Breaking News

ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ; ದಲಿತ ಸಂಘರ್ಷ ಸಮಿತಿ ಪ್ರತಿಭಟನೆ


ಮೂಡಲಗಿ: ತಾಲೂಕಿನ ರಾಜಾಪೂರ ಗ್ರಾಮದ ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಮಂಗಳವಾರದoದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮೀತಿಯಿಂದ ಪಟ್ಟಣದ ಪ್ರಮುಖ ರಸ್ತೆ ಬಂದ್ ಮಾಡಿ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಕಾಮುಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣ ಸಾವಿರಾರು ಶಾಲಾ-ಕಾಲೇಜ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಕೃತ್ಯಗಳು ಹೆಚ್ಚಿದ್ದು, ಮಹಿಳೆಯರು ಹಾಗೂ ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ. ಆಡಳಿತಾತ್ಮಕ ಅರಾಜಕತೆ ಸೃಷ್ಟಿಯಾಗಿದೆೆ ಎಂದು ಪತ್ರಿಭಟನಾಕಾರರು ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ಸಿಎಂ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸದರು.

ಈ ಸಮಯದಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸತ್ತೇಪ್ಪ ಕರವಾಡಿ ಮಾತನಾಡಿ, ಭಾರತ ದೇಶಕ್ಕೆ ಸ್ವಾತಂತ್ರ ಬಂದು ಏಳು ದಶಕ ಕಳೆದರೂ ಹೆಣ್ಣು ಮಕ್ಕಳು ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ಇದೆ. ತಾಲೂಕಿನ ಗ್ರಾಮವೊಂದಲ್ಲಿ ನಡೆದ ಪ್ರಕರಣದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

ತಾಲೂಕಿನಲ್ಲಿ ಪ್ರಕರಣ ದಾಖಲಾಗಿ ಐದು ದಿನ ಕಳೆದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹಾಗೂ ಅರಭಾಂವಿ ಕೇತ್ಷದ ಜನಪ್ರತಿನಿಧಿಗಳು ಸಂತ್ರಸ್ಥರ ಬಾಲಕಿಯ ಕುಟುಂಬಕ್ಕೆ ಭೇಟಿ ನೀಡಿ, ಸಾಂತ್ವಾನ ಹೇಳದೆ ಇರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.

ಸಂಘಟನೆಯ ಮುಖಂಡ ರವೀಂದ್ರ ಸಣ್ಣಕ್ಕಿ, ರಮೇಶ ಮಾದರ, ಎಬನೇಜರ ಕರಬನ್ನವರ, ಬಸವರಾಜ ಕಾಡಾಪುರ ಮಾತನಾಡಿ, ಸಂತ್ರಸ್ಥ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು, ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಶಾಲಾ ಕಾಲೇಜುಗಳಲ್ಲಿ ಮತ್ತು ದುಡಿಯುವ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ ಸಮಿತಿ ರಚಿಸಬೇಕು. ಪ್ರಕರಣದ ಆರೋಪಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮರೆಪ್ಪ ಮರೆಪ್ಪಗೋಳ, ರಾಜೇಂದ್ರ ಐಹೋಳೆ, ಈರಪ್ಪ ಢವಳೇಶ್ವರ, ಸುರೇಶ ಸಣ್ಣಕ್ಕಿ, ಅಶೋಕ ಶಿದ್ಲಿಂಗಪ್ಪಗೋಳ, ರಮೇಶ ಸಣ್ಣಕ್ಕಿ, ಪ್ರಕಾಶ ಕೆಳಗಡೆ, ರಮೇಶ ಎಮ್‌ಡಿ. ಸಣ್ಣಕ್ಕಿ, ಮನೋಹರ ಅಜ್ಜನಕಟ್ಟಿ, ಮಹಾದೇವ ಮಾಸನ್ನವರ, ಕಾಡಪ್ಪ ಮೇಸ್ತಿ, ಪ್ರಕಾಶ ಹರಿಜನ, ಅಶೋಕ ಉದ್ದಪನ್ನವರ, ಬಸವರಾಜ ತುಗಲೆಪ್ಪಗೋಳ, ಸುಧಾ ಮುರಕುಂಬಿ, ಮಂಜುಳಾ ರಾಮನಕಟ್ಟಿ, ಗೀತಾ ಸಣ್ಣಕ್ಕಿ, ಸುಂದರವ್ವಾ ಕಟ್ಟಿಮನಿ, ಯಶೋಧ ಗಸ್ತಿ ಹಾಗೂ ಕರುನಾಡ ಸೈನಿಕ ತರಬೇತಿ ಕೇಂದ್ರ ಶಿಬಿರಾಥಿಗಳು, ಕಾಲೇಜ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಮತ್ತು ಸಮೀತಿಯ ಮಹಿಳಾ ಒಕ್ಕೂಟದ ಕಾರ್ಯಕರ್ತೆಯರು ಭಾಗವಹಿಸಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಯುವ ಜನತೆ ದುಶ್ಚಟ ಮಾಡದೆ, ಸಾಮಾಜಿಕ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ : ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ!

ಮೂಡಲಗಿ : ಯುವ ಜನತೆ ದುಶ್ಚಟ ಮಾಡದೆ, ದೇವರ ಕಾರ್ಯ, ಸಾಮಾಜಿಕ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ ಎಂದು ಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ