ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷದಿಂದ ಶಾಸಕಾಂಗ ಸಭೆ ನಡೆಯಿತು. ಮಹತ್ವದ ಸಭೆಯಲ್ಲಿ ಸಿಎಲ್ ಪಿ ನಾಯಕನಾಗಿ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಒಂದೇ ಸಾಲಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧಾರಕ್ಕೆ ಬಿಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ.ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯು ಮುಂದುವರೆಯಲಿದ್ದು, ಒಬ್ಬೊಬ್ಬರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದೆ ಶಾಸಕರು ತಮ್ಮ ಸಿಎಂ ಅಭ್ಯರ್ಥಿಯ ಆಯ್ಕೆಯ ಮಾಹಿತಿಯನ್ನು ಮುಂದಿಡಲಿದ್ದಾರೆ.
ಅಂದಹಾಗೇ ಇಂದಿನ ಮಹತ್ವದ ಸಿಎಲ್ ಪಿ ಸಭೆಗೆ ಅನೇಕ ಶಾಸಕರು ಬರಲು ಸಾಧ್ಯವಾಗಿರಲಿಲ್ಲ. ಎಲ್ಲಾ ಶಾಸಕರು ನಿರ್ಧಾರವನ್ನು ಎಐಸಿಸಿ ಅಧ್ಯಕ್ಷರಿಗೆ ಬಿಡಲು ನಿರ್ಧರಿಸಿದರು.
ಇನ್ನೂ ಸಿದ್ದರಾಮಯ್ಯ ಅವರಿಗೆ ಸುಮಾರು 75 ಶಾಸಕರ ಬೆಂಬಲವಿದ್ದರೆ, ಶಿವಕುಮಾರ್ ಅವರಿಗೆ ಸುಮಾರು 40 ಶಾಸಕರ ಬೆಂಬಲವಿದೆ ಎನ್ನಲಾಗುತ್ತಿದೆ. ಹೀಗಾಗಿ ನಾಳೆ ಎಐಸಿಸಿ ಅಧ್ಯಕ್ಷರು ಶಾಸಕರನ್ನು ಒಬ್ಬೊಬ್ಬರಾಗಿ ಭೇಟಿಯಾಗಿ ಸಿಎಲ್ಪಿ ನಾಯಕನ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಬೆಂಗಳೂರು: ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ಏಕ ಸಾಲಿನ ನಿರ್ಣಯವನ್ನು ಇಂದಿನ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳುವ ಮೂಲಕ, ಸಿಎಲ್ ಪಿ ಸಭೆ ಅಂತ್ಯಗೊಂಡಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಜನಾದೇಶವನ್ನು ಪಡೆದ ಒಂದು ದಿನದ ನಂತರ, ಪಕ್ಷವು ತನ್ನ ಶಾಸಕರ ಸಭೆ ನಡೆಯಿತು. ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಡಲು ಸಿಎಲ್ಪಿ ಸಭೆಯಲ್ಲಿ ನಿರ್ಧರಿಸಲಾಯಿತು.
ಸಿಎಲ್ಪಿ ತನ್ನ ವರದಿಯನ್ನು ಪಕ್ಷದ ಹೈಕಮಾಂಡ್ಗೆ ಕಳುಹಿಸಲಿದ್ದು, ಅವರು ಮುಂದಿನ ಕರ್ನಾಟಕದ ಮುಖ್ಯಮಂತ್ರಿಯ ಹೆಸರನ್ನು ಆಯ್ಕೆ ಮಾಡಿ ಘೋಷಿಸಲಿದ್ದಾರೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದೇ ತೀವ್ರ ಕುತೂಹಲ ಕೆರಳಿಸಿದೆ.