ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯನ್ನ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರು, ಉಡುಪಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಆ ಕೋಟೆಯನ್ನು ಮತ್ತೊಮ್ಮೆ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸುವ ಕಾಲ ಸನ್ನದವಾಗಿದೆ ಎಂದರು. ಕಾಂಗ್ರೆಸ್ ಪಕ್ಷವನ್ನು ಕೇಡರ್ ಮಾದರಿಯಲ್ಲಿ ಒಗ್ಗಟ್ಟಾಗಿ ಬೂತ್ ಮಟ್ಟದಿಂದ ಸಂಘಟಿಸಲು ಈಗಾಗಲೇ ರಾಜ್ಯಾದ್ಯಂತ ಕಾರ್ಯ …
Read More »ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ*
ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ರಮೇಶ್ …
Read More »ಸನಾತನ ಧರ್ಮವನ್ನು ಅಪ್ಪಿಕೊಂಡಿದ್ದ ಭಗಿನಿ ನಿವೇದಿತಾ ಅವರು — ಸಚಿವ ರಮೇಶ್ ಜಾರಕಿಹೊಳಿ
ಪಶ್ಚಿಮದ ರಾಷ್ಟ್ರದಲ್ಲಿ ಹುಟ್ಟಿದ್ದರೂ ಸಹೋದರಿ ನಿವೇದಿತಾ ಭಾರತೀಯತೆಯನ್ನು ಅಪ್ಪಿಕೊಂಡು ಆಧ್ಯಾತ್ಮಿಕ ಸಾಧನೆ ಮಾಡಿದರು ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಗೋಕಾಕ್ ನಗರದಲ್ಲಿರುವ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ *ಭಗಿನಿ ನಿವೇದಿತಾ ಅವರ 153ನೇ ಜನ್ಮ ಜಯಂತಿ ಕಾರ್ಯಕ್ರಮ* ಉದ್ಘಾಟಿಸಿ ಮಾತನಾಡಿದ ಸಚಿವರು, ತಾಯಿ ಭಾರತಾಂಬೆಯ ಪದತಲದಲ್ಲಿ ಸಮರ್ಪಿತಗೊಂಡ ಶ್ರೇಷ್ಠ ಪುಷ್ಪವೇ ಭಗಿನಿ ನಿವೇದಿತಾ ಎಂದರು. ಭಾರತೀಯರ ಸೇವೆ ಮತ್ತು ಆಧ್ಯಾತ್ಮಿಕ ಚಿಂತನೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಂತಹಾ …
Read More »ನೀರು ಮತ್ತು ನೈರ್ಮಲ್ಯ ಇಲಾಖೆಯ ಬಾಗಲಕೋಟೆ ಉಪ ವಿಭಾಗದ ಸಹಾಯಕ ಎಂಜಿನಿಯರ್ ಎಸಿಬಿ ಬಲೆಗೆ!
ಬಾಗಲಕೋಟೆ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬಾಗಲಕೋಟೆ ಉಪ ವಿಭಾಗದ ಸಹಾಯಕ ಅಭಿಯಂತರ ಅಶೋಕ ತೋಪಲಕಟ್ಟಿ (ಎ.ಎಸ್. ತೋಪಲಕಟ್ಟಿ) ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ 5.15 ಲಕ್ಷ ಮೊತ್ತದ ನಿಷೇಧಿತ ನೋಟು ಪತ್ತೆ ಯಾಗಿದ್ದು, ಅವುಗಳನ್ನು ನೋಡಿದ ಅಧಿಕಾರಿಗಳೂ ದಂಗಾದ ಪ್ರಸಂಗ ನಡೆದಿದೆ. ಕಳೆದ 2016ರಲ್ಲಿಯೇ ಹಳೆಯ 500 ಹಾಗೂ ಸಾವಿರ ಮುಖ ಬೆಲೆಯ ನೋಟುಗಳು ನಿಷೇಧ ಮಾಡಿದ್ದು, ಈಗ ಹಳೆಯ ನೋಟು …
Read More »ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.
ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು. ನೂತನ ಪುರಸಭೆ …
Read More »ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲ
ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಶೇ 7.5 ಮೀಸಲಾತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸಿ ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ ಪ್ರೀಡಂ ಪಾರ್ಕ ನಲ್ಲಿ ಕಳೆದ ಎರಡು ದಿನಗಳಿಂದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಅವರು …
Read More »ನಗರ ಸಭೆ ಸದಸ್ಯರಿಗೆ ಸಿಹಿ ಸುದ್ದಿ||ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ .
ಬೆಂಗಳೂರು, (ಅ.21): ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಅನುಮತಿ ಕೊಟ್ಟಿದ್ದು, ನವೆಂಬರ್ 2 ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದೆ. ನಿಯಮದಂತೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನೀಡಲಾಗಿದೆ. ಚುನಾವಣೆ ಘೋಷಣೆ ನಂತರ ತಡೆಯಾಜ್ಞೆ ಸೂಕ್ತವಲ್ಲ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ ಮಂಡನೆ …
Read More »ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವರ ಕರೆ.
ಪ್ರಧಾನ ಮಂತ್ರಿಗಳಾದ *ಶ್ರೀ ನರೇಂದ್ರ ಮೋದಿ* ಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅನೇಕ ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಮತ್ತು ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಜನತೆಗೆ ಕರೆ ನೀಡಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಅಗತ್ಯ ಅರೋಗ್ಯ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, ನೈರ್ಮಲ್ಯ …
Read More »ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಚಾಲನೆ
ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಉಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಉಳ್ಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ 573.73 ಲಕ್ಷ ರೂ ಅಂದಾಜು ಮೊತ್ತದ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಹಾಂತೇಶ ಮಗದುಮ್ಮ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾರೀಶಗೌಡ …
Read More »●ಅತಿವೃಷ್ಟಿ: ಮುನ್ನೆಚ್ಚರಿಕೆಗೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ. ●ಕೋವಿಡ್ ನಿಯಂತ್ರಣ: ನಿರ್ಲಕ್ಷ್ಯ ಸಲ್ಲದು; ಅಧಿಕಾರಿಗಳಿಗೆ ಸಚಿವರ ತಾಕೀತು
ಬೆಳಗಾವಿ, ಅ.16: ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ. ಆದಾಗ್ಯೂ ಮಳೆಯ ಪ್ರಮಾಣ ಹೆಚ್ಚಾದರೆ ಅದನ್ನು ಗಮನದಲ್ಲಿರಿಸಿಕೊಂಡು ಆಲಮಟ್ಟಿ ಜಲಾಶಯದಿಂದ ಇನ್ನಷ್ಟು ನೀರು ಬಿಡುಗಡೆ ಮಾಡಲು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಅತಿವೃಷ್ಟಿ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ (ಅ.16) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …
Read More »