Breaking News

ಬೆಳಗಾವಿ

ಕೃಷ್ಣ -ಕಾವೇರಿ ಕಣಿವೆ ರೈತರ ಅನುಕೂಲಕ್ಕೆ ವಿಶಿಷ್ಠ ಯೋಜನೆಗಳ ಅನುಷ್ಠಾನಕ್ಕೆ ಚಿಂತನೆ ; ಭೂಪೇಂದ್ರ ಯಾದವ್ ಜತೆ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ

ಬೆಂಗಳೂರು, ಡಿ. 31, 2020: ರಾಜ್ಯದ ಕೃಷ್ಣ ಮತ್ತು ಕಾವೇರಿ ಕೊಳ್ಳದ ರೈತರಿಗೆ ಹೆಚ್ಚಿನ ಅನುಕೂಲ ಆಗುವಂತಹ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿರುವ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜ್ಯಸಭಾ ಸದಸ್ಯ ಭೂಪೆಂದ್ರ ಯಾದವ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಮಹತ್ವದ ಬೆಳವಣಿಗೆಯಲ್ಲಿ ಅಸ್ಸಾಂನ ರಾಜಧಾನಿ ಗೌಹಾಟಿಯಲ್ಲಿ ಭೂಪೆಂದ್ರ ಅವರನ್ನು ಭೇಟಿ ಮಾಡಿದ್ದ ಸಚಿವರು, ಬ್ರಹ್ಮಪುತ್ರ ನದಿ ಕಣಿವೆಯ ಇಕ್ಕೆಲಗಳಲ್ಲಿ ವಿಶ್ವದ ಪ್ರತಿಷ್ಠಿತ ಮಲ್‌ಬರಿ ಮತ್ತು ಗೋಲ್ಟನ್ ಮೋಘಾ …

Read More »

ಶಾಸಕ  ಸತೀಶ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳ ಗೆಲುವು.

ಯಮಕನಮರಡಿ  ಮತಕ್ಷೇತ್ರದ  ಧರನಟ್ಟಿ  ಗ್ರಾಮ ಪಂಚಾಯಿತಿ  ಒಂದನೇ ವಾರ್ಡ್ ನಿಂದ  ಶ್ರೀ   ಬಾಳೇಶ ನಿಂಗಪ್ಪ ದಾಸನಟ್ಟಿಯವರು ಭರ್ಜರಿ ಜಯಗಳಿಸಿದ್ದಾರೆ. ಶಾಸಕ  ಸತೀಶ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಯಾಗಿರುವ ಬಾಳೇಶ್  361 ಮತಗಳ ಪಡೆಯುವ ಮೂಲಕ  ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.  ಧರನಟ್ಟಿ ಪಂಚಾಯಿತಿಗೆ ಇವರ ತಂದೆ, ತಾಯಿ ಸೇರಿ ಒಟ್ಟು  ಒಂದೇ ಕುಟುಂಬದ  ಮೂರು   10 ಬಾರಿ   ಸದಸ್ಯರಾಗಿ ಆಯ್ಕೆಯಾದ್ದರು ಇಲ್ಲಿ ಸ್ಮರಿಸಬಹುದು. ವಿಜಯೋತ್ಸವ: ಚುನಾವಣೆಯಲ್ಲಿ ಭರ್ಜರಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ.!

ಗೋಕಾಕ: ಡಿ.೨೨ ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ ೩೩ ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ ೩೩ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ ವಿಜಯದತ್ತ …

Read More »

ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯತಿಥಿ ; ಶ್ರೇಷ್ಠ ಕಲಾವಿದನನ್ನು ಸ್ಮರಿಸಿದ ಸಚಿವ ರಮೇಶ್ ಜಾರಕಿಹೊಳಿ‌

ಕನ್ನಡ ಚಲನಚಿತ್ರ ರಂಗದ ಧೃವತಾರೆಯಾಗಿ ಮಿಂಚಿದ *ಸಾಹಸಸಿಂಹ ಡಾ.ವಿಷ್ಣುವರ್ಧನ್* ಅವರ ಪುಣ್ಯತಿಥಿಯ ದಿನವಾದ ಇಂದು ಈ ಮೇರುನಟನನ್ನು ಗೌರವಪೂರ್ವಕವಾಗಿ ಸ್ಮರಿಸೋಣ. ಬಹುಭಾಷಾ ತಾರೆಯಾಗಿ ಕಲಾ ರಸಿಕರ ಮನದಲ್ಲಿ ಶಾಶ್ವತ ಸ್ಥಾನ ಪಡೆದಿರುವ *ಡಾ. ವಿಷ್ಣುವರ್ಧನ್* ಅವರ ಕಲಾ ಪ್ರೌಢಿಮೆ, ನಟನಾ ಶ್ರೀಮಂತಿಕೆ ಹಾಗೂ ಸರ್ವಶ್ರೇಷ್ಠ ವ್ಯಕ್ತಿತ್ವದ ಪ್ರಭಾವ ಸದಾ ಜೀವಂತವಾಗಿದೆ. ಸಾಮಾಜಿಕ ಸಂದೇಶಗಳನ್ನು ಸಾರುವ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ರಾಜ್ಯದ ಜನಮನಗೆದ್ದ ಡಾ. ವಿಷ್ಣುವರ್ಧನ್ ಅವರು ಇಂದಿಗೂ ನಮ್ಮ ಮನೆ, …

Read More »

ಉಪ ಸಭಾಪತಿ ಎಸ್.ಎಲ್ ಧರ್ಮೇಗೌಢ ನಿಧನಕ್ಕೆ ಶಾಸಕ ಸತೀಶ ಜಾರಕಿಹೊಳಿ ಸಂತಾಪ

ಬೆಳಗಾವಿ: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್ ಧರ್ಮೇಗೌಢ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಧರ್ಮೇಗೌಡರು  ತುಂಬ ಆತ್ಮೀಯರು, ಮುಂಚೆ ಜೆಡಿಎಸ್ ನಲ್ಲಿ  ನಾನು ಅವರೊಂದಿಗೆ ಕೆಲಸ ಮಾಡಿದ್ದೇನೆ.  ಜೀವನದಲ್ಲಿ ಸಮಸ್ಯೆಗಳು ಬರುವುದು ಸಹಜ. ಅವರು  ಹೋರಾಟ ಮಾಡಬೇಕಿತ್ತು.  ಅನಿವಾರ್ಯವಾಗಿ ನಮ್ಮನ್ನೆಲ್ಲ  ಅಗಲಿದ್ದಾರೆ. ಅವರ ಕುಟುಂಬಕ್ಕೆ ದುಃಖ  ಸಹಿಸಿಕೊಳ್ಳುವ ಶಕ್ತಿ ಬರಲಿ ಎಂದು ಕಂಬನಿ ಮಿಡಿದರು. ಚಿಕ್ಕಮಗಳೂರಿನಲ್ಲಿ  ಸಹಕಾರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಧರ್ಮೇಗೌಡರು  …

Read More »

ಧರ್ಮೇಗೌಡರ ಹಠಾತ್ ನಿಧನ ; ಸಹಕಾರಿ ಕ್ಷೇತ್ರವೂ ಬಡವಾಗಿದೆ – ಸಂತಾಪ ಸೂಚಿಸಿದ ಸಚಿವ ರಮೇಶ್ ಜಾರಕಿಹೊಳಿ‌

ಕರ್ನಾಟಕ ವಿಧಾನಪರಿಷತ್ತಿನ ಉಪ ಸಭಾಪತಿಯಾಗಿದ್ದ *ಶ್ರೀ ಎಸ್ ಎಲ್ ಧರ್ಮೇಗೌಡ* ರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಜ್ಜನ ವ್ಯಕ್ತಿಯಾಗಿದ್ದ *ಧರ್ಮೇಗೌಡ* ರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು. ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು …

Read More »

ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಾಟ : ಶಪಥಗೈದಿದ್ದ ಕಸ್ತೂರಿ ಬಾವಿ ಅವರಿಗೆ ಸನ್ಮಾನ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಕನ್ನಡ ಧ್ವಜ ಹಾರಾಡಿದ ಹಿನ್ನೆಲೆ  ಕನ್ನಡ ಪರ ಹೋರಾಟಗಾರ  ಶ್ರೀನಿವಾಸ ತಾಳೂರಕರ, ಹೋರಾಟಗಾರ್ತಿ ಕಸ್ತೂರಿ ಬಾವಿ ಅವರಿಗೆ ಸನ್ಮಾನಿಸಿ, ಚಪ್ಪಲಿ ತೊಡಸಿದರು. ಕಳೆದ 30 ವರ್ಷಗಳಿಂದ ಕಸ್ತೂರಿ ಬಾಯಿ ಅವರು ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. 16 ವರ್ಷ ಗಳ ಹಿಂದೆ ಬೆಳಗಾವಿ ಪಾಲಿಕೆಯ ಎದುರು ಕನ್ನಡ ಧ್ವಜ ಹಾರಾಡುವವರೆಗೂ ಕಾಲಿಗೆ ಚಪ್ಪಲಿ ಹಾಕಿಕೊಳ್ಳುವುದಿಲ್ಲವೆಂದು ಶಪಥ ಮಾಡಿದ್ದರು.  ಹೀಗಾಗಿ 16 ವರ್ಷಗಳು ಬರಿಗಾಲಿನಲ್ಲಿಯೇ …

Read More »

ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ

ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …

Read More »

ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ; ಮಾನವೀಯತೆ ಮೆರೆದ ಸಚಿವ ರಮೇಶ್ ಜಾರಕಿಹೊಳಿ‌.

ಭಾರತದ ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ‌* ಅವರು ಮಾನವೀಯತೆಯನ್ನು ಮೆರೆದಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಕಾಲದಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ *ಶ್ರೀ ಬಿ ಎಸ್ ಯಡಿಯೂರಪ್ಪ* ಅವರು ಎಲ್ಲಾ ಜನಪ್ರತಿನಿಧಿಗಳಿಗೆ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು …

Read More »

FDA, SDA ಅಭ್ಯರ್ಥಿಗಳ ನೇಮಕಾತಿಗೆ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಭ್ಯರ್ಥಿಗಳಿಂದ ಸಚಿವರಿಗೆ ಮನವಿ

ಗೋಕಾಕ :ಸನ್ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡಿದ್ದು ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ ಇಲಾಖೆಯು ನೇಮಕ ಪ್ರಕ್ರಿಯೆಯನ್ನು ತಡೆಹಿಡಿದಿದೆ. ಆದರೇ ಇದೇ ಅಧಿಸೂಚನೆಯಲ್ಲಿ ಆಯ್ಕೆಯಾದ …

Read More »