ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಇಂದು ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಾಗಿದೆ.ಈ ಬಗ್ಗೆ ಸಭೆ ಬಳಿಕ ಸಚಿವ ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನಿಡಿದರು.
ಇದೇ ವೇಳೆ ಅವರು ಮಾತನಾಡಿ, ಲಸಿಕೆ ಅಭಿಯಾನಕ್ಕೆ ಒತ್ತು ನೀಡಲಾಗುವುದು, ಇದಲ್ಲದೇ ಸೋಂಕು ಹೆಚ್ಚು ಇರುವ ದೇಶದಿಂದ ಬರೋರ ಮೇಲೆ ನಿಗ ಇಡಲಾಗುವುದು, ಇನ್ನೂ ಕರೋನ ಸೋಂಕಿನ ಬಗ್ಗೆ ಶೀಘ್ರದಲ್ಲಿ ಮಾರ್ಗಸೂಚನೆ ಬಿಡುಗಡೆ ಮಾಡಲಾಗುವುದು ಅಂತ ಹೇಳಿದರು.
ಇದೇ ವೇಳೆ ಅವರು ಮಾತನಾಡಿ, ಸದ್ಯ ಬೆಂಗಳೂರಿನಲ್ಲಿ ಪಾಸಿಟಿವ್ ರೇಟ್ ದರ ಹೆಚ್ಚಳವಾಗಿದ್ದು, ಎಲ್ಲ ರೀತಿಯಲ್ಲಿ ಈ ಬಗ್ಗೆ ಗಮನ ಹರಿಸಲಾಗುತ್ತಿದೆ, ಇದಲ್ಲದೇ ಸದ್ಯ ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕುವುದಿಲ್ಲ, ಮುಂಬರುವ ದಿನಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗುವುದು ಅಂತ ಅವರು ಹೇಳಿದರು. ಎಲ್ಲರೂ ಸಾಮಜಿಕ ಅಂತರ ಕಾಪಾಡಬೇಕು. ಸೋಂಕು ಹೆಚ್ಚಿರುವ ದೇಶಗಳಿಂದ ಬಂದವರ ಮೇಲೆ ನಿಗಾ ವಹಿಸಬೇಕು ಏರ್‌ಪೋರ್ಟ್‌ನಲ್ಲಿ ಎಚ್ಚರ ವಹಿಸಿ, ನಾಲ್ವನೇ ಸೋಂಕು ಬರುವವರೆಗೆ ಕಾಯಬೇಡಿ, ಲಸಿಕೆ ಹಾಕಿಸಿಕೊಳ್ಳಿ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಿ. ಮಾಸ್ಕ್ ಬಗ್ಗೆ ಇನ್ನುಳಿದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುತ್ತೇವೆ ಅಂತ ಅವರು ಹೇಳಿದರು.
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ಜರುಗಿತು. ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಡಾ: ಎಂ.ಕೆ.ಸುದರ್ಶನ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ: ಅರುಂಧತಿ ಚಂದ್ರಶೇಖರ್ ,ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕಚಂದ್ರ ಮೊದಲಾದವರು ಉಪಸ್ಥಿತರಿದ್ದರು.