ಬೆಂಗಳೂರು: ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿದ್ದಾರೆ. ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನೀರಿಕ್ಷೆ ಹೆಚ್ಚಿಸುವಂತೆ ಮಾಡಿದೆ.
ಸಿಎಂ ಬೊಮ್ಮಾಯಿ ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲು ತಾನು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಇನ್ನು ಸಂಪುಟ ಕಸರತ್ತು
ಅದಲ್ಲದೆ ಇಂದು ಮಧ್ಯಾಹ್ನ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದ ಸಮಸ್ಯೆಗಳ ಕುರಿತು ಸಂಸದರೊಂದಿಗೆ ಚರ್ಚೆ ನಡೆಸಲಿದ್ದಾರೆ.
ರಾಜ್ಯದ ಸಮಸ್ಯೆಗಳ ಕುರಿತು ಸಂಸದರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಸಿಎಂ ದೆಹಲಿ ಭೇಟಿ ಸಹಜವಾಗಿಯೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟುರುವವರಿಗೆ ಕುತೂಹಲ ಹೆಚ್ಚಿಸುವಂತೆ ಮಾಡಿದೆ. ಸಚಿವ ಸಂಪುಟ ಪಟ್ಟಿಗೆ ಇಂದೇ ವರಿಷ್ಠರ ಒಪ್ಪಿಗೆ ಸಿಗುತ್ತದೆಯೇ ಎಂದು ಕಾದು ನೋಡಬೇಕಿದೆ.
ಆದರೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಂಪುಟ ರಚನೆ ವಿಚಾರ ಮೊದಲ ಭೇಟಿಯಲ್ಲೇ ಚರ್ಚೆ ಮಾಡುವುದಿಲ್ಲ. ಮುಂದಿನ ಭೇಟಿಯಲ್ಲಿ ಚರ್ಚೆ ಮಾಡುತ್ತೇನೆ’ ಎಂದು ಹೇಳಿದ್ದಾರೆ.