Breaking News

ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ವಿಚಾರಣೆ


ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಚಾರಣೆಗಾಗಿ ಬುಧವಾರ ಸಿಬಿಐ ಮುಂದೆ ಹಾಜರಾದರು. ಆದರೆ, ಅಗಲಿದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಅನುಮತಿ ಕೋರಿದ ಹಿನ್ನೆಲೆಯಲ್ಲಿ ಕೇವಲ 1 ಗಂಟೆ ಕಾಲ ಮಾತ್ರ ವಿಚಾರಣೆ ನಡೆಸಲಾಯಿತು.

ಮೊದಲೇ ನೋಟಿಸ್ ನೀಡಿದ್ದರಿಂದ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಸಿಬಿಐ ಕಚೇರಿಗೆ ಡಿಕೆ ಶಿವಕುಮಾರ್ ತೆರಳಿ ವಿಚಾರಣೆಗೆ ಹಾಜರಾದರು. ವಿಚಾರಣೆಗೂ ಮುನ್ನ ಸಿಬಿಐ ಅಧಿಕಾರಿಗಳ ಬಳಿ ಶಿವಕುಮಾರ್ ಅವರು ಕಾಂಗ್ರೆಸ್ ನಾಯಕ ಅಹ್ಮತ್ ಪಟೇಲ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಬೇಕಿರುವ ಕಾರಣ ಆದಷ್ಟು ಬೇಗ ವಿಚಾರಣೆ ಮುಗಿಸಬೇಕೆಂದು ಮನವಿ ಮಾಡಿಕೊಂಡರು. ಹೀಗಾಗಿ 1 ಗಂಟೆಯಲ್ಲಿ ಹೇಳಿಕೆ ದಾಖಲಿಸಿಕೊಂಡು ಕಳುಹಿಸಿಕೊಟ್ಟರು.

ಅಲ್ಲದೇ, ದಾಖಲೆಗಳನ್ನು ಒದಗಿಸಲು ಸಮಯಾವಕಾಶ ಕೇಳಿದ್ದಾರೆಂದು ತಿಳಿದುಬಂದಿದೆ.

ಅಕ್ರಮ ಆಸ್ತಿ ಗಳಿಕೆ ಸಂಬಂಧ ಸಿಬಿಐ ಅಧಿಕಾರಿಗಳು ಇಡಿ ಮತ್ತು ಐಟಿ ಸೇರಿದಂತೆ ಇತರೆ ಮೂಲಗಳಿಂದ ದಾಖಲೆ ತರಿಸಿಕೊಂಡು ಮಾಹಿತಿ ಕರೆ ಹಾಕಿದೆ.

ಡಿಕೆಶಿ ನಿವಾಸದ ಮೇಲೆ ದಾಳಿ ನಡೆಸಿದಾಗ ಕೆಲವು ದಾಖಲೆ ಜಪ್ತಿ ಮಾಡಲಾಗಿದೆ. ಎಲ್ಲಾ ದಾಖಲೆಗಳನ್ನು ತಾಳಿ ಹಾಕಿ ಪರಿಶೀಲನೆ ನಡೆಸಲಾಗಿದೆ. ಈ ಬಗ್ಗೆ ಶಿವಕುಮಾರ್ ಅವರನ್ನು ಪ್ರಶ್ನಿಸಲು ಸಿಬಿಐ ಅಧಿಕಾರಿಗಳು ತಯಾರಿ ನಡೆಸಿದ್ದರು. ಆದರೆ, ವಿಚಾರಣೆ ಸರಿಯಾಗಿ ನಡೆಯದ ಕಾರಣ ಮತ್ತೊಮ್ಮೆ ನೋಟಿಸ್ ಜಾರಿ ಕೂಲಂಕಷ ವಿಚಾರಣೆ ನಡೆಸಲು ಸಿಬಿಐ ಮುಂದಾಗಿದೆ ಎಂದು ಹೇಳಲಾಗಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ರೈತರ ಖಾತೆಗಳಿಗೆ ಪರಿಹಾರವನ್ನು ಜಮೆ ಮಾಡಿ; ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ : ಕಳೆದ ಆಗಷ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೀಡಾಗಿರುವ ರೈತರ ಬೆಳೆಗಳಿಗೆ ಪರಿಹಾರ ಮೊತ್ತವನ್ನು ವಿತರಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ