ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …
Read More »ಒಂದೂವರೆ ಕಿ.ಮೀ. ಹೆಚ್ಚಾಗುತ್ತದೆಂದು ಹಿಂದೇಟು, “ಮೃತ್ಯುಕೂಪ” ರಸ್ತೆಯಲ್ಲಿ ಪ್ರಯಾಣ.
ರಾಮದುರ್ಗ (ಬೆಳಗಾವಿ ಜಿಲ್ಲೆ): ಕೆಎಸ್ಆರ್ಟಿಸಿ ಬಸ್ಗಳು ಸೇರಿದಂತೆ ವಾಹನಗಳು ಅಪಾಯಕಾರಿಯಾದ ರಸ್ತೆಯಲ್ಲೇ ಸಂಚರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ‘ಮೃತ್ಯುಕೂಪ’ ಎಂದೇ ಅಪಖ್ಯಾತಿ ಹೊಂದಿದ್ದ ಇಲ್ಲಿನ ಮುಳ್ಳೂರು ಘಾಟ್ನಲ್ಲಿ ವಾಹನಗಳಲ್ಲಿ ಹೋಗುವವರು ಕೈಯಲ್ಲಿ ಜೀವ ಹಿಡಿದುಕೊಂಡೆ ಪ್ರಯಾಣಿಸಬೇಕಿತ್ತು. ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಪಘಾತಗಳಾಗಿ ಸಾವು-ನೋವು ಸಂಭವಿಸಿರುವ ಘಾಟ್ ಸುಧಾರಣೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಹೊಸ ಮಾರ್ಗ ನಿರ್ಮಿಸುವಂತೆ ಬೇಡಿಕೆ ಇತ್ತು. ಹಿಂದಿನ ಶಾಸಕ ಅಶೋಕ ಪಟ್ಟಣ ಅವರ ಪ್ರಯತ್ನದಿಂದ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ …
Read More »