ಬೆಳಗಾವಿ: ಕೋವಿಡ್ ಹೆಚ್ಚಳ ಹಿನ್ನೆಲೆ ಜಿಲ್ಲೆಯಲ್ಲಿ ಎರಡು ದಿನ ಸಂಪೂರ್ಣ ಲಾಕ್ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.
ಮೇ. 29 ಬೆಳಗ್ಗೆ 6 ರಿಂದ ಮೇ 31 ಬೆಳಗ್ಗೆ 6 ಗಂಟೆವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಯಾಗಲಿದೆ. ಆಸ್ಪತ್ರೆಗೆ ಸಂಚರಿಸಲು, ಅಗತ್ಯ ಸೇವೆ, ಔಷಧ ಪೂರೈಕೆ ಹಾಗೂ ಖರೀದಿಗೆ ಮಾತ್ರ ಅವಕಾಶ ಇರಲಿದೆ. ಎರಡು ದಿನಗಳಲ್ಲಿ ಪೂರ್ವಾನುಮತಿ ಪಡೆದ ಮದುವೆಗಳಿಗೆ ಅವಕಾಶ ನೀಡಲಾಗಿದೆ.
ಸೋಂಕು ಹರಡದಂತೆ, ಸಾರ್ವಜನಿಕ ಆರೋಗ್ಯ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಎರಡು ದಿನ ಸಂಪೂರ್ಣ ಲಾಕ್ಡೌನ್ ಘೋಷಿಸಲಾಗುತ್ತಿದೆ ಎಂದು ಡಿಸಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.