ಶಿವಮೊಗ್ಗ: ಮಠಗಳ ಅನುದಾನಕ್ಕೆ ಸಂಬಂಧಿಸಿದಂತೆ ಕಮಿಷನ್ ಪಡೆಯುವುದು ನಡೆಯುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸೋಮವಾರ ಮಾತನಾಡಿದ ಅವರು, ಮಠಗಳ ಅನುದಾನದಲ್ಲೂ ಕಮಿಷನ್ ಕೇಳಲಾಗುತ್ತಿದೆ ಎಂಬುದೆಲ್ಲ ಸುಳ್ಳು, ಆ ಬಗ್ಗೆ ನಿರ್ದಿಷ್ಟವಾಗಿ ದೂರು ಕೊಟ್ಟರೆ ಅಂತಹವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಮಠಗಳ ಅನುದಾನದಲ್ಲೂ ಕಮಿಷನ್ ಕೇಳಲಾಗುತ್ತಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿಯವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಹಾಗೆ ಕಮಿಷನ್ ಕೇಳಿದ್ದು ಯಾರು ಅಂತ ಸ್ವಾಮೀಜಿಯವರು …
Read More »*ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕ ಪಿಕ್ಸ್.! ಮಿನಿ ಅಖಾಡಕ್ಕೆ ಲೋಕಲ್ ಲೀಡರ್ಸ ರೇಡಿ*
ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು (Karnataka Election Commission) ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ (58 Urban Local Body election) ಘೋಷಣೆ ಮಾಡಿದ್ದು, ಡಿಸೆಂಬರ್ 27 ರಂದು ಮತದಾನ ನಡೆಯಲಿದೆ. ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, 4 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ …
Read More »ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್
ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ …
Read More »ಸಮಾಜ ಸೇವೆಯ ಸಾಧನೆಗೆ ಒಲಿದು ಬಂದಿತ್ತು ಗೌರವ ಡಾಕ್ಟರೇಟ್ ಪದವಿ.
ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ರಾಜಕೀಯ ಹಾಗೂ ಪ್ರಚಾರದ ಹಿನ್ನೆಲೆಯಲ್ಲಿ ಹಲವರು ಮಾಧ್ಯಮಗಳಲ್ಲಿ ಪ್ರಚಾರದ ಮೂಲಕ ಹಾಗೂ ವೇದಿಕೆಯ ಭರ್ಜರಿ ಭಾಷಣಗಳ ಮೂಲಕ ತಮ್ಮ ಹೆಸರು ಮತ್ತು ಪ್ರಸಿದ್ಧಿಯನ್ನು ವೃದ್ಧಿಸಿಕೊಳ್ಳುತ್ತಾರೆ. ಆದರೆ ರಾಜು ಕಿರಣಗಿ ಇದಕ್ಕೆ ಅಪವಾದ ವೆಂಬಂತೆ ‘ವನಸುಮದಂತೆ’ ತನ್ನಷ್ಟಕ್ಕೆ ತಾನು ಜನರ ಅಭಿವೃದ್ಧಿಗಾಗಿ ಸಹಾಯ ಮಾಡುತ್ತಾ, ತಮ್ಮ ಪ್ರಾಂಜಲ ಹಾಗೂ ಪ್ರಾಮಾಣಿಕ ಸೇವೆಯನ್ನು ತಳಮಟ್ಟದಿಂದ ಮಾಡುತ್ತಾ ವಿಕಸನಗೊಂಡಿದ್ದಾರೆ. ಬಡವರ ಸೇವೆಗಾಗಿ ಯಾವುದೇ ಸರ್ಕಾರಿ ನೌಕರಿಯ ಬೆನ್ನು ಹಿಂದೆ …
Read More »ನಾಯಕತ್ವ ಬದಲಾವಣೆ ವಿಚಾರ;ಸಿಎಂ ಮೌನ ಮುರಿದು ಟ್ವೀಟ ಮಾಡಿದ್ದೇನು?
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಿರುಗಾಳಿ ಎದ್ದಿದ್ದು, ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ, ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೇ ಬಿಎಸ್ವೈ ಪರ ಮಠಾಧೀಶರು, ರಾಜಕೀಯ ನಾಯಕರು ಹೇಳಿಕೆ ನೀಡುತ್ತಿದ್ದು, ಪ್ರತಿಭಟನೆಗೆ ಕೂಡ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕೊನೆಗೂ ‘ಸಿಎಂ ಮೌನ ಮುರಿದಿದ್ದು, ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ, ಈ ವಿಚಾರದಲ್ಲಿ ಯಾರೂ ಕೂಡ ಅಭಿಮಾನ ಶಿಸ್ತಿನ ವ್ಯಾಪ್ತಿ …
Read More »ವಿರೋಧಿಗಳಿಗೆ ಮುಖ್ಯಮಂತ್ರಿ ಟಕ್ಕರ್! ಬಿಎಸ್ವೈಗೆ ಎರಡು ಟಾಸ್ಕ್ ಕೊಟ್ಟ ಹೈಕಮಾಂಡ್.
ಯಾವಾಗ ಸಿಎಂ ಬಿ. ಎಸ್. ಯಡಿಯೂರಪ್ಪ ದೆಹಲಿಗೆ ಹೋದರೋ, ಆಗಿನಿಂದಲೂ ರಾಜ್ಯದಲ್ಲಿ ಎದ್ದ ಗಾಳಿ ಸುದ್ದಿ ಅಂದರೆ, ಬಿಎಸ್ವೈ ರಾಜೀನಾಮೆ ನೀಡಲಿದ್ದಾರೆ ಎಂಬುದು. ಮೊದಲೇ ಕೆಲವು ತಿಂಗಳಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬದಲಾವಣೆ ಬಗ್ಗೆ ವಿರೋಧಿಗಳು ಪದೇಪದೆ ಹೇಳಿಕೆ ಕೊಡುತ್ತಿರುವುದಕ್ಕೂ, ಬಿಎಸ್ವೈ ದೆಹಲಿಗೆ ಹಾರಿದ್ದಕ್ಕೂ ತಾಳೆ ಆಗುವಂತೆ ಅಂತೆ-ಕಂತೆ ಜೋರಾಗಿದ್ದ ಬೆನ್ನಲ್ಲೇ ಸಿಎಂ ಇದೀಗ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇದಲ್ಲದೆ, ದೆಹಲಿಯಲ್ಲಿ ಬಿ.ಎಸ್. ಯಡಿಯೂರಪ್ಪ ತಮ್ಮ ವಿರೋಧಿಗಳಿಗೆ ಠಕ್ಕರ್ ಕೂಡ ಕೊಟ್ಟಿದ್ದಾರೆ. ದೆಹಲಿಗೆ …
Read More »ನೀವು ಗಂಡಸೇ ಆಗಿದ್ದರೇ ಆಡಿಯೋ ಬಿಡುಗಡೆ ಮಾಡಿ ಲಂಕೇಶಗೆ ನಟ ದರ್ಶನ್ ಸವಾಲ್
ಮೈಸೂರು : ಇಲ್ಲಿಂದಲೇ ಆರಂಭವಾದಂತ ಪ್ರಕರಣ, ಇದೀಗ ದೊಡ್ಮನೆವರೆಗೆ ಬಂದಿದೆ. ನನ್ನ ಬಗ್ಗೆ ಅನ್ ಎಜುಕೇಟೆಡ್ ಅಂತ ಹೇಳ್ತಾರೆ. ಸಂದೇಶ್ ಹಾಗೂ ಇಂದ್ರಜಿತ್ ಲಂಕೇಶ್ ಮಾಡಿರೋ ಆಡಿಯೋ ನನ್ನದಲ್ಲ ಅಂತ ಸಂದೇಶ್ ಹೇಳಿದ್ದಾರೆ. ಆದ್ರೇ ನಾನು ಬಹಿರಂಗವಾಗೇ ಸವಾಲ್ ಹಾಕುವೆ. ನನ್ನದೂ ಒಂದು ಆಡಿಯೋ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಬಳಿ ಇದೆ. ನೀವು ಗಂಡಸೇ ಆಗಿದ್ದರೇ, ನಿಮ್ಮ ಅಪ್ಪನಿಗೇ ಹುಟ್ಟಿದ್ದರೇ ನನ್ನದು ಒಂದು ಆಡಿಯೋ ಇದೆ. ಅದನ್ನು ಇಂದು …
Read More »ಲಂಕೇಶ್ ನಟ ದರ್ಶನ್ ಮೇಲೆ ಆರೋಪ; ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ .
ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ವಂಚನೆ ಪ್ರಕರಣ ಕೇಸು ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮೈಸೂರಿನಲ್ಲಿ ಸಂದೇಶ್ ಪ್ರಿನ್ಸ್ ನಾಗರಾಜ್ ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು …
Read More »*ಕರೋನಾ ಮೂರನೇ ಅಲೆಯನ್ನು ಎದುರಿಸಲು ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ: ಆರೋಗ್ಯ ಸಚಿವ ಸುಧಾಕರ್*
ಬೆಂಗಳೂರು ಜುಲೈ 11*: ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಸುಧಾಕರ್ ಹೇಳಿದರು. ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್ ಆಸ್ಪತ್ರೆಯಲ್ಲಿ ಕರೋನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು, ಯುವ …
Read More »ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ
ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಾಗುತ್ತದೆ. ವಾರದೊಳಗೆ ಪ್ರಕ್ರಿಯೆ ಮುಗಿಸಲು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರ ಮೂರು ವರ್ಷ ಅವಧಿ ಪೂರ್ಣಗೊಂಡಿದೆ. ಇನ್ನು ಕೆಲವೆಡೆ ಬದಲಾವಣೆ ಮಾಡುವಂತೆ ಬೇಡಿಕೆಯೂ ಸಹ ಇದೆ. ಕೆಲವರು ಸ್ವಯಂ ಪ್ರೇರಿತವಾಗಿ ಸ್ಥಾನ ಬಿಟ್ಟು ಕೊಡಲು ನಿರ್ಧರಿಸಿದ್ದಾರೆ. ಅಲ್ಲಿ ಜಿಲ್ಲಾಧ್ಯಕ್ಷರ ಬದಲಾವಣೆ …
Read More »