನಾ ಸಮಿತಿ, ಗೋಕಾಕ ತಾಲೂಕಾ ಉಪಾಧ್ಯಕ್ಷ ರಾಮು ಕೋಣಿ ತಿಳಿಸಿದರು. ಹೌದು ರಾಜ್ಯ ಬಿಜೆಪಿಯಲ್ಲಿರುವ ಹಿಂದುಳಿದ ವರ್ಗಗಳ ಏಕೈಕ ನಾಯಕ ಈಶ್ವರಪ್ಪ ಅವರೊಂದಿಗೆ …
Read More »ಕುರುಬರ ಸಂಘದ ನೂತನ ಕಾರ್ಯಾಧ್ಯಕ್ಷರಿಂದ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ
ಗೋಕಾಕ: ಬೆಳಗಾವಿ ಜಿಲ್ಲೆಯ ಕುರುಬರ ಸಂಘದ ನೂತನ ಕಾರ್ಯಾಧ್ಯಕ್ಷರಾಗಿ ನೇಮಕರಾದ ಅಮಸಿದ್ಧ ವಡೇರ ರವರು ನಗರದ ಹಿಲ್ ಗಾರ್ಡನ್ ಕಚೇರಿಗೆ ಭೇಟಿ ನೀಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಪಾಂಡು ಮನ್ನಿಕೇರಿ, ಶಿವು ಕಿಲಾರಿ, ವಿಠ್ಠಲ ಮುರಕಿಬಾವಿ, ಲಕ್ಷ್ಮಣ ಅಲಕನೂರ, ಉದಯ ಛಪರಿ, ಅಲ್ಲಪ್ಪಾ ಗಣೆಶವಾಡಿ, ಮಾದೇವ ವಡೇರ, ಯಮನಪ್ಪ ವಡೇರ, ನಿಂಗಪ್ಪಾ ವಡ್ಡರಗಾಂವಿ, ವಿನಾಯಕ ಕಟ್ಟಿಕಾರ ಹಾಗೂ ಇತರರು …
Read More »ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
ಗೋಕಾಕ: ಸಮೀಪದ ಸತ್ತಿಗೇರಿ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸಂಘದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕುರಿಗಾಹಿಗಳಿ ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಹೇಳಿದರು. ಯಾವುದೇ ಸಂಘ ಅಭಿವೃದ್ಧಿಯಾಗಲು ಅಧ್ಯಕ್ಷರು ಹಾಗೂ ಅಧಿಕಾರಿಗಳ ಪಾತ್ರ ಪ್ರಮುಖವಾಗಿರುತ್ತದೆ. …
Read More »ಹೊಸ ವಂಟಮುರಿ, ಮಲಹೋಳಿಯಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಹೊಸ ವಂಟಮುರಿ ಮತ್ತು ಮಲಹೋಳಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ರಾಹುಲ್ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆಗಳ ವೀಕ್ಷಣೆ ಮಾಡಿದರು. ಹಾನಿಯ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ ಅವರ ಗಮನಕ್ಕೆ ತಂದು, ಸಂತ್ರಸ್ತರಿಗೆ ಸರ್ಕಾರದಿಂದ …
Read More »ಬಸವರಾಜ ಬೊಮ್ಮಾಯಿ ಅವರು ಸಮತೋಲನ ಆಡಳಿತ ನೀಡುತ್ತಾರೆ :ಮುರುಘಾ ಶರಣರು
ಗೋಕಾಕ: ‘ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ನೀಡಿದ ಹೊಸ ಯೋಜನೆಗಳನ್ನು ಮತ್ತು ಜನಹಿತ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಮೂಲಕ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮತೋಲನ ಆಡಳಿತ ನೀಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಇಲ್ಲಿನ ಶೂನ್ಯ ಸಂಪಾದನಮಠದಲ್ಲಿ ಪಾದಪೂಜೆ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದರು. ‘ಬಸವರಾಜ ಅವರು ಯಡಿಯೂರಪ್ಪ ಮಾರ್ಗದರ್ಶನ ಪಡೆಯಲಿದ್ದಾರೆ. ರಾಜ್ಯದ ಗೃಹ ಮಂತ್ರಿಯಾಗಿ ಮತ್ತು …
Read More »ಘಟಪ್ರಭೆ, ಮಲಪ್ರಭೆ ಅಬ್ಬರ ಕಡಿಮೆ, ಕೃಷ್ಣೆ ಯಥಾಸ್ಥಿತಿ
ಬೆಳಗಾವಿ/ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ ತೀರದಲ್ಲಿರುವ ಚಿಕ್ಕೋಡಿ, ಅಥಣಿ, ಕಾಗವಾಡ, ರಾಯಬಾಗ ತಾಲ್ಲೂಕುಗಳಲ್ಲಿನ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಮಹಾರಾಷ್ಟ್ರದ ಕಡೆಯಿಂದ 3.43 ಲಕ್ಷ ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಬಂದು ಸೇರುತ್ತಿದೆ. ಬುಧವಾರ 3.82 ಲಕ್ಷ ಕ್ಯುಸೆಕ್ ನೀರು ಬರುತ್ತಿತ್ತು. 24 ಗಂಟೆಗಳ ಅವಧಿಯಲ್ಲಿ ನೀರಿನ ಹರಿವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗುರು ವಾರ ಮಲಪ್ರಭಾ ಹಾಗೂ …
Read More »ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳ ಸದುಪಯೋಗಕ್ಕೆ: ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಕರೆ
ಯಮಕನಮರಡಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮತಕ್ಷೇತ್ರದ ಮಾವನೂರ ಸರ್ಕಾರಿ ಪ್ರಾಥಮಿಕ ಶಾಲೆಯ ನಾಲ್ಕು ನೂತನ ಕೊಠಡಿಗಳನ್ನು ಇಂದು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಿಯಾಂಕಾ ಅವರು ಗ್ರಾಮ ಪಂಚಾಯತ್ 14ನೇ ಹಣಕಾಸು ಯೋಜನೆಯಡಿ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು ನೂತನ ಕೊಠಡಿಗಳನ್ನು ಹಾಗೂ ಕ್ರೀಡಾ ಸಾಮಗ್ರಿಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು. ಮುಖಂಡರಾದ ಕುಮಾರ ಗುಡಗನಟ್ಟಿ, ಶಿವಪ್ಪ ಈರನಟ್ಟಿ, ಯಲ್ಲನಾಯ್ಕ …
Read More »