Breaking News

ಕೋವಿಡ್‌ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು’ ಗೃಹ ಇಲಾಖೆ ಎಚ್ಚರಿಕೆ


ನವದೆಹಲಿ: ಗಿರಿಧಾಮಗಳು, ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ದೇಶದ ವಿವಿಧೆಡೆ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಲಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹಸಚಿವಾಲಯವು ಬುಧವಾರ ಸೂಚನೆ ನೀಡಿದೆ.

ಈ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, ‘ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೂ ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ. ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ಭಾರಿ ಸಂಖ್ಯೆಯಲ್ಲಿ ಗುಂಪುಗೂಡುತ್ತಿದ್ದು, ದೈಹಿಕ ಅಂತರವನ್ನೇ ಮರೆತಿದ್ದಾರೆ. ಕೋವಿಡ್‌ನ 2ನೇ ಅಲೆ ಇನ್ನೂ ಮುಕ್ತಾಯವಾಗಿಲ್ಲ ಎಂಬುದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಡಬೇಕು.

ಕೋವಿಡ್‌ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದರಿಂದ ಬಹುತೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸಿವೆ. ಆದರೆ, ಕೋವಿಡ್ ನಿಯಮ ಸಡಿಲಿಕೆ ಮಾಡುವಾಗ ಎಚ್ಚರಿಕೆಯ ಕ್ರಮಗಳನ್ನೂ ಗಮನದಲ್ಲಿರಿಸಿಕೊಳ್ಳಬೇಕು’ ಎಂದು ಅಜಯ್ ಸಲಹೆ ನೀಡಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ (Chief Minister Basavaraja Bommai) 29 ನೂತನ ಸಚಿವರಿಗೆ ಖಾತೆ ಹಂಚಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ