ಬೆಂಗಳೂರು: ಹೊಸ ಬಗೆಯ ಕೊರೊನಾ ವೈರಸ್ ಹರಡುತ್ತಿರುವ ಕಾರಣದಿಂದ ರಾಜ್ಯದಲ್ಲಿ ಬುಧವಾರ (ಡಿ.23) ಜ. 2ರವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವಿನಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಕಚೇರಿ ಟ್ವೀಟ್ ಮಾಡಿದೆ.
ರಾಜ್ಯದಲ್ಲಿ ಇಂದಿನಿಂದ (ಡಿ.23ರಿಂದ) ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ನಾಳೆಯಿಂದ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ ಜಾರಿ
ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಸಮಯದಲ್ಲಿಯೂ ಬದಲಾವಣೆ ಆಗಿದೆ. ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ ಮಾತ್ರ ಕರ್ಫ್ಯೂ ಜಾರಿಯಲ್ಲಿರಲಿದೆ.
ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ.