Breaking News

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮೇ 10 ರಂದು ಚುನಾವಣೆ, 13 ಕ್ಕೆ ಫಲಿತಾಂಶ!


ನವದೆಹಲಿ: ಹದಿನಾರನೇ ವಿಧಾನಸಭೆ ಕರ್ನಾಟಕ ರಾಜ್ಯ ವಿಧಾನಸಭೆಗೆ ಇಂದು ದಿನಾಂಕವನ್ನು ನಿಗದಿ ಮಾಡಲಾಗಿದೆ. ಒಟ್ಟು ಒಂದೇ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಿದರು.

 

ಮೊದಲ ಹಂತದ ಚುನಾವಣಾ ಪ್ರಕ್ರಿಯೆ ವಿವರ ಹೀಗಿದೆ

 

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: 20 ಏಪ್ರಿಲ್‌

 

ನಾಮಪತ್ರ ಪರಿಶೀಲನೆ ಕೊನೆಯ ದಿನ: 23 ಏಪ್ರಿಲ್‌

 

ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನ: ಏಪ್ರಿಲ್‌ 24

 

ಮತದಾನ ನಡೆಯುವ ದಿನಾಂಕ: 10 ಮೇ

 

ಮೇ 13 ಕ್ಕೆ ಫಲಿತಾಂಶ

 

224 ವಿಧಾನಸಭಾ ಕ್ಷೇತ್ರಗಳಿದ್ದು, ಪರಿಶಿಷ್ಟ ಜಾತಿಗೆ 36 ಮತ್ತು ಪರಿಶಿಷ್ಟ ಪಂಗಡಕ್ಕೆ 15 ಕ್ಷೇತ್ರಗಳನ್ನು ಮೀಸಲಿಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ 5,21,76,579 ಕೋಟಿ ಮತದಾರರಿದ್ದಾರೆ. ಕರ್ನಾಟಕದಲ್ಲಿ ಒಟ್ಟು ಮತದಾರರ ಸಂಖ್ಯೆ 5,21,73,599 ಇದೆ. ಈ ಪೈಕಿ ಪುರುಷ ಮತದಾರರ ಸಂಖ್ಯೆ – 2,62,42,561 ಹಾಗೂ ಮಹಿಳಾ ಮತದಾರರ ಸಂಖ್ಯೆ 2,59,26,319 ಇದೆ. ರಾಜ್ಯದಲ್ಲಿ ಅಂದಾಜು 4,699 ತೃತೀಯ ಲಿಂಗಿಗಳಿದ್ದು, ಮೊದಲ ಬಾರಿ ಮತದಾನ ಮಾಡುವವರ ಸಂಖ್ಯೆ (18+) – 9,17,241ಇದೆ ಒಟ್ಟು ಮತಗಟ್ಟೆಗಳು -58,282 ಇವೆ ಈ ಪೈಕಿ ನಗರ ಪ್ರದೇಶದಲ್ಲಿ 24,063 ಇವೆ. ಮಹಿಳೆಯರಿಂದ ನಿರ್ವಹಣೆ ಮಾಡುವ ಮತಗಟ್ಟೆಗಳ ಸಂಖ್ಯೆ 1320 ಹಾಗೂ ಗ್ರಾಮೀಣ ಭಾಗದಲ್ಲಿ ಇರುವ ಮತಗಟ್ಟೆಗಳು 34,219 ಹಾಗೂ ಮಾದರಿ ಮತಗಟ್ಟೆಗಳ ಸಂಖ್ಯೆ 240 ಇವೆ.

 

ಇದೇ ಮೊದಲ ಬಾರಿಗೆ 80 ವರ್ಷ ಅದಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನ ಮತದಾರರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. . ಮತದಾನ ಕೇಂದ್ರಗಳಲ್ಲಿ ಇವರಿಗೆ ವಿಶೇಷ ಸೌಲಭ್ಯ ಒದಗಿಸಲಾಗುವುದು. ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ 12,15,763 ಮಂದಿ ಮತದಾರರಿದ್ದಾರೆ. 16,976 ಮಂದಿ 100 ವರ್ಷ ಮೇಲ್ಪಟ್ಟವರಿದ್ದಾರೆ. 5.55 ಲಕ್ಷ ಅಂಗವಿಕಲರಿದ್ದು, ಈ ಪೈಕಿ ಮತದಾನ ಕೇಂದ್ರಕ್ಕೆ ಬರಲಾಗದೆ ಮನೆಯಲ್ಲೇ ಮತದಾನ ಬಯಸುವವರಿಗೆ ಆಯೋಗ ಸೌಲಭ್ಯ ಕಲ್ಪಿಸಲಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ