ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಹೈಕೋರ್ಟ್ ಏಕಸದಸ್ಯ ಪೀಠದಿಂದ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದ್ದು, ಮೀಸಲಾತಿ ಪರಿಶೀಲನೆಗೆ ಎಎಜಿ ಧ್ಯಾನ್ ಚಿನ್ನಪ್ಪ, ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ರಾಜ್ಯ ಚುನಾವಣಾ ಆಯೋಗದ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಅವರನ್ನೊಳಗೊಂಡ ಸಮೀತಿಯನ್ನು ರಚಿಸಲಾಗಿದ್ದು, ಅಕ್ಟೋಬರ್ 22 ರಂದು ವರದಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.
ಹಾಸನ ನಗರಸಭೆ ಅಧ್ಯಕ್ಷ ಸ್ಥಾನವನ್ನು ಎಸ್ ಟಿ ವರ್ಗಕ್ಕೆ ಮೀಸಲಿರಿಸಿರುವುದನ್ನು ಪ್ರಶ್ನಿಸಿ ಎಚ್.ವಿ ಚಂದ್ರೇಗೌಡ ಸೇರಿ 21 ಚುನಾಯಿತ ಸದಸ್ಯರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಎಲ್ಲ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ಅಧಿಸೂಚನೆಗೆ ತಡೆಯಾಜ್ಞೆ ನೀಡಿದೆ.