ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ.07 ರಂದು ನಡೆಯಲಿದ್ದು, ಸುಗಮ ಮತ್ತು ಶಾಂತಿಯುತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಗೋಕಾಕ ಮತಕ್ಷೇತ್ರದ ಹಲವು ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾರತ ಚುನಾವಣಾ ಆಯೋಗದ ಅನುಮೋದಿಸಿರುವಂತೆ ಮತದಾರರು ತಮ್ಮ ಮತ ಚಲಾಯಿಸುವ ಮೊದಲು ಮತದಾನ ಕೇಂದ್ರಗಳಲ್ಲಿ ಅವರ ಗುರುತಿಗಾಗಿ ಮತದಾರರ ಗುರುತಿಸಿ ಚೀಟಿ ತೋರಿಸಿ ಮತದಾನ ಮಾಡಬಹುದಾಗಿದೆ. ಮತದಾನದ ದಿನದಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆ ಹಾಗೂ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಗೋಕಾಕ ಸಹಾಯಕ ಚುನಾವಣಾಧಿಕಾರಿ ರಾಜೇಶ್ವರಿ ಜೈನಾಪುರ, ತಹಶೀಲ್ದಾರ್ ಮೋಹನ್ ಭಸ್ಮೇ, ಡಿವಾಯ್ಎಸ್ಪಿ ಎಚ್ ಡಿ ಮುಲ್ಲಾ, ಸಿಪಿಐ ಆರ್ ಎಸ್ ಜಾನರ್ , ಪಿಎಸ್ಐ ಕೆ ವಾಲಿಕಾರ ಹಾಗೂ ತಾಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.