ಬೆಂಗಳೂರು,ಜೂನ್ 10: ರಾಜ್ಯದ ನಾಲ್ಕು ಸ್ಥಾನಗಳ ವಿಧಾನ ಪರಿಷತ್ ಚುನಾವಣೆ ಜೂನ್ 13ರಂದು ನಡೆಯಲಿದ್ದು. ಎರಡು ಪದವೀಧರ ಕ್ಷೇತ್ರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ನಡೆಯಲಿದ್ದು ಜೂನ್ 13ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.ಜೂನ್ 13 ಸೋಮವಾದಂದು ಕರ್ನಾಟಕ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು. ಶಿಕ್ಷಕರು ಮತ್ತು ಪಧವೀಧರರು ಮತದಾನವನ್ನು ಮಾಡುವ ಸಲುವಾಗಿ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಲಾಗಿದೆ.
ಯಾವ ಯಾವ ಜಿಲ್ಲೆಯಲ್ಲಿ ರಜೆ ಸಿಗಲಿದೆ..?
*ಕರ್ನಾಟಕ ವಾಯುವ್ಯ ಪದವೀಧರರ ಕ್ಷೇತ್ರ – ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು.
*ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ – ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು.
*ಕರ್ನಾಟಕ ವಾಯುವ್ಯ ಕ್ಷೇತ್ರ ಶಿಕ್ಷಕರ ಕ್ಷೇತ್ರ- ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು.
*ಕರ್ನಾಟಕ ಪಶ್ಚಿಮ ಕ್ಷೇತ್ರ ಶಿಕ್ಷಕರ ಕ್ಷೇತ್ರ- ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು.
ಕರ್ನಾಟಕದ ವಿಜಯಪುರ, ಬಾಗಲಕೋಟೆ , ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ , ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗಳು ನಡೆಯುತ್ತಿದ್ದು ಮತದಾನದ ಅನೂಕೂಲಕ್ಕಾಗಿ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ.
ರಾಜ್ಯಪಾಲರ ಆದೇಶನುಸಾರ ಏನಿದೆ..?
ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರದ ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ Establishmentನಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತಚಲಾಯಿಸಲಿರುವ ಮತದರರಿಗೆ ದಿನಾಂಕ 13.06.2022 ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಅಪೇಕ್ಷಾ ಸತೀಶ್ ಪವಾರ್ ರವವರು ರಾಜ್ಯಪಾಲರ ಆಜ್ಞಾನುಸಾರ ಆದೇಶವನ್ನು ಹೊರಡಿಸಿದ್ದಾರೆ.