ಸ್ಯಾಂಡಲ್ವುಡ್ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ.
ಪೊಗರು ಚಿತ್ರದ ಶೂಟಿಂಗ್ ಪೂರ್ಣಗೊಳಿಸಿದ ನಿರ್ದೇಶಕ ನಂದಾ ಕಿಶೋರ್ ಅವರು ಪ್ರಸ್ತುತ ಪೋಸ್ಟ್ ಪ್ರೊಡೆಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನು ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ನಟಿಸಿರುವ ಈ ಚಿತ್ರವನ್ನು ಬಿಡುಗಡೆ ಮಾಡಲು ನಿರ್ದೇಶಕರು ಎರಡು ದಿನಾಂಕಗಳನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ.
“ಪೊಗರು ಚಿತ್ರವನ್ನು ಡಿಸೆಂಬರ್ 25 ಅಥವಾ ಜನವರಿ 14ರಂದು ಬಿಡುಗಡೆ ಮಾಡಲು ಉದ್ದೇಶಿಸಿದ್ದೇನೆ ಎಂದು ನಂದಾ ಕಿಶೋರ್ ಹೇಳಿದ್ದಾರೆ. “ಈ ಸಾಂಕ್ರಾಮಿಕ ಪರಿಸ್ಥಿತಿ ಚಿತ್ರರಂಗವನ್ನು ಸ್ಥಗಿತಗೊಳಿಸಿದೆ. ಆದರೆ ಇದೀಗ ಮತ್ತೆ ಪ್ರಾರಂಭಿಸಲು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ.
ಪ್ರಸ್ತುತ ಪರಿಸ್ಥಿತಿಯಲ್ಲಿ ಯಾರಾದರೂ ಒಬ್ಬರು ಧೈರ್ಯ ಮಾಡಿ ಒಂದು ಹೆಜ್ಜೆ ಮುಂದಿಡಬೇಕಿದೆ. ಆಗ ಮಾತ್ರ ಚಿತ್ರರಂಗ ಮತ್ತೆ ಚೇತರಿಕೆ ಪಡೆಯುತ್ತದೆ ಎಂದು ಹೇಳಿದ್ದಾರೆ.
ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ಬಿ.ಕೆ.ಗಂಗಾಧರ್ ನಿರ್ಮಿಸಿದ್ದಾರೆ. ಧ್ರುವ ಸರ್ಜಾ ಚಿತ್ರದಲ್ಲಿ ಮಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಆಕ್ಷನ್ ಪ್ರಿನ್ಸ್ ಜೊತೆ ಮೊದಲ ಬಾರಿಗೆ ಸ್ಕ್ರೀನ್ ಸ್ಪೇಸ್ ಹಂಚಿಕೊಳ್ಳುತ್ತಿರುವ ರಶ್ಮಿಕಾ ಅವರು ಪ್ರಾಧ್ಯಾಪಕರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಕ್ಷನ್ ಕಮರ್ಷಿಯಲ್ ಎಂಟರ್ಟೈನರ್ನಲ್ಲಿ ಧನಂಜಯ್ ಸೇರಿದಂತೆ ಮಯೂರಿ, ರವಿಶಂಕರ್, ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಜೊತೆಗೆ ಅಂತಾರಾಷ್ಟ್ರೀಯ ಬಾಡಿಬಿಲ್ಡರ್ಗಳಾದ ಕೈ ಗ್ರೀನ್, ಮೋರ್ಗನ್ ಅಸ್ಟೆ, ಜೋಹಾನ್ ಲ್ಯೂಕಾಸ್ ಮತ್ತು ಜೋ ಲಿಂಡರ್ ಅವರು ಅಭಿನಯಿಸಿದ್ದಾರೆ. ಇವರೆಲ್ಲರೂ ಪ್ರಮುಖ ಕ್ಲೈಮ್ಯಾಕ್ಸ್ ಸನ್ನಿವೇಶಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದು ಚಿತ್ರದ ಮುಖ್ಯಾಂಶಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ.
ಪೊಗಾರು ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಿದ್ದು ಅದಾಗಲೇ ಕರಾಬು ಸಾಂಗ್ ಮಾಸ್ ಹಿಟ್ ಆಗಿದೆ.
CKNEWSKANNADA / BRASTACHARDARSHAN CK NEWS KANNADA