ಗೋಕಾಕ: ನಗರಸಭೆ ಉಪಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿ ನಿಂಬೆಹಣ್ಣು ಕೈಯಲ್ಲಿ ಹಿಡಿದು ನಾಮಪತ್ರ ಸಲ್ಲಿಸಿ, ನಗರದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಮಾಜಿ ನಗರಸಭೆ ಸದಸ್ಯ ಗಿರೀಶ ಖೋತ ಅವರ ಅಕಾಲಿಕ ನಿಧನದಿಂದ ತೆರವಾದ ನಗರಸಭೆ ವಾರ್ಡ ನಂ13 ರ ಉಪಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಅಭ್ಯರ್ಥಿ ಪ್ರವೀಣ ಪ್ರಭಾಕರ ಚುನಮರಿ ನಿಂಬೆಹಣ್ಣು ಹಿಡಿದು ನಾಮಪತ್ರ ಸಲ್ಲಿಸಿದ್ದಾರೆ.
ಅಭ್ಯರ್ಥಿ ಪ್ರವೀಣ ಚುನಮರಿ ನಿಂಬೆಹಣ್ಣು ಹಿಡಿದು ನಾಮಪತ್ರ ಸಲ್ಲಿಸುವ ಪೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನೋಡುಗರು ಗೋಕಾಕ ರೇವಣ್ಣ ಎಂಬ ಬಿರುದು ನೀಡುತ್ತಿದ್ದಾರೆ. ಅಲ್ಲದೆ ನಾಮಪತ್ರ ಸಲ್ಲಿಕೆಗೂ ಮುನ್ನ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮಸ್ಕರಿಸಿದ್ದು, ಮೂಢನಂಬಿಕೆ ವಿರುದ್ಧ ದಿಕ್ಕಿನಲ್ಲಿ ಇರುವ ಬಸವ ತತ್ವಕ್ಕೆ ಅಪಮಾನ ಮಾಡಲಾಗಿದೆ ಎಂದು ಹಲವು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ನಗರದ ಪ್ರಜ್ಞಾವಂತ ನಾಗರಿಕರು ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿ ವಾಮಾಚಾರಕ್ಕೆ ಮೊರೆ ಹೋಗಿದ್ದನ್ನು ಖಂಡಿಸಿದ್ದಾರೆ.
Check Also
*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …